Asianet Suvarna News Asianet Suvarna News

ನೂತನ ಸಿಎಂ ಬೊಮ್ಮಾಯಿಗೆ ಮಹತ್ವದ ಭರವಸೆ ನೀಡಿದ ಸಿದ್ದರಾಮಯ್ಯ

* ನೂತನ ಸಿಎಂ ಬೊಮ್ಮಾಯಿಗೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅಭಿನಂದನೆ
* ಸಾಮಾಜಿ ಜಾಲತಾಣದ ಮೂಲಕ ಅಭಿನಂದನೆ ತಿಳಿಸಿದ ಸಿದ್ದು
* ಸಹಕಾರ ನಿಮ್ಮ ಪಕ್ಷದಿಂದಲೂ ನಿಮಗೆ ಸಿಗಲಿ ಎಂದು ಹಾರೈಕೆ

we will support Siddaramaiah assures To NEW CM Basavaraj Bommai rbj
Author
Bengaluru, First Published Jul 28, 2021, 4:10 PM IST

ಬೆಂಗಳೂರು, (ಜು.28): ನೂತನ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ ಬಸವರಾಜ​ ಬೊಮ್ಮಾಯಿಯವರಿಗೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಅಭಿನಂದನೆ ತಿಳಿಸಿದ್ದಾರೆ.

ಸಮಾಜಿಕ ಜಾಲತಾಣಗಳ ಮೂಲಕ ಅಭಿನಂದನೆ ಹೇಳಿರುವ ಸಿದ್ದರಾಮಯ್ಯ, ಪ್ರಮಾಣವಚನ ಸ್ವೀಕಾರದ ಮೂಲಕ ಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸುವ ಅವಕಾಶವನ್ನು ಸಂವಿಧಾನಬದ್ದವಾಗಿ ಪಡೆದಿರುವ ಬಸವರಾಜ ಬೊಮ್ಮಾಯಿಯವರೇ ನಿಮಗೆ ಹಾರ್ದಿಕ ಅಭಿನಂದನೆಗಳು ಮತ್ತು ಶುಭಾಶಯಗಳು. ಜವಾಬ್ದಾರಿಯುತ ವಿರೋಧಪಕ್ಷವಾಗಿ ನಿಮಗೆ ನಮ್ಮ ರಚನಾತ್ಮಕ ಸಹಕಾರದ ಭರವಸೆಯನ್ನು ನೀಡಬಯಸುತ್ತೇನೆ. ಇದೇ ರೀತಿಯ ಸಹಕಾರ ನಿಮ್ಮ ಪಕ್ಷದಿಂದಲೂ ನಿಮಗೆ ಸಿಗಲಿ ಎಂದು ಹಾರೈಸಿದ್ದಾರೆ.

ಸಿಎಂ ಆದ ಮೊದಲ ದಿನವೇ ಮಹತ್ವದ ಘೋಷಣೆ ಮಾಡಿದ ಬಸವರಾಜ ಬೊಮ್ಮಾಯಿ..!

ಕಳೆದ ಎರಡು ವರ್ಷಗಳಿಂದ ರಾಜ್ಯಕ್ಕೆ ನಿರಂತರವಾಗಿ ಅನ್ಯಾಯ ಎಸಗಿರುವುದು ಕೇಂದ್ರದಲ್ಲಿರುವ ನಿಮ್ಮದೇ ಪಕ್ಷದ ಸರ್ಕಾರ. ಅಧಿಕಾರದ ಆಸೆಯೋ, ತಿಳುವಳಿಕೆಯ ಕೊರತೆಯೋ, ಇಲ್ಲವೇ ಅವ್ಯಕ್ತ ಭೀತಿಯೋ, ಹಿಂದಿನ ಮುಖ್ಯಮಂತ್ರಿಗಳು ರಾಜ್ಯಕ್ಕೆ ಆಗುತ್ತಿರುವ ಅನ್ಯಾಯದ ವಿರುದ್ದ ಸೊಲ್ಲೆತ್ತಲಿಲ್ಲ. ಆ ಧೈರ್ಯವನ್ನು ನೀವು ತೋರಿಸುತ್ತೀರಿ ಎಂದು ನಂಬಿದ್ದೇನೆ.

ಬರಪರಿಹಾರ, ಜಿಎಸ್ ಟಿ ಪಾಲು, ತೆರಿಗೆ ಹಂಚಿಕೆ, ಕೊರೊನಾ ನಿಯಂತ್ರಣಕ್ಕೆ ನೆರವು- ಈ ಎಲ್ಲ ವಿಚಾರಗಳಲ್ಲಿ ಕೇಂದ್ರ ಸರ್ಕಾರ ಕರ್ನಾಟಕದ ಬಗ್ಗೆ ತೋರಿರುವ ಮಲತಾಯಿಧೋರಣೆ ನಿಮಗೆ ತಿಳಿದಿದೆ. ಇದನ್ನು ಪ್ರಧಾನಿ ಮೋದಿ ಮತ್ತು ಸಂಬಂಧಿತ ಸಚಿವರ ಗಮನಕ್ಕೆ ತಂದು ರಾಜ್ಯಕ್ಕೆ ನ್ಯಾಯ ಒದಗಿಸುವ ಕೆಲಸವನ್ನು ನೀವು ಆದ್ಯತೆಯಿಂದ ಮಾಡಬೇಕೆಂಬುದು ನನ್ನ ಸಲಹೆ.

ರಾಜ್ಯಕ್ಕೆ ಅನ್ಯಾಯವಾದ ಸಂದರ್ಭದಲ್ಲಿ ಸರ್ವಪಕ್ಷಗಳ ಸಭೆ ಮತ್ತು ನಿಯೋಗದ ಮೂಲಕ ನ್ಯಾಯ ಪಡೆಯುವ ಪ್ರಯತ್ನದ ಪರಂಪರೆಯೊಂದು ನಮ್ಮಲ್ಲಿದೆ. ಕಳೆದ ಎರಡು ವರ್ಷಗಳ ಅವಧಿಯಲ್ಲಿ ಸಂಸದೀಯ ಪ್ರಜಾಪ್ರಭುತ್ವದ ಬುನಾದಿಯಾದ ಈ ರೀತಿಯ ಮುಕ್ತಚರ್ಚೆ-ಸಂವಾದಗಳೇ ನಿಂತುಬಿಟ್ಟಿವೆ. ನೀವು ಇದಕ್ಕೆ ಮರುಚಾಲನೆ ನೀಡುವಿರೆಂಬ ನಿರೀಕ್ಷೆ ನನ್ನದು.

ಪ್ರಧಾನಮಂತ್ರಿ ಇಲ್ಲವೇ ಮುಖ್ಯಮಂತ್ರಿ ಸ್ಥಾನ ಪಕ್ಷಕ್ಕೆ ಸೀಮಿತವಾದುದಲ್ಲ, ಅದು ಇಡೀ ದೇಶ ಮತ್ತು ರಾಜ್ಯಕ್ಕೆ ಸಂಬಂಧಿಸಿದ್ದು. ವಿರೋಧ ಪಕ್ಷವಾಗಿ ನಮ್ಮ ನಡುವಿನ ಸೈದ್ಧಾಂತಿಕ ಸಂಘರ್ಷ ಜಾರಿಯಲ್ಲಿದ್ದರೂ ರಾಜ್ಯದ ಅಭಿವೃದ್ಧಿಯ ವಿಚಾರದಲ್ಲಿ ನಾವೆಲ್ಲ ಒಂದು ತಂಡವಾಗಿ ಕೆಲಸಮಾಡಬೇಕೆಂದು ನಿಮಗಿಂತ ವಯಸ್ಸು ಮತ್ತು ಅನುಭವದಲ್ಲಿ ಹಿರಿಯನಾದ ನನ್ನ ಸಲಹೆಯಾಗಿದೆ.

ಸಾರ್ವಜನಿಕ ವಿಷಯಕ್ಕೆ ಸಂಬಂಧಿಸಿದ ಹಾಗೆ ಹಿಂದಿನ ಮುಖ್ಯಮಂತ್ರಿಗಳಿಗೆ ಹತ್ತಾರು ಪತ್ರಗಳನ್ನು ಬರೆದರೂ ಅದಕ್ಕೆ ಪ್ರತಿಕ್ರಿಯಿಸುವ ಕನಿಷ್ಠ ಸೌಜನ್ಯವನ್ನೂ ಅವರು ತೋರಿಲ್ಲ ಎನ್ನುವುದನ್ನು ವಿಷಾದದಿಂದ ಹೇಳಬೇಕಾಗಿದೆ. ಪಾರದರ್ಶಕತೆ ಪ್ರಜಾಪ್ರಭುತ್ವದ ಆತ್ಮವಾಗಿದೆ. ನಿಮ್ಮ ಕಾಲದಲ್ಲಿಯಾದರೂ ಮಾಹಿತಿಯ ವಿನಿಮಯ ಸುಗಮವಾಗಿ ನಡೆಯುವಂತೆ ಮಾಡುವಿರೆಂದು ನಂಬಿದ್ದೇನೆ ಹೇಳಿದ್ದಾರೆ.

Follow Us:
Download App:
  • android
  • ios