ನಮ್ಮ ಸರ್ಕಾರದಲ್ಲಿ ಐದು ಗ್ಯಾರಂಟಿ ಯೋಜನೆಗಳನ್ನು ತಂದಿದ್ದೇವೆ ಯಾವುದನ್ನೂ ಇಂತಹ ಧರ್ಮಕ್ಕೆ ಅಂತ ಮಾಡಿಲ್ಲ. ಇಡೀ ರಾಜ್ಯದ ಎಲ್ಲ ಜಾತಿ, ಧರ್ಮದ ಜನರಿಗೂ ಅನುಷ್ಠಾನಗೊಳಿಸುತ್ತಿದ್ದೇವೆ. ಅದೇ ರೀತಿ ಮುಂದೆಯೂ ಕೆಲಸ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. 

ಸುವರ್ಣಸೌಧ (ಡಿ.07): ನಮ್ಮ ಸರ್ಕಾರದಲ್ಲಿ ಐದು ಗ್ಯಾರಂಟಿ ಯೋಜನೆಗಳನ್ನು ತಂದಿದ್ದೇವೆ ಯಾವುದನ್ನೂ ಇಂತಹ ಧರ್ಮಕ್ಕೆ ಅಂತ ಮಾಡಿಲ್ಲ. ಇಡೀ ರಾಜ್ಯದ ಎಲ್ಲ ಜಾತಿ, ಧರ್ಮದ ಜನರಿಗೂ ಅನುಷ್ಠಾನಗೊಳಿಸುತ್ತಿದ್ದೇವೆ. ಅದೇ ರೀತಿ ಮುಂದೆಯೂ ಕೆಲಸ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಸುವರ್ಣಸೌಧದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹುಬ್ಬಳ್ಳಿಯಲ್ಲಿ ತಾವು ನೀಡಿದ ಮುಸ್ಲಿಂ ಪರ ಹೇಳಿಕೆ ವಾಪಸ್‌ ಪಡೆಯುವಂತೆ ವಿಪಕ್ಷದವರು ಸದನದಲ್ಲಿ ಆಗ್ರಹಿಸಿದ್ದಾರೆ ಎಂಬ ಪ್ರಶ್ನೆಗೆ, ಮಾಧ್ಯಮದವರ ವಿರುದ್ಧವೇ ಗರಂ ಆದ ಮುಖ್ಯಮಂತ್ರಿಗಳು, ಎಲ್ಲಾ ನಿಮ್ಮಿಂದಲೇ ಆಗಿದ್ದು. 

ಎಲ್ಲ ನಿಮ್ಮಿಂದ ಉಂಟಾಗಿದ್ದು. ನಾನು ಮುಸ್ಲಿಮರೂ ಸೇರಿದಂತೆ ಎಲ್ಲ ಧರ್ಮದವರಿಗೂ ನಮ್ಮ ಸರ್ಕಾರ ರಕ್ಷಣೆ ನೀಡಲಿದೆ ಎಂದು ಹೇಳಿದ್ದೆ. ಅದನ್ನು ನೀವು ಬರೆದಿರಾ? ಎಂದು ಪ್ರಶ್ನಿಸಿದರು. ನಮ್ಮ ಸರ್ಕಾರದಲ್ಲಿ ಯಾವುದೇ ಕಾರ್ಯಕ್ರಮವನ್ನು ಒಂದು ಧರ್ಮಕ್ಕೆ ಸೀಮಿತವಾಗಿ ಮಾಡಿಲ್ಲ. ಶಕ್ತಿ, ಗೃಹಜ್ಯೋತಿ, ಗೃಹಲಕ್ಷ್ಮಿ, ಅನ್ನಭಾಗ್ಯ, ಯುವನಿಧಿ ಎಲ್ಲ ಗ್ಯಾರಂಟಿಗಳನ್ನು ಇಡೀ ರಾಜ್ಯದ ಎಲ್ಲ ಧರ್ಮ, ಜಾತಿ ಜನರಿಗೂ ಜಾರಿಗೊಳಿಸಿದ್ದೇವೆ. ನಮ್ಮ ಮೇಲೆ ವಿಪಕ್ಷಗಳು ಸುಮ್ಮನೆ ಟೀಕೆ ಮಾಡ್ತವೆ. ಅದಕ್ಕೆ ಉತ್ತರ ಕೊಡುತ್ತೇವೆ ಎಂದರು.

ಬಿಜೆಪಿ ಬ್ರಾಂಡ್‌ ಬೆಂಗಳೂರು ಮಾಡಿದ್ದಾರೆಯೇ?: ಸಿಎಂ ಸಿದ್ದರಾಮಯ್ಯ

2 ಕಡೆ ಅಂಬಾರಿ ಆನೆ ಅರ್ಜುನನ ಸ್ಮಾರಕ: ಅರ್ಜುನ ಎಂಟು ಬಾರಿ ಅಂಬಾರಿ ಹೊತ್ತಿದ್ದ ಆನೆ. ಸಾವಿಗೀಡಾಗಿದ್ದು ಬೇಸವಾಗಿದೆ. ಇನ್ನಷ್ಟು ಕಾಲ ಬದುಕಬೇಕಾಗಿತ್ತು. ಅದರ ಸಾವಿನ ಬಗ್ಗೆ ಸಂಪೂರ್ಣ ಮಾಹಿತಿ ಕೇಳಿದ್ದೇನೆ. ಅರ್ಜುನ ಆನೆ ಸಕಲೇಶಪುರದಲ್ಲಿ ಎಲ್ಲಿ ಪ್ರಾಣ ಕಳೆದುಕೊಂಡಿತೋ ಅಲ್ಲಿ ಸ್ಮಾರಕ ಮಾಡುತ್ತೇವೆ. ಹೆಗ್ಗಡದೇವನಕೋಟೆಯಲ್ಲೂ ಸ್ಮಾರಕ ಮಾಡಲು ಅಧಿಕಾರಿಗಳಿಗೆ ತಿಳಿಸಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು.

ಪ್ರತಿಪಕ್ಷಗಳನ್ನು ಒಟ್ಟಾಗಿ ಎದುರಿಸಿ: ಅಧಿವೇಶನದಲ್ಲಿ ಬಿಜೆಪಿ-ಜೆಡಿಎಸ್‌ ಜಂಟಿಯಾಗಿ ಮಾಡುವ ಪ್ರತಿ ಹೋರಾಟವನ್ನು ಒಟ್ಟಾಗಿ ಹೇಗೆ ಎದುರಿಸಬೇಕು ಎಂಬ ಬಗ್ಗೆ ಚರ್ಚೆ ನಡೆಯಿತು. ಡಿ.ಕೆ.ಶಿವಕುಮಾರ್‌ ಅವರ ಮೇಲಿನ ಸಿಬಿಐ ತನಿಖೆ ಹಿಂಪಡೆದಿರುವ ಬಗ್ಗೆ ವಿಪಕ್ಷದವರು ಆಕ್ಷೇಪ ವ್ಯಕ್ತಪಡಿಸಿದರೆ, ಅಡ್ವೊಕೇಟ್‌ ಜನರಲ್‌ ಅಭಿಪ್ರಾಯದ ವಿರುದ್ಧವಾಗಿ ಬಿಜೆಪಿಯವರು ಯಾಕೆ ತನಿಖೆಗೆ ವಹಿಸಿದ್ದೀರಿ ಎಂದು ದಾಖಲೆಗಳನ್ನು ಮುಂದಿಟ್ಟುಕೊಂಡು ಪ್ರಶ್ನಿಸಬೇಕು.

‘ಕಾಂಗ್ರೆಸ್‌ ಈಸ್‌ ರಿಯಲ್‌ ಕಮ್ಯುನಲ್‌ ಪಾರ್ಟಿ’: ಮಾಜಿ ಸಚಿವ ಸಿ.ಟಿ.ರವಿ ವ್ಯಂಗ್ಯ

ಬರದ ವೈಫಲ್ಯದ ಬಗ್ಗೆ ಪ್ರಸ್ತಾಪಿಸಿದರೆ ಕೇಂದ್ರದ ನೆರವಿಲ್ಲದಿದ್ದರೂ ರಾಜ್ಯ ಸರ್ಕಾರ 2 ಸಾವಿರ ರು.ವರೆಗೆ ಪರಿಹಾರ ಬಿಡುಗಡೆ ಮಾಡಿದೆ. ಕೇಂದ್ರ ಸರ್ಕಾರ ಈವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ. ಈ ಬಗ್ಗೆ ಪ್ರಶ್ನೆ ಮಾಡಬೇಕಿರುವ 27 ಮಂದಿ ಸಂಸದರು ಹಾಗೂ ಐದು ಮಂದಿ ಕೇಂದ್ರ ಸಚಿವರು ಏಕೆ ಮೌನವಾಗಿದ್ದಾರೆ ಎಂದು ತರಾಟೆಗೆ ತೆಗೆದುಕೊಳ್ಳಬೇಕು. ಸ್ಪೀಕರ್‌ ಸ್ಥಾನದ ಬಗ್ಗೆ ಜಮೀರ್‌ ಅಹಮದ್ ಖಾನ್‌ ಅವರ ಹೇಳಿಕೆ ಪ್ರಸ್ತಾಪಿಸಿದರೆ, ಎಲ್ಲಾ ಶಾಸಕರು ಒಟ್ಟಾಗಿ ಜಮೀರ್‌ ಅವರ ಸಮರ್ಥನೆಗೆ ಬರಬೇಕು ಎಂಬುದು ಸೇರಿದಂತೆ ಪ್ರತಿಪಕ್ಷಗಳನ್ನು ಹೇಗೆ ಎದುರಿಸಬೇಕು ಎಂಬ ಬಗ್ಗೆ ಹಲವು ವಿಚಾರಗಳನ್ನು ಮುಂದಿಟ್ಟುಕೊಂಡು ಚರ್ಚಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.