Asianet Suvarna News Asianet Suvarna News

ಕರ್ನಾಟಕದ 28 ಕ್ಷೇತ್ರಗಳನ್ನೂ ನಾವೇ ಗೆಲ್ಲಲಿದ್ದೇವೆ: ವಿಜಯೇಂದ್ರ

ರಾಜ್ಯದಲ್ಲಿ ಬಿಜೆಪಿ 21 ಸ್ಥಾನಗಳನ್ನು ಗೆಲ್ಲಲಿದೆ ಎಂಬ ಸರ್ವೇ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿ, ಸರ್ವೇಗಳು ಪೂರ್ಣ ಪ್ರಮಾಣದಲ್ಲಿ ಸತ್ಯವಲ್ಲ. ರಾಜ್ಯದಲ್ಲಿ ಬಿಜೆಪಿ ಪರ ವಾತಾವರಣವಿದ್ದು, ಕೇಂದ್ರದಲ್ಲಿ ಮತ್ತೊಮ್ಮೆ ಬಿಜೆಪಿ ಅಧಿಕಾರಕ್ಕೆ ಬರಬೇಕು ಎನ್ನುವುದು ಜನರ ಅಭಿಪ್ರಾಯ. ಈ ಬಾರಿ 28 ಸ್ಥಾನಗಳನ್ನೂ ಗೆಲ್ಲಲಿದ್ದೇವೆ. ಈಗಾಗಲೇ ನಾನು ರಾಜ್ಯದ 24 ಲೋಕಸಭಾ ಕ್ಷೇತ್ರಗಳಿಗೆ ಭೇಟಿ ನೀಡಿದ್ದೇನೆ. ಎಲ್ಲಾ ಕಡೆ ಬಿಜೆಪಿ ಹಾಗೂ ಮೋದಿ ಪರ ಅಲೆ ಇದೆ ಎಂದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ 

We are going to win all 28 Constituencies of Karnataka Says BY Vijayendra grg
Author
First Published Feb 10, 2024, 4:10 AM IST

ನವದೆಹಲಿ(ಫೆ.10):  ಮುಂಬರುವ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಪ್ರವಾಸ ಮಾಡುತ್ತಿದ್ದೇನೆ. ಈ ಬಾರಿ ನಾವು 28ಕ್ಕೆ 28 ಸ್ಥಾನಗಳನ್ನೂ ಗೆದ್ದು, ಹೊಸ ದಾಖಲೆ ನಿರ್ಮಾಣ ಮಾಡಲಿದ್ದೇವೆ. ಇದು ಉತ್ಪೇಕ್ಷೆ ಎನಿಸಬಹುದು, ಆದರೂ ಸತ್ಯ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ದೆಹಲಿಯಲ್ಲಿ ಶುಕ್ರವಾರ ವಿಜಯೇಂದ್ರ ಅವರು, ರಾಜ್ಯ ಲೋಕಸಭಾ ಚುನಾವಣೆ ಉಸ್ತುವಾರಿ, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಡಾ. ರಾಧಾ ಮೋಹನ್ ಅಗರವಾಲ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು. ಬಳಿಕ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾರನ್ನು ಅವರ ನಿವಾಸದಲ್ಲಿ ಭೇಟಿ ಮಾಡಿ, ರಾಜ್ಯಸಭೆ, ಲೋಕಸಭೆ ಚುನಾವಣೆ ಸೇರಿ ಹಲವು ವಿಚಾರಗಳ ಕುರಿತು ಅರ್ಧ ಗಂಟೆಗೂ ಹೆಚ್ಚು ಕಾಲ ಚರ್ಚೆ ನಡೆಸಿದರು. ನಂತರ, ಕೇಂದ್ರ ಸಚಿವ ಪ್ರಹ್ಲಾದ ಜೋಶಿಯವರ ಕಚೇರಿಯಲ್ಲಿ ಕರ್ನಾಟಕದ ಸಂಸದರು, ರಾಜ್ಯ ನಾಯಕರ ಜೊತೆ ಮಾತುಕತೆ ನಡೆಸಿದರು. ಕೇಂದ್ರ ಸಚಿವ ಜೋಶಿ, ಸಂಸದ ಪಿ.ಸಿ. ಮೋಹನ್, ಗದ್ದಿಗೌಡರ್, ಬಸನಗೌಡ ಪಾಟೀಲ್‌ ಯತ್ನಾಳ್ , ರಮೇಶ್ ಜಾರಕಿಹೊಳಿ ಈ ವೇಳೆ ಉಪಸ್ಥಿತರಿದ್ದರು.

'ಸಮೃದ್ಧ ಕರ್ನಾಟಕವೇ ಪ್ರಧಾನಿ ಮೋದಿ ಆದ್ಯತೆ': ಕಾಂಗ್ರೆಸ್ ಚಲೋ ದಿಲ್ಲಿ ವಿರುದ್ಧ ವಿಜಯೇಂದ್ರ ಕಿಡಿ!

ಭೇಟಿ ಬಳಿಕ, ಸುದ್ದಿಗಾರರ ಜೊತೆ ಅವರು ಮಾತನಾಡಿದರು. ರಾಜ್ಯದಲ್ಲಿ ಬಿಜೆಪಿ 21 ಸ್ಥಾನಗಳನ್ನು ಗೆಲ್ಲಲಿದೆ ಎಂಬ ಸರ್ವೇ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿ, ಸರ್ವೇಗಳು ಪೂರ್ಣ ಪ್ರಮಾಣದಲ್ಲಿ ಸತ್ಯವಲ್ಲ. ರಾಜ್ಯದಲ್ಲಿ ಬಿಜೆಪಿ ಪರ ವಾತಾವರಣವಿದ್ದು, ಕೇಂದ್ರದಲ್ಲಿ ಮತ್ತೊಮ್ಮೆ ಬಿಜೆಪಿ ಅಧಿಕಾರಕ್ಕೆ ಬರಬೇಕು ಎನ್ನುವುದು ಜನರ ಅಭಿಪ್ರಾಯ. ಈ ಬಾರಿ 28 ಸ್ಥಾನಗಳನ್ನೂ ಗೆಲ್ಲಲಿದ್ದೇವೆ. ಈಗಾಗಲೇ ನಾನು ರಾಜ್ಯದ 24 ಲೋಕಸಭಾ ಕ್ಷೇತ್ರಗಳಿಗೆ ಭೇಟಿ ನೀಡಿದ್ದೇನೆ. ಎಲ್ಲಾ ಕಡೆ ಬಿಜೆಪಿ ಹಾಗೂ ಮೋದಿ ಪರ ಅಲೆ ಇದೆ ಎಂದರು.

ಸೋಮಣ್ಣ ಅವರಿಗೆ ರಾಜ್ಯಸಭೆ ಸ್ಪರ್ಧೆಗೆ ಟಿಕೆಟ್‌ ನೀಡುವ ಕುರಿತು ಪ್ರತಿಕ್ರಿಯಿಸಿ, ಎಲ್ಲವೂ ಚರ್ಚೆಯಾಗಿದೆ. ವರಿಷ್ಠರು ತೀರ್ಮಾನ ಮಾಡುತ್ತಾರೆ ಎಂದರು. ಯತ್ನಾಳ್‌ ಭೇಟಿ ಬಗ್ಗೆ ಪ್ರತಿಕ್ರಿಯಿಸಿ, ಪ್ರಹ್ಲಾದ್ ಜೋಶಿಯವರ ಭೇಟಿ ವೇಳೆ ಯತ್ನಾಳ್ ಅವರನ್ನು ಭೇಟಿ ಮಾಡಿದೆ. ಇದಕ್ಕೆ ವಿಶೇಷ ಒತ್ತು ಕೊಡುವ ಅಗತ್ಯ ಇಲ್ಲ ಎಂದರು. ಸುಮಲತಾ ಸ್ಪರ್ಧೆ ಕುರಿತು ಪ್ರತಿಕ್ರಿಯಿಸಿ, ಅಮಿತ್ ಶಾ ಅವರ ಮೈಸೂರು ಭೇಟಿ ವೇಳೆ ಈ ಬಗ್ಗೆ ಚರ್ಚೆಯಾಗಲಿದೆ ಎಂದರು.

Latest Videos
Follow Us:
Download App:
  • android
  • ios