2028ರಲ್ಲೂ ರಾಜ್ಯದಲ್ಲಿ ನಾವೇ ಅಧಿಕಾರಕ್ಕೆ: ಸಿಎಂ ಸಿದ್ದರಾಮಯ್ಯ
ನೀವು ನಮಗೆ ರಾಜಕೀಯ ಶಕ್ತಿ ಕೊಡಿ, ನಾವು ನಿಮಗೆ ಆರ್ಥಿಕ ಶಕ್ತಿ ಮುಂದುವರೆಸುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಹಿಳಾ ಕಾರ್ಯಕರ್ತೆಯರಿಗೆ ಕರೆ ನೀಡಿದ್ದಾರೆ.
ಬೆಂಗಳೂರು (ಅ.18): '2028ರ ವಿಧಾನಸಭೆ ಚುನಾವಣೆಯಲ್ಲೂ ಶತಾಯಗತಾಯ ನಾವೇ ಅಧಿಕಾರಕ್ಕೆ ಬರುತ್ತೇವೆ. ಆಗಲೂ ಮಹಿಳೆಯರಿಗೆ ಆರ್ಥಿಕ ಶಕ್ತಿ ನೀಡುವ ಕಾರ್ಯಕ್ರಮಗಳನ್ನು ಮುಂದುವರೆಸುತ್ತೇವೆ. ನೀವು ನಮಗೆ ರಾಜಕೀಯ ಶಕ್ತಿ ಕೊಡಿ, ನಾವು ನಿಮಗೆ ಆರ್ಥಿಕ ಶಕ್ತಿ ಮುಂದುವರೆಸುತ್ತೇವೆ' ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಹಿಳಾ ಕಾರ್ಯಕರ್ತೆಯರಿಗೆ ಕರೆ ನೀಡಿದ್ದಾರೆ.
ಕೆಪಿಸಿಸಿ ಕಚೇರಿಯ ಭಾರತ್ ಜೋಡೋ ಭವನದಲ್ಲಿ ಸೌಮ್ಯಾ ರೆಡ್ಡಿ ಅವರು ಪ್ರದೇಶ ಕಾಂಗ್ರೆಸ್ ಮಹಿಳಾ ಅಧ್ಯಕ್ಷೆಯಾಗಿ ಅಧಿಕಾರ ಸ್ವೀಕರಿಸಿದ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಬಿಜೆಪಿಯವರು ಅನ್ನಭಾಗ್ಯವನ್ನೂ ವಿರೋ ಧಿಸುತ್ತಾರೆ, ಗೃಹಲಕ್ಷ್ಮಿ ಯೋಜನೆ, ಗೃಹ ಜ್ಯೋತಿ ಯೋಜನೆ ಎಲ್ಲವನ್ನೂ ವಿರೋಧಿಸುತ್ತಾರೆ. ಆದರೆ ಗೃಹಲಕ್ಷ್ಮಿ ಹಣದಲ್ಲಿ ಅತ್ತೆಯು ಸೊಸೆಗೆ ಬಳೆ ಅಂಗಡಿ ಹಾಕಿಕೊಟ್ಟ, ಹೊಲಿಗೆ ಯಂತ್ರ ಕೊಡಿಸಿದ ಉದಾಹರಣೆಗಳು ಸಾಕಷ್ಟಿವೆ. ಹೀಗಾಗಿ ಮಹಿಳಾ ವಿರೋಧಿ ಬಿಜೆಪಿಗೆ ತಕ್ಕ ಉತ್ತರವನ್ನು ನೀವೇ ನೀಡಬೇಕು. 2028ರಲ್ಲೂ ನಾವೇ ಅಧಿಕಾರಕ್ಕೆ ಬಂದು ಮಹಿಳೆಯರಿಗೆ ಆರ್ಥಿಕ ಶಕ್ತಿ ನೀಡುವ ಗ್ಯಾರಂಟಿ ಕಾರ್ಯಕ್ರಮಗಳನ್ನು ಮುಂದುವರೆಸುತ್ತೇವೆ.
ವಾಲ್ಮೀಕಿ ನಿಗಮದಲ್ಲಿ ನೀಚ ಕೆಲಸ ಮಾಡಿಲ್ಲ: ಕಣ್ಣೀರಿಟ್ಟ ನಾಗೇಂದ್ರ
ನೀವು ನಮಗೆ ರಾಜಕೀಯ ಶಕ್ತಿ ಕೊಡಿ. ನಾವು ನಿಮಗೆ ಆರ್ಥಿಕ ಶಕ್ತಿ ನೀಡುವುದನ್ನು ಮುಂದುವರೆಸುತ್ತೇವೆ ಎಂದರು. ಸಂವಿಧಾನವು ಮಹಿಳೆಯರಿಗೆ ರಾಜಕೀಯ, ಸಾಮಾಜಿಕ ಮತ್ತು ಆರ್ಥಿಕ ಶಕ್ತಿ ನೀಡಿದೆ. ಈ ಸಂವಿಧಾನವನ್ನು ಬಿಜೆಪಿ ವಿರೋಧಿಸುತ್ತದೆ. ಜಾತ್ಯತೀತತೆ, ಪ್ರಜಾಪ್ರಭುತ್ವ, ಸಾಮಾಜಿಕ ನ್ಯಾಯ ಮತ್ತು ಸಂವಿಧಾನದ ಮೌಲ್ಯಗಳ ಬಗ್ಗೆ ಸ್ಪಷ್ಟತೆ ಕೊಡುವ ಮೂಲಕ ಕಾರ್ಯಕರ್ತೆ ಯರನ್ನು ಸಜ್ಜುಗೊಳಿಸಬೇಕು. ಈ ನಿಟ್ಟಿನಲ್ಲಿ ಪಕ್ಷ ಸಂಘಟನೆ ಮಾಡುವ ಸಾಮರ್ಥ ಸೌಮ್ಯಾ ರೆಡ್ಡಿ ಅವರಿಗೆ ಇದೆ. ಈ ದಿಕ್ಕಿನಲ್ಲಿ ನೀವೆ ಲ್ಲರೂ ಮುಂದುವರೆಯಿರಿ ಎಂದು ಮಹಿಳಾ ಕಾರ್ಯಕರ್ತೆಯರಿಗೆ ಕರೆ ನೀಡಿದರು.
ತಿಪ್ಪರಲಾಗ ಹಾಕಿದ್ರೂ ಬಿಜೆಪಿ ಗೆಲ್ಲಲ್ಲ- ಡಿಕೆಶಿ: ಉಪಮುಖ್ಯಮಂತ್ರಿ ಡಿ.ಕೆ. ಶಿವಕು ಮಾರ್‌ಮಾತನಾಡಿ,ಯಾವರೀತಿರಾಜಕಾರಣ ಮಾಡಬೇಕು ಎಂಬುದು ನನಗೆ ತುಂಬಾ ಚೆನ್ನಾಗಿಗೊತ್ತಿದೆ.ಬಿಜೆಪಿಗರುಏನೇತಿಪ್ಪರಲಾಗ ಹಾಕಿದರೂ 2028ರಲ್ಲಿ ನಾವೇ ಗೆಲ್ಲುತ್ತೇವೆ. ರಾಜಕಾರಣ ಫುಟ್ಬಾಲ್ ಅಲ್ಲ, ಅದು ಚದು ರಂಗದಾಟ. ಆ ಆಟ ನನಗೆ ಗೊತ್ತಿದೆ. ನೀವು ಮಹಿಳೆಯರುಪಂಚಾಯ್ತಿ, ಬೂತ್‌ಮಟ್ಟದಲ್ಲಿ ಮಹಿಳೆಯರನ್ನು ಸಂಘಟನೆ ಮಾಡಿ.
ಮತ್ತೆ ನಾವು ರಾಜ್ಯದಲ್ಲಿ ಅಧಿಕಾರಕ್ಕೆ ಯಾಕೆ ಬರುವು ದಿಲ್ಲ ನೋಡುತ್ತೇನೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ನಮ್ಮ ಗುರಿ 2028ರ ಚುನಾವಣೆ. ಆನಂತರ 2029ರ ಚುನಾವಣೆ, ದೇಶದಲ್ಲಿ ಮತ್ತೆ ಕಾಂಗ್ರೆಸ್‌ಸರ್ಕಾರವನ್ನು ಅಧಿಕಾರಕ್ಕೆ ತರಬೇಕು. ನಾನು ಎಷ್ಟು ದಿನ ಕಾಂಗ್ರೆಸ್ ಪಕ್ಷದ ಅಧ್ಯಕ್ಷನಾಗಿ ಇರುತ್ತೇನೋ ಗೊತ್ತಿಲ್ಲ. ಆದರೆ ಅಧಿಕಾರದಲ್ಲಿ ಇರುವಾಗ ನಾವು ಏನು ಮಾಡುತ್ತೇವೆ ಎಂಬುದು ಮುಖ್ಯ. ನಮ್ಮ ಸಂಘಟನೆ ಇತಿಹಾಸದ ಪುಟಕ್ಕೆ ಹೋಗುತ್ತದೆ ಎಂದರು. ಮಹಿಳೆಯರಿಗೆ ಅಧಿಕಾರ: ಪಕ್ಷಕ್ಕೆ ಕೆಲಸ ಮಾಡುವ ಹೆಣ್ಣು ಮಕ್ಕಳಿಗೆ ಅಧಿಕಾರ ನೀಡುವುದು ನಮ್ಮ ಜವಾಬ್ದಾರಿ.
ಚನ್ನಪಟ್ಟಣ ಉಪ ಸಮರ: ಒಬ್ಬರ ಕೈಯಲ್ಲಿ ಹಾರೆ, ಮತ್ತೊಬ್ಬರ ಕೈಯಲ್ಲಿ ಗುದ್ದಲಿ: ತನ್ವೀರ್ ಸೇಠ್ ವ್ಯಂಗ್ಯ
ಮೂರು ಹೆಣ್ಣು ಮಗಳು ಇದ್ದರೆ ಒಬ್ಬರಿಗಾದರೂ ಅಧಿಕಾರ ನೀಡುತ್ತೇವೆ. ಒಂದು ಕಾರ್ಡು ಆದರೂ ಕೊಡುತ್ತೇವೆ ಎಂದು ಶಿವಕುಮಾರ್ ಭರವಸೆ ನೀಡಿದರು. ಇದಕ್ಕೂ ಮೊದಲು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸೌಮ್ಯಾ ರೆಡ್ಡಿ, ಮಹಿಳೆಯರಿಗೆ ಆರ್ಥಿಕವಾಗಿ,ಸಾಮಾಜಿಕ ಹಾಗೂ ರಾಜಕೀಯವಾಗಿ ಸರಿಯಾದ ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ ನಮ್ಮ ಹೋರಾಟ ಮುಂದುವರಿಯಲಿದೆ ಎಂದರು. ಸಮಾರಂಭದಲ್ಲಿ ಸಚಿವರಾದ ಕೃಷ್ಣ ಬೈರೇಗೌಡ, ಲಕ್ಷ್ಮೀ ಹೆಬ್ಬಾಳ, ಶಿವಾನಂದ ಪಾಟೀಲ್ ಸೇರಿ ಹಲವರು ಹಾಜರಿದ್ದರು.