ಹೊಸಕೋಟೆ ಸೇರಿದಂತೆ ರಾಜ್ಯದ ವಿವಿಧ ಕಡೆಗಳಲ್ಲಿ ಬಿಜೆಪಿ ಕಾರ್ಯಕರ್ತರ ಮೇಲಿನ ಹಲ್ಲೆ ಮಾಡುವ ಪ್ರವೃತ್ತಿ ಹೆಚ್ಚಾಗಿದೆ. ಹೊಸಕೋಟೆಯಲ್ಲಿ ಒಬ್ಬ ಕಾರ್ಯಕರ್ತರನ್ನು ಹತ್ಯೆ ಮಾಡಿದ್ದು, ಇತರೆ ಇಬ್ಬರ ಮೇಲೆ ತೀವ್ರವಾಗಿ ಹಲ್ಲೆ ಮಾಡಲಾಗಿದೆ ಎಂದು ಅತ್ಯಂತ ಖಂಡನೀಯ: ನಳಿನ್ ಕುಮಾರ್ ಕಟೀಲ್
ಬೆಂಗಳೂರು(ಮೇ.16): ಕಾಂಗ್ರೆಸ್ ಪಕ್ಷವು ಬಹುಮತ ಗಳಿಸಿದ ತಕ್ಷಣ ರಾಜ್ಯದ ವಿವಿಧ ಕಡೆಗಳಲ್ಲಿ ‘ಹಿಂಸಾ ಗ್ಯಾರಂಟಿ ಸ್ಕೀಂ’ ಜಾರಿಗೆ ತಂದಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಹೊಸಕೋಟೆ ಸೇರಿದಂತೆ ರಾಜ್ಯದ ವಿವಿಧ ಕಡೆಗಳಲ್ಲಿ ಬಿಜೆಪಿ ಕಾರ್ಯಕರ್ತರ ಮೇಲಿನ ಹಲ್ಲೆ ಮಾಡುವ ಪ್ರವೃತ್ತಿ ಹೆಚ್ಚಾಗಿದೆ. ಹೊಸಕೋಟೆಯಲ್ಲಿ ಒಬ್ಬ ಕಾರ್ಯಕರ್ತರನ್ನು ಹತ್ಯೆ ಮಾಡಿದ್ದು, ಇತರೆ ಇಬ್ಬರ ಮೇಲೆ ತೀವ್ರವಾಗಿ ಹಲ್ಲೆ ಮಾಡಲಾಗಿದೆ ಎಂದು ಅತ್ಯಂತ ಖಂಡನೀಯ ಎಂದು ಅವರು ಪ್ರಕಟಣೆಯಲ್ಲಿ ಹೇಳಿದ್ದಾರೆ.
ಹೀನಾಯ ಸೋಲು: ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಕಟೀಲ್ ಶೀಘ್ರ ರಾಜೀನಾಮೆ?
ಕಾಂಗ್ರೆಸ್ ನಾಯಕರು ಇಂತಹ ಹಿಂಸಾಚಾರದ ಪ್ರವೃತ್ತಿಗೆ ಆಸ್ಪದ ಕೊಡಬಾರದು. ರಾಜ್ಯದ ವಿವಿಧ ಕಡೆಗಳಲ್ಲಿ ದೇಶದ್ರೋಹಿ ಚಟುವಟಿಕೆಗಳು ಹೆಚ್ಚಾಗಿವೆ. ಇದನ್ನು ತಡೆಯಬೇಕು. ಪಾಕಿಸ್ತಾನದ ಧ್ವಜ ಹಾರಿಸುವುದು ದೇಶದ್ರೋಹದ ಚಟುವಟಿಕೆಯಾಗಿದ್ದು, ಇದನ್ನು ನಿಯಂತ್ರಿಸಬೇಕು. ಯಾವುದೇ ಕಾರಣಕ್ಕೂ ಇಂತಹ ಹಿಂಸಾಚಾರದ ದೇಶದ್ರೋಹಿ ಚಟುವಟಿಕೆಗಳನ್ನು ಸಹಿಸಲು ಸಾಧ್ಯವಿಲ್ಲ ಎಂದು ತಿಳಿಸಿದ್ದಾರೆ. ಕಾಂಗ್ರೆಸ್ ಮುಖಂಡರು ತಮ್ಮೊಳಗಿನ ಭಿನ್ನಮತವನ್ನು ಬದಿಗಿಟ್ಟು ತಾವು ಈಗಾಗಲೇ ಪ್ರಣಾಳಿಕೆಯಲ್ಲಿ ನೀಡಿರುವ ಭರವಸೆಗಳನ್ನು ಈಡೇರಿಸಲು ಮುಂದಾಗಬೇಕು ಎಂದಿದ್ದಾರೆ.
