ನಾನು ಸಹ ಈ ಬಾರಿ ಲೋಕಸಭೆಗೆ ಸ್ಪರ್ಧಿಸಲು ಇಚ್ಛಿಸಿದ್ದೇನೆ. ಹೈಕಮಾಂಡ್ ಒಪ್ಪಿ ಟಿಕೆಟ್‌ ನೀಡಿದರೆ ಸ್ಪರ್ಧಿಸುತ್ತೇನೆ ಎಂದು ಸಹಕಾರ ಸಚಿವ ಕೆ.ಎನ್.ರಾಜಣ್ಣ ತಿಳಿಸಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕಸಭೆಯನ್ನು ಒಮ್ಮೆ ನೋಡುವ ಆಸೆಯಿದೆ.

ತುಮಕೂರು (ನ.15): ನಾನು ಸಹ ಈ ಬಾರಿ ಲೋಕಸಭೆಗೆ ಸ್ಪರ್ಧಿಸಲು ಇಚ್ಛಿಸಿದ್ದೇನೆ. ಹೈಕಮಾಂಡ್ ಒಪ್ಪಿ ಟಿಕೆಟ್‌ ನೀಡಿದರೆ ಸ್ಪರ್ಧಿಸುತ್ತೇನೆ ಎಂದು ಸಹಕಾರ ಸಚಿವ ರಾಜಣ್ಣ ತಿಳಿಸಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕಸಭೆಯನ್ನು ಒಮ್ಮೆ ನೋಡುವ ಆಸೆಯಿದೆ. ಇಲ್ಲಿವರೆಗೂ ರಾಜ್ಯ ರಾಜಕಾರಣದ ಅನೇಕ ಮಜುಲುಗಳ ಅನುಭವವಾಗಿದೆ, ಅನೇಕ ಸ್ಥಾನಮಾನಗಳು ದೊರೆತಿವೆ. ಇನ್ನು ಲೋಕಸಭೆಗೆ ಒಮ್ಮೆ ಕಾಲಿರಿಸುವ ಉಮೇದಿ ಇದೆ. ಇದಕ್ಕೆ ಪೂರಕವಾಗಿ ವರಿಷ್ಠರು ಒಪ್ಪಿ ಟಿಕೆಟ್‌ ನೀಡುವುದಾದರೆ ಸ್ಪರ್ಧಿಸುವುದಾಗಿ ಇಂಗಿತ ವ್ಯಕ್ತಪಡಿಸಿದರು.

ಬಡ ಮಕ್ಕಳ ವಿದ್ಯಾಭ್ಯಾಸಕ್ಕೆ ಒತ್ತು ನೀಡಿ: ಸರ್ಕಾರದ ಜೊತೆಗೆ ಸಂಘ ಸಂಸ್ಥೆಗಳು ಬಡ ಮಕ್ಕಳ ವಿದ್ಯಾಭ್ಯಾಸಕ್ಕೆ ನೆರವಾದರೆ ಆ ಮಕ್ಕಳು ಸಮಾಜದ ಆಸ್ತಿಯಾಗುತ್ತಾರೆ, ವಿದ್ಯೆ ವಂಚಿತ ಮಕ್ಕಳು ಸಮಾಜಕ್ಕೆ ಹೊರೆಯಾಗುತ್ತಾರೆ ಎಂದು ಸಹಕಾರ ಸಚಿವ ಕೆ.ಎನ್. ರಾಜಣ್ಣ ಹೇಳಿದರು. ನಗರದ ಬಡ್ಡಿಹಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಜಿಂದಾಲ್ ಅಲ್ಯೂಮಿನಿಯಂ ಸಂಸ್ಥೆಯವರು ನಿರ್ಮಿಸಿಕೊಟ್ಟಿರುವ ನೂತನ ಶಾಲಾ ಕೊಠಡಿಗಳನ್ನು ಉದ್ಘಾಟಿಸಿ ಮಾತನಾಡಿದ ಸಚಿವರು, ವಿದ್ಯೆ ಸಾಧಕನ ಸ್ವತ್ತೇ ಹೊರತು ಸೋಮಾರಿಯ ಸ್ವತ್ತಲ್ಲ, ಮಕ್ಕಳ ಬದುಕು ರೂಪಿಸುವ ಶಿಕ್ಷಣಕ್ಕೆ ಆದ್ಯತೆ ನೀಡಬೇಕು. ಮುಂದಿನ ಪೀಳಿಗೆಗೆ ಶಿಕ್ಷಣವನ್ನು ಆಸ್ತಿ ರೂಪದಲ್ಲಿ ನೀಡಬೇಕು ಎಂದರು.

ಮಂಗಳೂರು ಎಮ್ಮೆಕೆರೆಯಲ್ಲಿ ಒಲಿಂಪಿಕ್ಸ್‌ ದರ್ಜೆಯ ಈಜುಕೊಳ ಸಿದ್ಧ: ಸ್ಪೀಕರ್ ಯು.ಟಿ.ಖಾದರ್‌

ಎಲ್ಲಾ ಮಕ್ಕಳಿಗೂ ದೇವರು ಸಮಾನ ಬುದ್ಧಿಶಕ್ತಿ ಕೊಟ್ಟಿರುತ್ತಾನೆ. ಆ ಮಕ್ಕಳಲ್ಲಿರುವ ಬುದ್ಧಿಶಕ್ತಿ, ಪ್ರತಿಭೆಯನ್ನು ಅರಳಿಸಲು ಶಿಕ್ಷಕರು, ಪೋಷಕರು ಆದ್ಯತೆ ನೀಡಬೇಕು. ಮಕ್ಕಳು ಶಿಸ್ತು, ಶ್ರದ್ಧೆಯಿಂದ ಅಭ್ಯಾಸ ಮಾಡಿದರೆ ಯಶಸ್ಸು ಗಳಿಸಿ ಉನ್ನತ ಸ್ಥಾನಮಾನ ಪಡೆಯಬಹುದು. ಈಗ ವಿದ್ಯಾಭ್ಯಾಸಕ್ಕೆ ಹೆಚ್ಚಿನ ಸೌಕರ್ಯಗಳಿವೆ. ಮಕ್ಕಳು ಶಾಲೆಯಲ್ಲಿ ಅಭ್ಯಾಸ ಮಾಡುವಷ್ಟೇ ಮುಖ್ಯವಾಗಿ ಅವರು ಶಾಲೆಗೆ ಗೈರುಹಾಜರಾಗದಂತೆ ನೋಡಿಕೊಳ್ಳಬೇಕು. ಪರೀಕ್ಷೆಯಲ್ಲಿ ಪಡೆಯುವ ಅಂಕಗಳಷ್ಟೇ ಶಾಲೆಯ ಹಾಜರಾತಿಯೂ ಮುಖ್ಯವಾಗುತ್ತದೆ. ಮಕ್ಕಳು ಶಾಲೆಗೆ ಗೈರು ಹಾಜರಾಗದಂತೆ ಶಿಕ್ಷಕರು, ಇಲಾಖೆ ಅಧಿಕಾರಿಗಳು ಪೋಷಕರಿಗೆ ಮನವರಿಕೆ ಮಾಡಿಕೊಡಬೇಕು ಎಂದು ಸಚಿವ ಕೆ.ಎನ್.ರಾಜಣ್ಣ ಸಲಹೆ ಮಾಡಿದರು.

ಕಾಡಂಚಿನ ಹಳ್ಳಿಗಳಿಗೆ ಹಗಲಲ್ಲೇ 3 ಫೇಸ್‌ ವಿದ್ಯುತ್‌ ಕೊಡಿ: ಸಚಿವ ಈಶ್ವರ ಖಂಡ್ರೆ

ಬಡ್ಡಿಹಳ್ಳಿ ಸರ್ಕಾರಿ ಶಾಲೆಯ ಈ ಮೊದಲಿದ್ದ ಕಟ್ಟಡ ಮಳೆಗಾಲದಲ್ಲಿ ಜಲಾವೃತವಾಗಿ ವಿದ್ಯಾರ್ಥಿಗಳ ಕಲಿಕೆಗೆ ಸಮಸ್ಯೆಯಾಗುತ್ತಿತ್ತು. ಈ ಸಮಸ್ಯೆ ನಿವಾರಿಸಲು ಹೊಸ ಜಾಗದಲ್ಲಿ ಶಾಲೆ ಸ್ಥಾಪನೆಯಾಗಲು ಸಹಕರಿಸಿದರು. ಮಳೆಗಾಲದಲ್ಲಿ ನೀರು ಸಂಗ್ರಹವಾಗುವ ಜಾಗಗಳನ್ನು ರಕ್ಷಣೆ ಮಾಡಬೇಕು. ನಗರ ಪ್ರದೇಶಗಳಲ್ಲಿ ಕೆರೆಕಟ್ಟೆಗಳನ್ನು ಮುಚ್ಚುವ ಪ್ರಯತ್ನ ನಡೆದಿದೆ. ಕಟ್ಟೆಗಳಲ್ಲಿ ನೀರು ಸಂಗ್ರಹವಾಗುವುದರಿಂದ ಅಂತರ್ಜಲ ಮಟ್ಟ ಸುಧಾರಿಸುತ್ತದೆ ಎಂದರು. ಬಡ್ಡಿಹಳ್ಳಿ ಶಾಲೆಗೆ ಕೊಠಡಿಗಳನ್ನು ನಿರ್ಮಿಸಿಕೊಟ್ಟ ಜಿಂದಾಲ್ ಸಂಸ್ಥೆಯ ಅಧ್ಯಕ್ಷ ಪ್ರಗುಣ್ ಜಿಂದಾಲ್ ಸೇವೆ ಶ್ಲಾಘಿಸಿದರು.