Asianet Suvarna News Asianet Suvarna News

ಬಿಜೆಪಿಯವರಿಗೆ ನಮ್ಮ ಶಕ್ತಿ ತೋರಿಸುತ್ತೇವೆ: ಡಿ.ಕೆ. ಶಿವಕುಮಾರ್

ಚುನಾವಣೆ ಸಂದರ್ಭದಲ್ಲಿ ನಾವು ನೀಡಿದ್ದ ಜಾಹೀರಾತಿನ ಬಗ್ಗೆ ಬಿಜೆಪಿ ನಾಯಕರು ಖಾಸಗಿ ದೂರು ನೀಡಿದ್ದಾರೆ. ನಾವು ಸುಮ್ಮನೆ ಜಾಹೀರಾತು ನೀಡಿಲ್ಲ. ಬಿಜೆಪಿ ನಾಯಕರು, ಹಿಂದಿನ ಅವಧಿಯ ಸಚಿವರ ಹೇಳಿಕೆಗಳ ಆಧಾರದ ಮೇಲೆ ಹಾಗೂ ಮಾಧ್ಯಮಗಳಲ್ಲಿ ಬಂದ ವರದಿಯನ್ನಾಧರಿಸಿ ಬಿಜೆಪಿ ಸರ್ಕಾರದ ಹಗರಣಗಳ ಬಗ್ಗೆ ಪತ್ರಿಕಾ ಜಾಹೀರಾತು ನೀಡಿದ್ದೇವೆ ಎಂದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ 

We will show our Strength to the BJP Says DCM DK Shivakumar grg
Author
First Published Jun 2, 2024, 9:52 AM IST | Last Updated Jun 2, 2024, 9:51 AM IST

ಬೆಂಗಳೂರು(ಜೂ.02):  ಕರ್ನಾಟಕದ ಬಿಜೆಪಿ ದೇಶದಲ್ಲಿಯೇ ಅತ್ಯಂತ ಭ್ರಷ್ಟ ಪಕ್ಷ. ನಾವು ನೀಡಿದ್ದ ಜಾಹೀರಾತಿನ ವಿರುದ್ಧ ನ್ಯಾಯಾಲಯದಲ್ಲಿ ಖಾಸಗಿ ದೂರು ನೀಡಿ ತಮ್ಮ ಭ್ರಷ್ಟಾಚಾರವನ್ನು ಬಯಲು ಮಾಡಲು ಅವರೇ ಕರೆದಿದ್ದಾರೆ. ಬಿಜೆಪಿಯವರಿಗೆ ನಾವು ನಮ್ಮ ಶಕ್ತಿಯನ್ನು ತೋರಿಸುತ್ತೇವೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

ನಗರದ ಸಿವಿಲ್ ಕೋರ್ಟ್ ಮುಂಭಾಗ ಮಾಧ್ಯಮಗಳೊಂದಿಗೆ ಮಾತನಾಡಿ, ಚುನಾವಣೆ ಸಂದರ್ಭದಲ್ಲಿ ನಾವು ನೀಡಿದ್ದ ಜಾಹೀರಾತಿನ ಬಗ್ಗೆ ಬಿಜೆಪಿ ನಾಯಕರು ಖಾಸಗಿ ದೂರು ನೀಡಿದ್ದಾರೆ. ನಾವು ಸುಮ್ಮನೆ ಜಾಹೀರಾತು ನೀಡಿಲ್ಲ. ಬಿಜೆಪಿ ನಾಯಕರು, ಹಿಂದಿನ ಅವಧಿಯ ಸಚಿವರ ಹೇಳಿಕೆಗಳ ಆಧಾರದ ಮೇಲೆ ಹಾಗೂ ಮಾಧ್ಯಮಗಳಲ್ಲಿ ಬಂದ ವರದಿಯನ್ನಾಧರಿಸಿ ಬಿಜೆಪಿ ಸರ್ಕಾರದ ಹಗರಣಗಳ ಬಗ್ಗೆ ಪತ್ರಿಕಾ ಜಾಹೀರಾತು ನೀಡಿದ್ದೇವೆ ಎಂದರು.

ವಾಲ್ಮೀಕಿ ನಿಗಮದ ಹಗರಣದಲ್ಲಿ ಸಿಎಂ, ಡಿಸಿಎಂ ಭಾಗಿ: ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ

ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರೇ ಬಿಜೆಪಿ ಸರ್ಕಾರದ ಮೇಲೆ ಹಗರಣದ ಆರೋಪ ಮಾಡಿದ್ದರು. ಹಣ ನೀಡದೆ ಸಚಿವ ಸ್ಥಾನ ಸಿಗುವುದಿಲ್ಲ ಎಂಬ ಹೇಳಿಕೆ ನೀಡಿದ್ದರು. ಮುಖ್ಯಮಂತ್ರಿ ಸ್ಥಾನಕ್ಕೆ 2500 ಕೋಟಿ ರು., ಸಚಿವ ಸ್ಥಾನಕ್ಕೆ 100 ಕೋಟಿ ರು. ನೀಡಬೇಕು ಎಂದು ಹೇಳಿಕೆ ನೀಡಿದ್ದರು. ಅವರು ಬಿಜೆಪಿಯವರಲ್ಲವೇ ಎಂದು ಪ್ರಶ್ನಿಸಿದರು.

Latest Videos
Follow Us:
Download App:
  • android
  • ios