ಔರಾದ್ಕರ್‌ ವರದಿ ಯಥಾವತ್‌ ಜಾರಿ ಕಷ್ಟ. ಪೊಲೀಸರಿಗೆ ವಾರದ ರಜೆ ಕೊಡಬೇಕು. ಅದನ್ನು ಅನುಷ್ಠಾನ ಮಾಡುತ್ತೇನೆ. ರಾತ್ರಿ ಪಾಳಿ ಮಾಡಿದವರಿಗೆ ವಿಶೇಷ ಭತ್ಯೆ ಕೊಡುವ ವಿಚಾರದಲ್ಲೂ ಆದಷ್ಟು ಬೇಗ ತೀರ್ಮಾನ ಕೈಗೊಳ್ಳುತ್ತೇನೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ತಿಳಿಸಿದರು. 

ಮೈಸೂರು (ಜು.02): ಔರಾದ್ಕರ್‌ ವರದಿ ಯಥಾವತ್‌ ಜಾರಿ ಕಷ್ಟ. ಪೊಲೀಸರಿಗೆ ವಾರದ ರಜೆ ಕೊಡಬೇಕು. ಅದನ್ನು ಅನುಷ್ಠಾನ ಮಾಡುತ್ತೇನೆ. ರಾತ್ರಿ ಪಾಳಿ ಮಾಡಿದವರಿಗೆ ವಿಶೇಷ ಭತ್ಯೆ ಕೊಡುವ ವಿಚಾರದಲ್ಲೂ ಆದಷ್ಟು ಬೇಗ ತೀರ್ಮಾನ ಕೈಗೊಳ್ಳುತ್ತೇನೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ತಿಳಿಸಿದರು. ಮೈಸೂರಿನಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿ, ಪೊಲೀಸ್‌ ಇಲಾಖೆಯಲ್ಲಿ 15 ಸಾವಿರ ಹುದ್ದೆ ಖಾಲಿ ಇದೆ. ಮೊದಲ ಹಂತದಲ್ಲಿ 4 ಸಾವಿರ ಪೊಲೀಸ್‌ ಪೇದೆ, 400 ಸಬ್‌ ಇನ್ಸ್‌ಪೆಕ್ಟರ್‌ ಹುದ್ದೆ ಭರ್ತಿ ಮಾಡುವುದಕ್ಕೆ ಮುಂದಾಗಿದ್ದೇವೆ ಎಂದು ಹೇಳಿದರು. 

ಸಬ್‌ ಇನ್ಸ್‌ಪೆಕ್ಟರ್‌ ಹುದ್ದೆ ನೇಮಕಾತಿ ಅಕ್ರಮ ವಿಚಾರಕ್ಕೆ ಪ್ರತಿಕ್ರಿಯಿಸಿ, ಅಕ್ರಮ ಕುರಿತ ವಿಚಾರಣೆಯಲ್ಲಿ ನ್ಯಾಯಾಲಯ ಸರ್ಕಾರದ ಅಭಿಪ್ರಾಯ ಕೇಳಿದೆ. ನ್ಯಾಯಾಲಯಕ್ಕೆ ಜುಲೈ 5 ರಂದು ನಮ್ಮ ಅಭಿಪ್ರಾಯ ತಿಳಿಸುತ್ತೇವೆ ಎಂದರು. ರಾಜ್ಯದ ವಿವಿಧ ಇಲಾಖೆಗಳಲ್ಲಿ 2.50 ಲಕ್ಷ ಹುದ್ದೆ ಖಾಲಿ ಇವೆ. ಅದನ್ನು ಭರ್ತಿ ಮಾಡುವ ಕಾರ್ಯ ಶುರುವಾಗಿದೆ ಎಂದು ಇದೇ ವೇಳೆ ಅವರು ತಿಳಿಸಿದರು.

ಯಾವುದೇ ಜವಾಬ್ದಾರಿಯಾದರೂ ಒಕ್ಕಲಿಗರು ಸಮರ್ಥವಾಗಿ ನಿಬಾಯಿಸುವರು: ಶಾಸಕ ಟಿ.ಡಿ.ರಾಜೇಗೌಡ

ಫೇಕ್‌ ನ್ಯೂಸ್‌ ತಡೆಗಟ್ಟಲು ರೂಪುರೇಷೆ ಸಿದ್ಧವಾಗುತ್ತಿದೆ: ಸೈಬರ್‌ ಕ್ರೈಂ ಹಾಗೂ ಫೇಕ್‌ ನ್ಯೂಸ್‌ ತಡೆಗಟ್ಟಲು ರೂಪುರೇಷೆಗಳನ್ನು ಸಿದ್ಧಪಡಿಸಲಾಗುತ್ತಿದೆ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್‌ ತಿಳಿಸಿದರು. ಮೈಸೂರಿನ ಸುತ್ತೂರು ಮಠಕ್ಕೆ ಶನಿವಾರ ಭೇಟಿ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇತ್ತೀಚಿನ ದಿನಗಳಲ್ಲಿ ದೇಶದಾದ್ಯಂತ ಸೈಬರ್‌ ಕ್ರೈಂ ಸಂಖ್ಯೆ ಹೆಚ್ಚಾಗುತ್ತಿದೆ. ರಾಜ್ಯದಲ್ಲೂ ಸೈಬರ್‌ ಕ್ರೈಂ ಸಂಖ್ಯೆ ಹೆಚ್ಚಳವಾಗಿದೆ. ಇದನ್ನು ತಡೆಯಲು ಕಾಯಕಲ್ಪ ನೀಡಲು ಅಗತ್ಯ ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು.

ಸೈಬರ್‌ ವಿಭಾಗವನ್ನು ಹೆಚ್ಚು ಕ್ರಿಯಾಶೀಲಗೊಳಿಸುತ್ತೇವೆ. ಜೊತೆಗೆ ಫೇಕ್‌ ನ್ಯೂಸ್‌ ಬೇರೆ ಬೇರೆ ರೀತಿಯಲ್ಲಿ ಹಾಕುತ್ತಿದ್ದಾರೆ. ರಾಜಕೀಯವಾಗಿ, ಸಮಾಜದ ಶಾಂತಿ ಕದಡಲು ಫೇಕ್‌ ನ್ಯೂಸ್‌ ಹಾಕುತ್ತಿದ್ದಾರೆ. ಇದನ್ನು ಸೂಕ್ಷ್ಮವಾಗಿ ಗಮನಿಸಲಾಗುತ್ತಿದೆ. ಫೇಕ್‌ ನ್ಯೂಸ್‌ ತಡೆಗೆ ರೂಪುರೇಷೆಗಳನ್ನು ಸಿದ್ದಪಡಿಸಲಾಗುತ್ತಿದೆ. ಕಾನೂನು ರೀತಿ ಕ್ರಮ ಕೈಗೊಳ್ಳಾಗುತ್ತದೆ ಎಂದು ಅವರು ಹೇಳಿದರು. ಯಡಿಯೂರಪ್ಪ ರಾಜ್ಯ ಸರ್ಕಾರದ ವಿರುದ್ಧ ಧರಣಿ ನಡೆಸಲು ಕರೆ ನೀಡಿರುವ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ವಿರೋಧ ಪಕ್ಷದವರನ್ನು ಧರಣಿ ಮಾಡಬೇಡಿ ಎಂದು ಯಾರು ಹೇಳಿಲ್ಲ. 

ಗ್ಯಾರಂಟಿ ಯೋಜನೆ ವಿಫಲಗೊಳಿಸಲು ಅಕ್ಕಿ ನೀಡದ ಕೇಂದ್ರ ಸರ್ಕಾರ: ಸಚಿವ ತಿಮ್ಮಾಪುರ

ಧರಣಿ ಕೂರಬೇಡಿ ಎಂದು ಯಾರು ಹೇಳಿಲ್ಲ. ಅವರು ಯಾವ ಕಾರಣಕ್ಕೆ ಧರಣಿ ಮಾಡಿದರೂ ನಾವು ಅದಕ್ಕೆ ತಕ್ಕ ಉತ್ತರ ಕೊಡುತ್ತೇವೆ ಎಂದು ತಿಳಿಸಿದರು. ಪಿಎಸ್‌ಐ ನೇಮಕಾತಿ ಹಗರಣದ ತನಿಖೆ ಪ್ರಗತಿಯಲ್ಲಿದೆ. ಅಕ್ರಮದಲ್ಲಿ ಭಾಗಿಯಾಗದ 500 ಹೆಚ್ಚು ಮಂದಿ ನ್ಯಾಯಾಲಯದ ಮೊರೆ ಹೋಗಿದ್ದಾರೆ. ಈ ಹಿಂದಿನ ಸರ್ಕಾರ ಮರು ಪರೀಕ್ಷೆ ನಡೆಸಲು ಮುಂದಾಗಿತ್ತು. ಅದಕ್ಕೂ ನ್ಯಾಯಾಲಯದಿಂದ ತಡೆಯಾಜ್ಞೆ ತರಲಾಗಿದೆ. ಬಡ್ತಿ ನೀಡಿರುವ ಪರಿಣಾಮ ಬಹುತೇಕ ಎಸ್‌ಐ ಹುದ್ದೆಗಳು ಖಾಲಿ ಬಿದ್ದಿವೆ. 1 ಸಾವಿರ ಎಸ್‌ಐ ಹುದ್ದೆಗಳನ್ನು ಭರ್ತಿ ಮಾಡುವ ಅವಶ್ಯಕತೆ ಇದೆ ಎಂದು ಅವರು ಹೇಳಿದರು.