ನಮ್ಮೊಳಗೆ ಭಿನ್ನಭಿಪ್ರಾಯ ಬೇಡ: ಯತ್ನಾಳ್, ರಮೇಶ್‌ಗೆ ರೇಣುಕಾಚಾರ್ಯ ಮನವಿ
ಬಸನಗೌಡ ಪಾಟೀಲ್ ಯತ್ನಾಳ್, ಇತರರು ಸರ್ಕಾರದ ವಿರುದ್ಧ ಬೆಳಗಾವಿಯಿಂದ ಬಳ್ಳಾರಿವರೆಗೆ ನಡೆಸಲುದ್ದೇಶಿಸಿರುವ ಪಾದಯಾತ್ರೆಗೆ ನಮ್ಮ ಪಕ್ಷದ ರಾಷ್ಟ್ರೀಯ ನಾಯಕರು ಅನುಮತಿ ಕೊಟ್ಟರೆ ಮಾಡಲಿ. ಆಗ ನಾವೂ ಪಾದಯಾತ್ರೆಯಲ್ಲಿ ಪಾಲ್ಗೊಳ್ಳಬೇಕಾಗುತ್ತದೆ ಎಂದ ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ
ದಾವಣಗೆರೆ(ಆ.17): ನಮ್ಮಲ್ಲಿ ಭಿನ್ನಾಭಿಪ್ರಾಯ, ಗೊಂದಗಳು ಬೇಡ. ನಮ್ಮ ಹೋರಾಟ ಕಾಂಗ್ರೆಸ್ ವಿರುದ್ಧವೇ ಹೊರತು ನಮ್ಮ ನಮ್ಮೊಳಗೆ ಆಂತರಿಕ ಕಚ್ಚಾಟ ಬೇಡ ಎಂದು ಬೆಳಗಾವಿಯಲ್ಲಿ ಸರ್ಕಾರದ ವಿರುದ್ದ ಮತ್ತೊಂದು ಪಾದಯಾತ್ರೆ ಕುರಿತು ಪ್ರತ್ಯೇಕ ಸಭೆ ನಡೆಸಿದ ಪಕ್ಷದ ಬಸನಗೌಡ ಪಾಟೀಲ್ ಯತ್ನಾಳ್, ರಮೇಶ್ ಜಾರಕಿಹೊಳಿಗೆ ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಮನವಿ ಮಾಡಿದ್ದಾರೆ.
ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಬಸನಗೌಡ ಪಾಟೀಲ್ ಯತ್ನಾಳ್, ಇತರರು ಸರ್ಕಾರದ ವಿರುದ್ಧ ಬೆಳಗಾವಿಯಿಂದ ಬಳ್ಳಾರಿವರೆಗೆ ನಡೆಸಲುದ್ದೇಶಿಸಿರುವ ಪಾದಯಾತ್ರೆಗೆ ನಮ್ಮ ಪಕ್ಷದ ರಾಷ್ಟ್ರೀಯ ನಾಯಕರು ಅನುಮತಿ ಕೊಟ್ಟರೆ ಮಾಡಲಿ. ಆಗ ನಾವೂ ಪಾದಯಾತ್ರೆಯಲ್ಲಿ ಪಾಲ್ಗೊಳ್ಳಬೇಕಾಗುತ್ತದೆ ಎಂದರು.
ನನ್ನ ರಕ್ತದ ಕಣ ಕಣದಲ್ಲೂ ಬಿಜೆಪಿ-ಹಿಂದೂತ್ವ ತುಂಬಿದೆ, ಕಾಂಗ್ರೆಸ್ ಸೇರುವ ಪ್ರಶ್ನೆಯೇ ಇಲ್ಲ: ಎಂಪಿ ರೇಣುಕಾಚಾರ್ಯ
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಯಾವುದೇ ತಪ್ಪು ಮಾಡಿಲ್ಲ. ಯಾವುದೇ ಭ್ರಷ್ಟಾಚಾರ ಮಾಡಿಲ್ಲ. ಒಬ್ಬ ಸಾಮಾನ್ಯ ಕಾರ್ಯಕರ್ತನಾಗಿ ಪಕ್ಷ ಕಟ್ಟಿ ಬೆಳೆಸುತ್ತಿದ್ದಾರೆ ಎಂದರು.