ನಮ್ಮ ಸಮಸ್ಯೆ ನಾವು ಪಕ್ಷದಲ್ಲಿಯೇ ಪರಿಹರಿಸಿಕೊಳ್ಳುತ್ತೇವೆ: ಸಚಿವ ಎಂ.ಬಿ.ಪಾಟೀಲ್
ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಬಿ.ಕೆ.ಹರಿಪ್ರಸಾದ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಗ್ಗೆ ಏನು ಮಾತನಾಡಿದ್ದಾರೆ ಎಂದು ನನಗೆ ಗೊತ್ತಿಲ್ಲ. ಇಂಥ ವಿಷಯಗಳಲ್ಲಿ ಬಹಿರಂಗವಾಗಿ ಚರ್ಚಿಸದೇ ಪಕ್ಷದ ನಾಲ್ಕು ಗೋಡೆಗಳ ಮಧ್ಯೆ ಚರ್ಚೆ ಮಾಡುತ್ತೇವೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ್ ಹೇಳಿದರು.
ವಿಜಯಪುರ (ಡಿ.10): ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಬಿ.ಕೆ.ಹರಿಪ್ರಸಾದ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಗ್ಗೆ ಏನು ಮಾತನಾಡಿದ್ದಾರೆ ಎಂದು ನನಗೆ ಗೊತ್ತಿಲ್ಲ. ಇಂಥ ವಿಷಯಗಳಲ್ಲಿ ಬಹಿರಂಗವಾಗಿ ಚರ್ಚಿಸದೇ ಪಕ್ಷದ ನಾಲ್ಕು ಗೋಡೆಗಳ ಮಧ್ಯೆ ಚರ್ಚೆ ಮಾಡುತ್ತೇವೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ್ ಹೇಳಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಪ್ಪಟ ಕಾಂಗ್ರೆಸ್ಸಿಗರಾದ ಬಿ.ಕೆ.ಹರಿಪ್ರಸಾದ್ ಬದ್ಧತೆಯನ್ನು ನಾವ್ಯಾರೂ ಪ್ರಶ್ನೆ ಮಾಡುವುದಿಲ್ಲ, ಪ್ರಶ್ನೆ ಮಾಡಲೂ ಆಗದು. ಅನೇಕ ಬಾರಿ ಅವರು ಸಲಹೆ, ಸೂಚನೆ ಕೊಟ್ಟಿದ್ದಾರೆ. ಎಲ್ಲ ಸಮುದಾಯಗಳಿಗೂ ಅನುದಾನ ಕೊಡಿ ಎಂದು ಅವರು ಹೇಳಿರುತ್ತಾರೆ. ಹಿಂದುಳಿದ ಸಮುದಾಯಗಳ ನಾಯಕರಾದ ಅವರು ಜನರ ನೋವನ್ನು ಅರ್ಥೈಸಿಕೊಂಡವರು. ಹೀಗಾಗಿ, ಎಲ್ಲರಿಗೂ ಅನುದಾನ ಕೊಡಿ ಎಂದು ಹೇಳಿರಬಹುದು, ಅದರಲ್ಲೇನು ತಪ್ಪಿದೆ ಎಂದು ಹೇಳಿದರು.
ಚಾರಿತ್ರ್ಯಹರಣ ಶಾಸಕ ಯತ್ನಾಳ್‌ಗೆ ಶೋಭೆ ತರಲ್ಲ: ಸಚಿವ ಎಂ.ಬಿ.ಪಾಟೀಲ್
ನೋಣವಿನಕೆರೆ ಸ್ವಾಮೀಜಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಮುಖ್ಯಮಂತ್ರಿ ಆಗಲಿ ಎಂದು ಹೇಳಿಕೆ ನೀಡಿದ ಕುರಿತು ಪ್ರತಿಕ್ರಿಯಿಸಿದ ಅವರು, ರಾಜ್ಯದಲ್ಲಿ ಮುಖ್ಯಮಂತ್ರಿ ಹುದ್ದೆ ಸಧ್ಯ ಖಾಲಿ ಇಲ್ಲ. ಮುಖ್ಯಮಂತ್ರಿ ಮಾಡುವ ವಿಷಯ ಕಾಂಗ್ರೆಸ್ ಪಕ್ಷದ ವರಿಷ್ಠರ ಕೈಯಲ್ಲಿ ಇರುತ್ತದೆ. ಕಾಂಗ್ರೆಸ್ ಪಕ್ಷಕ್ಕೆ ಹೈಕಮಾಂಡ್ ಇದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ, ಹಿರಿಯ ನಾಯಕರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಇದ್ದಾರೆ. ಅವರು ಶಾಸಕರ ಅಭಿಪ್ರಾಯ ಪಡೆದು, ಯಾರನ್ನು ಮುಖ್ಯಮಂತ್ರಿ ಮಾಡಬೇಕೆಂದು ನಿರ್ಧಾರ ಮಾಡುತ್ತಾರೆ ಎಂದರು.
ರಾಜ್ಯದಲ್ಲಿ ಮುಖ್ಯಮಂತ್ರಿ ಹುದ್ದೆ ಖಾಲಿಯಿಲ್ಲ: ರಾಜ್ಯದಲ್ಲಿ ಮುಖ್ಯಮಂತ್ರಿ ಹುದ್ದೆ ಖಾಲಿಯಿಲ್ಲ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಎಂ.ಬಿ.ಪಾಟೀಲ ಹೇಳಿದರು. ನೋಣವಿನಕೆರೆ ಸ್ವಾಮೀಜಿಯವರು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಮುಖ್ಯಮಂತ್ರಿ ಆಗಲಿ ಎಂದು ನೀಡಿರುವ ಹೇಳಿಕೆ ಕುರಿತು ಈ ರೀತಿಯಾಗಿ ಪ್ರತಿಕ್ರಿಯೆ ನೀಡಿದರು. ಮುಖ್ಯಮಂತ್ರಿ ಮಾಡುವ ವಿಷಯ ಕಾಂಗ್ರೆಸ್ ಪಕ್ಷದ ವರಿಷ್ಠರ ಕೈಯಲ್ಲಿರುತ್ತದೆ.
ಮೈಯೆಲ್ಲಾ ಹಿಂದುತ್ವ ತುಂಬಿಕೊಂಡ ವ್ಯಕ್ತಿ ಶಾಸಕ ಯತ್ನಾಳ್: ಎಂ.ಪಿ.ರೇಣುಕಾಚಾರ್ಯ
ಕಾಂಗ್ರೆಸ್ ಪಕ್ಷಕ್ಕೆ ಹೈಕಮಾಂಡ್ ಇದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ, ಹಿರಿಯ ನಾಯಕರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಇದ್ದಾರೆ. ಅವರೆಲ್ಲ ವೀಕ್ಷಣೆ ಮಾಡಿ, ಶಾಸಕರ ಅಭಿಪ್ರಾಯ ಪಡೆದು, ಯಾರನ್ನು ಮುಖ್ಯಮಂತ್ರಿ ಮಾಡಬೇಕೆಂದು ನಿರ್ಧಾರ ಮಾಡುತ್ತಾರೆ ಎಂದರು. ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಬಿ.ಕೆ.ಹರಿಪ್ರಸಾದ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಗ್ಗೆ ಏನು ಮಾತನಾಡಿದ್ದಾರೆ ಎಂದು ನನಗೆ ಗೊತ್ತಿಲ್ಲ. ಇಂಥ ವಿಷಯಗಳಲ್ಲಿ ಬಹಿರಂಗವಾಗಿ ಚರ್ಚಿಸದೆ ನಾಲ್ಕು ಗೋಡೆಗಳ ಮಧ್ಯೆ ಚರ್ಚೆ ಮಾಡುತ್ತೇವೆ ಎಂದು ಹೇಳಿದರು.