Asianet Suvarna News Asianet Suvarna News
breaking news image

ಲೋಕಸಭಾ ಚುನಾವಣೆ 2024: ರಾಜ್ಯದ 28 ಕ್ಷೇತ್ರದಲ್ಲೂ ಗೆಲ್ಲುತ್ತೇವೆ, ಯಡಿಯೂರಪ್ಪ

ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಬಿ. ವೈ. ರಾಘವೇಂದ್ರ ಎರಡೂವರೆ ಲಕ್ಷ ಮತಗಳ ಅಂತರದಿಂದ ಗೆಲ್ಲುತ್ತಾರೆ. ಜೆಡಿಎಸ್ ಪಕ್ಷದ ಜೊತೆಗಿನ ಹೊಂದಾಣಿಕೆ ಪ್ರಧಾನಿ ಮೋದಿ ಅವರ ಪ್ರಭಾವ ಬಿಜೆಪಿ ಗೆಲುವಿಗೆ ಅನುಕೂಲವಾಗುತ್ತದೆ‌: ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ 

We Will Win in 28 Lok Sabha Constituencies in Karnataka Says Former CM BS Yediyurappa grg
Author
First Published May 1, 2024, 4:48 PM IST

ಶಿವಮೊಗ್ಗ(ಮೇ.01):  ರಾಜ್ಯದ 28 ಲೋಕಸಭಾ ಕ್ಷೇತ್ರದಲ್ಲಿ 28 ರಲ್ಲೂ ಗೆಲ್ಲುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ. 

ಇಂದು(ಬುಧವಾರ) ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರು, ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಬಿ. ವೈ. ರಾಘವೇಂದ್ರ ಎರಡೂವರೆ ಲಕ್ಷ ಮತಗಳ ಅಂತರದಿಂದ ಗೆಲ್ಲುತ್ತಾರೆ. ಜೆಡಿಎಸ್ ಪಕ್ಷದ ಜೊತೆಗಿನ ಹೊಂದಾಣಿಕೆ ಪ್ರಧಾನಿ ಮೋದಿ ಅವರ ಪ್ರಭಾವ ಬಿಜೆಪಿ ಗೆಲುವಿಗೆ ಅನುಕೂಲವಾಗುತ್ತದೆ‌ ಎಂದು ತಿಳಿಸಿದ್ದಾರೆ. 

ಕ್ಷೇತ್ರದ ಬಗ್ಗೆ ಗೀತಾ ಶಿವರಾಜ್‌ಕುಮಾರ್‌ಗೆ ಯಾವುದೇ ಜ್ಞಾನ ಇಲ್ಲ; ಗೆಲ್ಲಿಸಬೇಡಿ: ಹರತಾಳು ಹಾಲಪ್ಪ ಮನವಿ

ನಾಳೆಯಿಂದ ಮತ್ತೆ ನನ್ನ ಪ್ರವಾಸ ಆರಂಭವಾಗಲಿದೆ. ರಾಜ್ಯದಲ್ಲಿ ಬಿಜೆಪಿ ಪರ ವಾತಾವರಣವಿದೆ. ಅಮಿತ್ ಶಾ, ಜೆ.ಪಿ. ನಡ್ಡಾ ಪ್ರಚಾರಕ್ಕೆ ಬರುತ್ತಿದ್ದಾರೆ. ಎಚ್.ಡಿ. ಕುಮಾರಸ್ವಾಮಿ ಮತ್ತು ದೇವೇಗೌಡರು ಪ್ರಚಾರ ನಡೆಸುತ್ತಿದ್ದಾರೆ‌. ಇವೆಲ್ಲದರ ಪರಿಣಾಮ 28ಕ್ಕೆ 28 ಕ್ಷೇತ್ರಗಳಲ್ಲೂ ಗೆಲ್ಲುವ ನಮ್ಮ ಸಂಕಲ್ಪದಲ್ಲಿ ಯಶಸ್ವಿ ಆಗುತ್ತೇವೆ ಎಂದು ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ. 

Latest Videos
Follow Us:
Download App:
  • android
  • ios