ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ ಸಚಿವ ಸ್ಥಾನ ಕೈತಪ್ಪಿರುವುದರಿಂದ ದೆಹಲಿಯಲ್ಲಿ ಬೀಡು ಬಿಟ್ಟು ಕೇಂದ್ರ ನಾಯಕರುಗಳನ್ನ ಭೇಟಿ ಮಾಡಿ ಚರ್ಚೆ ಮಾಡುತ್ತಿದ್ದಾರೆ. ಇದರ ಮಧ್ಯೆ ವಿಧಾನಸಭಾಧ್ಯಕ್ಷರು ಸಹ ದಿಲ್ಲಿಯಲ್ಲಿದ್ದಾರೆ.

ನವದೆಹಲಿ, (ಜ.21): ವಿಧಾನಸಭೆ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ದೆಹಲಿಯಲ್ಲಿ ಇಂದು (ಗುರುವಾರ) ವಿವಿಧ ನಾಯಕರುಗಳನ್ನು ಭೇಟಿಯಾಗಿರುವುದು ಭಾರೀ ಕುತೂಹಲ ಮೂಡಿಸಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಮೊದಲು ಕೇಂದ್ರ ರಸಾಯನಿಕ ಮತ್ತು ರಸಗೊಬ್ಬರ ಸಚಿವ ಸದಾನಂದ ಗೌಡರವರನ್ನು ಭೇಟಿ ಮಾಡಿದರು. ಬಳಿಕ ಲೋಕಸಭೆಯ ಸಭಾಧ್ಯಕ್ಷ ಓಂ ಬಿರ್ಲಾ ಅವರನ್ನು ಭೇಟಿಯಾದರು.

ಇದ್ದಕ್ಕಿದ್ದಂತೆ ಡಿಲ್ಲಿ ನಾಯಕರನ್ನು ಭೇಟಿ ಮಾಡಿದ ರೇಣುಕಾ.. ಏನಂತೆ!

ನವದೆಹಲಿಯಲ್ಲಿ ಓಂಬಿ ರ್ಲಾ ಜೊತೆ ಕಾಗೇರಿ ಸಮಾಲೋಚನೆ ನಡೆಸಿದರು. ಇಬ್ಬರು ಗಣ್ಯರು ಸಂಸದೀಯ ವಿಷಯಗಳ ಬಗ್ಗೆ ಪರಸ್ಪರ ಚರ್ಚೆ ನಡೆಸಿದ್ದಾರೆ.

ಇನ್ನು ಈ ಬಗ್ಗೆ ಫೇಸ್​ಬುಕ್​​ನಲ್ಲಿ ಮಾಹಿತಿ ಹಂಚಿಕೊಂಡಿರುವ ಕಾಗೇರಿ.. ಇಂದು ನವದೆಹಲಿಯಲ್ಲಿ ಮಾನ್ಯ ಲೋಕಸಭಾ ಅಧ್ಯಕ್ಷರಾದ ಶ್ರೀ ಓಂ ಬಿರ್ಲಾ ಅವರನ್ನು ಭೇಟಿ ಮಾಡಿ ಸಂಸದೀಯ ವಿಷಯಗಳ ಕುರಿತಂತೆ ಚರ್ಚಿಸಿದೆನು ಎಂದು ಬರೆದುಕೊಂಡಿದ್ದಾರೆ.

ಇನ್ನು ಸದಾನಂದಗೌಡ ಅವರನ್ನ ಭೇಟಿಯಾಗಿರುವ ಬಗ್ಗೆ ಯಾವುದೇ ರೀತಿಯಾದ ಮಾಹಿತಿ ಹಂಚಿಕೊಂಡಿಲ್ಲ.