ಈ ಚುನಾವಣೆಯಲ್ಲಿ ಮಹಿಳೆಯರಿಗೆ ಹೆಚ್ಚು ಟಿಕೆಟ್ ನೀಡಲು ಮನವಿ ಇಡ್ತೇವೆ: ಉಮಾಶ್ರೀ
ಕೆಪಿಸಿಸಿ ವತಿಯಿಂದ ಜ.16ರಂದು ಬೆಂಗಳೂರು ಅರಮನೆ ಮೈದಾನದಲ್ಲಿ ಏರ್ಪಡಿಸಿರುವ ‘ನಾ ನಾಯಕಿ’ ಸಮಾವೇಶಕ್ಕೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಆಗಮಿಸಲಿದ್ದಾರೆ.
ಬೆಂಗಳೂರು (ಜ.13): ಕೆಪಿಸಿಸಿ ವತಿಯಿಂದ ಜ.16ರಂದು ಬೆಂಗಳೂರು ಅರಮನೆ ಮೈದಾನದಲ್ಲಿ ಏರ್ಪಡಿಸಿರುವ ‘ನಾ ನಾಯಕಿ’ ಸಮಾವೇಶಕ್ಕೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಆಗಮಿಸಲಿದ್ದಾರೆ. ಈ ವೇಳೆ 1 ಲಕ್ಷಕ್ಕೂ ಹೆಚ್ಚು ಮಹಿಳೆಯರನ್ನು ಸೇರಿಸಿ ಮುಂದಿನ ಚುನಾವಣೆಯಲ್ಲಿ ಮಹಿಳೆಯರಿಗೆ ಅತಿ ಹೆಚ್ಚು ಟಿಕೆಟ್ ನೀಡಬೇಕು ಎಂದು ಮನವಿ ಮಾಡಲಾಗುವುದು ಎಂದು ಮಾಜಿ ಸಚಿವೆ ಉಮಾಶ್ರೀ ಹೇಳಿದ್ದಾರೆ. ಮಾಜಿ ಸಚಿವೆ ರಾಣಿ ಸತೀಶ್, ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಪುಷ್ಪಾ ಅಮರನಾಥ್, ಶಾಸಕಿ ಸೌಮ್ಯಾರೆಡ್ಡಿ ಅವರೊಂದಿಗೆ ಕೆಪಿಸಿಸಿ ಕಚೇರಿಯಲ್ಲಿ ಗುರುವಾರ ಜಂಟಿ ಸುದ್ದಿಗೋಷ್ಠಿ ನಡೆಸಿ ಅವರು ಮಾತನಾಡಿದರು.
ಜ.16 ರಂದು ಬೆಳಗ್ಗೆ 11 ಗಂಟೆಗೆ ಸಮಾವೇಶ ನಡೆಯಲಿದ್ದು, ಪ್ರಿಯಾಂಕಾ ಗಾಂಧಿ ಉದ್ಘಾಟಿಸಲಿದ್ದಾರೆ. ರಾಜ್ಯದ ಮೂಲೆ ಮೂಲೆಯಿಂದ ಮಹಿಳೆಯರು, ಬೆಂಗಳೂರಿನ ಸುತ್ತ ಮುತ್ತಲಿನ ಜಿಲ್ಲೆಗಳಿಂದ ಮಹಿಳಾ ನಾಯಕಿಯರು, ಪದಾಧಿಕಾರಿಗಳು ಆಗಮಿಸಲಿದ್ದಾರೆ. ಕಾರ್ಯಕ್ರಮದಲ್ಲಿ ವಿಶೇಷವಾಗಿ ಮುಂದಿನ ಚುನಾವಣೆಯಲ್ಲಿ ಮಹಿಳೆಯರಿಗೆ ಹೆಚ್ಚು ಟಿಕೆಟ್ ನೀಡುವಂತೆ ಪ್ರಿಯಾಂಕಾ ಗಾಂಧಿ ಅವರಿಗೆ ಮನವಿ ಮಾಡುತ್ತೇವೆ. ಈವರೆಗೆ ಪಕ್ಷದಲ್ಲಿ ಟಿಕೆಟ್‌ಗಾಗಿ 74 ಕ್ಷೇತ್ರಗಳಿಂದ 109 ಮಂದಿ ಮಹಿಳೆಯರು ಅರ್ಜಿ ಸಲ್ಲಿಸಿದ್ದಾರೆ. ಗೆಲುವಿನ ಮಾನದಂಡ ಆಧರಿಸಿ ಹೆಚ್ಚು ಮಂದಿಗೆ ಅವಕಾಶ ಮಾಡಿಕೊಡಬೇಕು ಎಂದು ಕೇಳುತ್ತೇವೆ ಎಂದರು.
ಚಿಕ್ಕಬಳ್ಳಾಪುರ ಉತ್ಸವ ಪ್ರತಿ ವರ್ಷ ಅದ್ಧೂರಿಯಾಗಿ ನಡೆಯಲಿ: ಸಚಿವ ಆರ್.ಅಶೋಕ್
ಇನ್ನು ‘ನಾ ನಾಯಕಿ’ ಕಾರ್ಯಕ್ರಮ ಯಶಸ್ಸಿಗಾಗಿ ಎಲ್ಲ ಪಂಚಾಯ್ತಿ, ವಾರ್ಡ್ ಮಟ್ಟದ ನಾಯಕಿಯರು ಹಾಗೂ ಸಕ್ರಿಯ ಕಾರ್ಯಕರ್ತರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಲಾಗುವುದು. ಕನಿಷ್ಠ 1 ಲಕ್ಷ ಮಂದಿ ಮಹಿಳೆಯರು ಸೇರುವಂತೆ ಕಾರ್ಯಕ್ರಮ ಮಾಡಲಿದ್ದೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಪ್ರತಿ ವಾರ್ಡ್, ಪಂಚಾಯ್ತಿಯಲ್ಲೂ ಫ್ಲೆಕ್ಸ್: ಪುಷ್ಪಾ ಅಮರನಾಥ್ ಮಾತನಾಡಿ, ಈ ಬಾರಿ ಪಕ್ಷದ ವತಿಯಿಂದ ಮಹಿಳೆಯರಿಗಾಗಿ ಪ್ರತ್ಯೇಕ ಪ್ರಣಾಳಿಕೆ ನೀಡಲು ಮಹಿಳೆಯರಿಂದಲೇ ಸಲಹೆ ಆಹ್ವಾನಿಸಲಾಗಿದೆ. ಎಲ್ಲ ವರ್ಗದ ಜನರನ್ನು ಮುಟ್ಟಲು ಕಾಂಗ್ರೆಸ್ ಪ್ರಯತ್ನಿಸುತ್ತಿದೆ. ನಾ ನಾಯಕಿ ಸಮಾವೇಶ ಸಿದ್ಧತೆ ಸಲುವಾಗಿ ಈಗಾಗಲೇ ಜ್ಯೂಮ್ ಸಭೆ ಮೂಲಕ ಮೂಲಕ 3 ಬಾರಿ ಮಹಿಳಾ ಪದಾಧಿಕಾರಿಗಳ ಸಭೆ ಮಾಡಲಾಗಿದೆ. ಪ್ರತಿ ವಾರ್ಡ್, ಪಂಚಾಯ್ತಿಯಲ್ಲೂ ಪ್ರಿಯಾಂಕಾ ಅವರನ್ನು ಸ್ವಾಗತಿಸಿ ಫ್ಲೆಕ್ಸ್‌ಗಳನ್ನು ಅಳವಡಿಸಲು ತೀರ್ಮಾನಿಸಲಾಗಿದೆ ಎಂದರು.
16ರಂದು ರಾಜ್ಯಕ್ಕೆ ಪ್ರಿಯಾಂಕಾ ಗಾಂಧಿ ಆಗಮನ: ಈ ತಿಂಗಳು 16 ರಂದು ರಾಷ್ಟ್ರೀಯ ನಾಯಕಿ ಪ್ರಿಯಾಂಕಾ ಗಾಂಧಿ ಅವರು ರಾಜ್ಯಕ್ಕೆ ಆಗಮಿಸಿ ರಾಜ್ಯದ ನಾಯಕಿಯರನ್ನು ಭೇಟಿ ಮಾಡುತ್ತಿದ್ದಾರೆ. ಹೆಣ್ಣು ಕುಟುಂಬದ ಕಣ್ಣು, ಹೆಣ್ಣು ದೇಶದ ಶಕ್ತಿ, ಆಸ್ತಿ ಎಂದು ನಾ ನಾಯಕಿ ಕಾರ್ಯಕ್ರಮ ಮಾಡುತ್ತಿದ್ದಾರೆ. ಪ್ರತಿ ಪಂಚಾಯ್ತಿಯಿಂದಲೂ ಮಹಳೆಯರು ಸಮಾವೇಶದಲ್ಲಿ ಭಾಗವಹಿಸಬೇಕು. ನಾವು ಮಹಿಳೆಯರಿಗೆ ಪ್ರತ್ಯೇಕ ಪ್ರಣಾಳಿಕೆ ನೀಡಲು ಪ್ರಿಯಾಂಕ ಗಾಂಧಿ ಅವರು ಸೂಚಿಸಿದ್ದಾರೆ. ನೀವು ಅವರ ಕಾರ್ಯಕ್ರಮಕ್ಕೆ ಬಂದು ಕೈ ಜೋಡಿಸಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮನವಿ ಮಾಡಿದರು.
ಸಿದ್ದರಾಮಯ್ಯ ಲೀಡರ್ ಆಗುವ ಭ್ರಮೆ ಬಿಡಲಿ: ಕೆ.ಎಸ್.ಈಶ್ವರಪ್ಪ ಲೇವಡಿ
ಕಾಂಗ್ರೆಸ್ ಉಸ್ತುವಾರಿ ರಣದೀಪಸಿಂಗ ಸುರ್ಜೆವಾಲಾ ಮಾತನಾಡಿ, ದೇಶದಲ್ಲಿಯೇ ಭ್ರಷ್ಟಸರ್ಕಾರ ಬೊಮ್ಮಾಯಿ ಸರ್ಕಾರ. ಇಲ್ಲಿ ಶೇ.40 ಸರ್ಕಾರವಿದೆ. ಇದರಿಂದ ಸಂತೋಷ ಪಾಟೀಲ ಗುತ್ತಿಗೆದಾರ ಬಲಿಯಾಗಿದ್ದು ಅವರನ್ನು ಮರಳಿ ತರಲು ಸಾಧ್ಯವೆ ಎಂದು ಬೊಮ್ಮಾಯಿ ಅವರನ್ನು ಪ್ರಶ್ನಿಸಿದರು. ವಿಧಾನ ಪರಿಷತ್ ಸದಸ್ಯ ಪ್ರಕಾಶ ಹುಕ್ಕೇರಿ ಮಾತನಾಡಿದರು. ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ.ಪಾಟೀಲ, ಶಾಸಕಿ ಲಕ್ಷ್ಮೀ ಹೆಬ್ಬಾಳಕರ, ಬಿ.ಕೆ.ಹರಿಪ್ರಸಾದ, ಕೆಪಿಸಿಸಿ ಕಾರಾರಯಧ್ಯಕ್ಷ ಸತೀಶ ಜಾರಕಿಹೊಳಿ ಮಾತನಾಡಿದರು.