ರಾಜ್ಯದಲ್ಲಿ ಕೊರೋನಾ ಸೋಂಕು ಮಿತಿ ಮೀರಿದೆ. ದಿನದಿನಕ್ಕೂ ಅತ್ಯಧಿಕ ಸೋಂಕಿತರು ಪತ್ತೆಯಾಗುತ್ತಿದ್ದಾರೆ. ಈ ನಿಟ್ಟಿನಲ್ಲಿ ಚುನಾವಣೆಯೊಂದನ್ನು ಮುಂದೂಡಿ ಆದೇಶ ನಿಡಲಾಗಿದೆ. 

ಬೆಂಗಳೂರು(ಏ.24):  ಕೊರೋನಾ ಸೋಂಕು ಹಿನ್ನೆಲೆಯಲ್ಲಿ ಒಕ್ಕಲಿಗರ ಸಂಘದ ಚುನಾವಣೆಯನ್ನು ಅನಿರ್ದಿಷ್ಟಾವಧಿಗೆ ಮುಂದೂಡಿರುವುದಾಗಿ ರಾಜ್ಯ ಸಹಕಾರ ಇಲಾಖೆ ತಿಳಿಸಿದೆ.

ಒಕ್ಕಲಿಗರ ಸಂಘಕ್ಕೆ ಮೇ 16ರಂದು ಚುನಾವಣೆ ನಡೆಯಬೇಕಿತ್ತು. ಆದರೆ, ರಾಜ್ಯದಲ್ಲಿ ಕೊರೋನಾ ಎರಡನೇ ಅಲೆ ತೀವ್ರಗತಿಯಲ್ಲಿ ವ್ಯಾಪಿಸುತ್ತಿದೆ. 

ಪೂರ್ಣಾ​ವಧಿ ಆಡ​ಳಿ​ತಕ್ಕೆ ಒಕ್ಕ​ಲಿಗ​ರಿಗೆ ಶಾಪವಿದೆ : ಇವರದ್ದೆಲ್ಲಾ ಅರ್ಧದ ಅಧಿಕಾರ ..

ಪರಿಣಾಮ ಸಾರ್ವಜನಿಕರು, ಸಂಘದ ಸದಸ್ಯರು ಮತ್ತು ಚುನಾವಣಾ ಪ್ರಕ್ರಿಯೆಲ್ಲಿ ಕಾರ್ಯನಿರ್ವಹಿಸುವ ಅಧಿಕಾರಿ ಮತ್ತು ಸಿಬ್ಬಂದಿಯ ಆರೋಗ್ಯದ ಹಿತದೃಷ್ಟಿಯಿಂದ ಚುನಾವಣೆ ಮುಂದೂಡಲಾಗಿದೆ.

ಕೊರೋನಾ ಸೋಂಕು ನಿಯಂತ್ರಣಕ್ಕೆ ಬಂದ ನಂತರ ಚುನಾವಣೆ ನಡೆಸಲು ತೀರ್ಮಾನಿಸಲಾಗಿದೆ ಎಂದು ಸಹಕಾರ ಇಲಾಖೆ ಪ್ರಕಟಣೆ ತಿಳಿಸಿದೆ.