ನಾವು 20 ಲೋಕಸಭಾ ಕ್ಷೇತ್ರದಲ್ಲಿ ಗೆಲ್ಲುವುದು ಖಚಿತ: ಸಿಎಂ ಸಿದ್ದರಾಮಯ್ಯ
ನಾವು ನಡೆಸಿರುವ ಹಲವು ಸಮೀಕ್ಷೆಗಳಲ್ಲಿ ಮೈಸೂರು, ಚಾಮರಾಜನಗರ ಸೇರಿ 20 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲ್ಲುವುದು ಖಚಿತ ಎನ್ನುವ ವರದಿಗಳು ಬಂದಿವೆ. ಪಕ್ಷದ ಮುಖಂಡರು, ಕಾರ್ಯಕರ್ತರು ಒಗ್ಗಟ್ಟಿನಿಂದ ಕೆಲಸ ಮಾಡಿದರೆ ಕಾಂಗ್ರೆಸ್ ಪರವಾದ ಅಭೂತಪೂರ್ವ ಫಲಿತಾಂಶ ಬರಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಮೈಸೂರು (ಮಾ.25): ನಾವು ನಡೆಸಿರುವ ಹಲವು ಸಮೀಕ್ಷೆಗಳಲ್ಲಿ ಮೈಸೂರು, ಚಾಮರಾಜನಗರ ಸೇರಿ 20 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲ್ಲುವುದು ಖಚಿತ ಎನ್ನುವ ವರದಿಗಳು ಬಂದಿವೆ. ಪಕ್ಷದ ಮುಖಂಡರು, ಕಾರ್ಯಕರ್ತರು ಒಗ್ಗಟ್ಟಿನಿಂದ ಕೆಲಸ ಮಾಡಿದರೆ ಕಾಂಗ್ರೆಸ್ ಪರವಾದ ಅಭೂತಪೂರ್ವ ಫಲಿತಾಂಶ ಬರಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಮೈಸೂರು- ಕೊಡಗು ಮತ್ತು ಚಾಮರಾಜನಗರ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಭಾನುವಾರ ಆಯೋಜಿಸಿದ್ದ ಮೂರು ಜಿಲ್ಲೆಗಳ ವ್ಯಾಪ್ತಿಯ ಸಚಿವರು, ಮಾಜಿ ಸಚಿವರು, ಶಾಸಕರು, ಮಾಜಿ ಶಾಸಕರು, ಜಿಲ್ಲಾ ಮುಖಂಡರು, ನಿಗಮ, ಮಂಡಳಿಗಳ ಅಧ್ಯಕ್ಷರು, ಬ್ಲಾಕ್ ಅಧ್ಯಕ್ಷರು ಮತ್ತು ಪದಾಧಿಕಾರಿಗಳ ಸಭೆಯಲ್ಲಿ ಮಾತನಾಡಿದರು.
ಸಿಎಂ ಸಿದ್ದರಾಮಯ್ಯರಿಂದ ಡ್ರಾಮಾ, ಅವರಿಗಿದು ಶೋಭೆಯಲ್ಲ: ಬಿ.ವೈ.ವಿಜಯೇಂದ್ರ
ಮೈಸೂರು-ಕೊಡಗು ಮತ್ತು ಚಾಮರಾಜನಗರ ಎರಡೂ ಕಾಂಗ್ರೆಸ್ ಕ್ಷೇತ್ರಗಳು. ಈ ಕ್ಷೇತ್ರಗಳು ಮತ್ತೆ ನಮ್ಮ ಕೈಗೆ ಬರಲೇಬೇಕು. ಹಿಂದಿನ ಬಾರಿ ಕೆಲವು ಕಾರಣಗಳಿಂದಾಗಿ ಅತ್ಯಂತ ಕಡಿಮೆ ಮತಗಳಿಂದ ನಮಗೆ ಹಿನ್ನೆಡೆಯಾಗಿತ್ತು. ಆದರೆ ಈ ಬಾರಿ ಬಿಜೆಪಿ ಪರವಾದ ಯಾವ ಕಾರಣಗಳೂ ಇಲ್ಲ. ರಾಜ್ಯದಲ್ಲಿ ಬಿಜೆಪಿ ವಿರೋಧಿಯಾದ ಅಲೆ ಜೋರಾಗಿದೆ. ಬಿಜೆಪಿಯ ಬೆಲೆ ಏರಿಕೆಯಿಂದ ಸಂಕಷ್ಟಕ್ಕೆ ತುತ್ತಾಗಿದ್ದ ರಾಜ್ಯದ ಎಲ್ಲಾ ಕುಟುಂಬಗಳಿಗೆ ಕಾಂಗ್ರೆಸ್ ಗ್ಯಾರಂಟಿಗಳು ನೆಮ್ಮದಿ ತರಿಸಿವೆ ಎಂದರು.
ಹತ್ತು ವರ್ಷ ಅಧಿಕಾರ ಮಾಡಿದ ಮೋದಿ ಸರ್ಕಾರಕ್ಕೆ ಜನರಿಗೆ ತೋರಿಸಲು ಒಂದೇ ಒಂದು ಕೆಲಸವನ್ನೂ ಮಾಡಿಲ್ಲ. ಹೀಗಾಗಿ ಶ್ರೀರಾಮನ ಹೆಸರಲ್ಲಿ ಮತ ಕೇಳುವಂತಾಗಿದೆ. ರಾಮ ಸರ್ವರಿಗೂ ಸೇರಿದವನು. ನನ್ನ ಹೆಸರಲ್ಲೇ ರಾಮ ಇದೆ. ಶ್ರೀರಾಮಚಂದ್ರ, ಸೀತಾ, ಲಕ್ಷ್ಮಣ ಎಲ್ಲರೂ ನಮಗೆ ಪೂಜ್ಯರು. ಬಿಜೆಪಿ ಕೇವಲ ಜೈ ಶ್ರೀರಾಮ್ ಎಂದು ಕೂಗುತ್ತದೆ. ನಾನು ಜೈ ಸೀತಾರಾಮ್ ಎಂದು ನಿರಂತರವಾಗಿ ಕೂಗುತ್ತೇವೆ ಎಂದು ತಿಳಿಸಿದರು.
50 ಕೋಟಿ ಆಮಿಷ: ಸಿದ್ದರಾಮಯ್ಯ ವಿರುದ್ಧ ಬಿಜೆಪಿ ದೂರು
ನಮ್ಮ ಪಾಲು ಕೇಳೋಕೆ ಕೋರ್ಟ್‌ಗೆ ಹೋಗಬೇಕಾಯ್ತು: ರಾಜ್ಯಕ್ಕೆ ಬರಗಾಲ ಬಂದು ಐದು ತಿಂಗಳಾದರೂ ರಾಜ್ಯಕ್ಕೆ ಬರಬೇಕಾದ ರಾಜ್ಯದ ಪಾಲಿನ ಬರ ಪರಿಹಾರ ಒಂದೇ ಒಂದು ರುಪಾಯಿ ಬಂದಿಲ್ಲ. ರಾಜ್ಯದ ಜನರಿಗೆ ಅಕ್ಕಿ ಕೊಡ್ತೀವಿ, ದುಡ್ಡು ತಗೊಂಡು ಅಕ್ಕಿ ಕೊಡಿ ಅಂದರೂ ಕೊಡಲಿಲ್ಲ. ಈಗ ರಾಜ್ಯದ ಪಾಲಿನ ಬರ ಪರಿಹಾರ ಕೊಡಿ ಅಂದರೂ ಕೊಡುತ್ತಿಲ್ಲ. ಹಾಗಿದ್ರೆ ನಮ್ಮ ತೆರಿಗೆ ಹಣಕ್ಕೆ ಬೆಲೆ ಇಲ್ವಾ? ನಮ್ಮ ರಾಜ್ಯದ ಜನರ ಬೇಡಿಕೆಗೆ ಬೆಲೆ ಇಲ್ವಾ? ಹೀಗಾಗಿ ಅನಿವಾರ್ಯವಾಗಿ ನಮ್ಮ ಪಾಲು ಕೇಳಲು ಕೋರ್ಟ್‌ಗೆ ಹೋಗಬೇಕಾಯ್ತು ಎಂದರು.