ಭವಾನಿ ರೇವಣ್ಣ ಅವರ ಹೇಳಿಕೆಯಲ್ಲಿ ಯಾವುದೇ ತಪ್ಪಿಲ್ಲ. ಈ ದೇಶದಲ್ಲಿ ಯಾರು ಎಲ್ಲಿ ಬೇಕಾದರೂ ಸ್ಪರ್ಧಿಸಬಹುದು. ಈ ವಿಚಾರದಲ್ಲಿ ಜೆಡಿಎಸ್‌ ಪಕ್ಷ ಸಂಘಟನಾತ್ಮಕ ದೃಷ್ಟಿಯಿಂದ ಏನು ನಿರ್ಧಾರ ತೆಗೆದುಕೊಳ್ಳಬೇಕೋ ಅದನ್ನು ತೆಗೆದುಕೊಳ್ಳುತ್ತದೆ ಎಂದ ಎಚ್‌ಡಿಕೆ. 

ಹಾಸನ/ಸೋಮವಾರಪೇಟೆ/ಬಾಗಲಕೋಟೆ(ಜ.25): ಜಿಪಂ ಮಾಜಿ ಸದಸ್ಯೆ ಭವಾನಿ ರೇವಣ್ಣ ಅವರು ಹಾಸನ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸುವ ಆಸೆ ಇದೆ ಎಂದು ಹೇಳಿದರೆ ತಪ್ಪೇನಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಆಡಗಲ್‌ ಗ್ರಾಮದಲ್ಲಿ ಮಂಗಳವಾರ ಸುದ್ದಿಗಾರರ ಜತೆಗೆ ಮಾತನಾಡಿದ ಅವರು, ಭವಾನಿ ರೇವಣ್ಣ ಅವರ ಹೇಳಿಕೆಯಲ್ಲಿ ಯಾವುದೇ ತಪ್ಪಿಲ್ಲ. ಈ ದೇಶದಲ್ಲಿ ಯಾರು ಎಲ್ಲಿ ಬೇಕಾದರೂ ಸ್ಪರ್ಧಿಸಬಹುದು. ಈ ವಿಚಾರದಲ್ಲಿ ಜೆಡಿಎಸ್‌ ಪಕ್ಷ ಸಂಘಟನಾತ್ಮಕ ದೃಷ್ಟಿಯಿಂದ ಏನು ನಿರ್ಧಾರ ತೆಗೆದುಕೊಳ್ಳಬೇಕೋ ಅದನ್ನು ತೆಗೆದುಕೊಳ್ಳುತ್ತದೆ ಎಂದರು.

ಭವಾನಿ ಸ್ಪರ್ಧೆ ವರಿಷ್ಠರಿಗೆ ಬಿಟ್ಟಿದ್ದು: 

ಭವಾನಿ ರೇವಣ್ಣನವರು ಹಾಸನದಿಂದ ಜೆಡಿಎಸ್‌ ಅಭ್ಯರ್ಥಿಯಾಗಿ ಕಣಕ್ಕಿಳಿಯುವ ಹೇಳಿಕೆಗೆ ಸಂಬಂಧಿಸಿ ಕೊಡಗು ಜಿಲ್ಲೆಯ ಸೋಮವಾರಪೇಟೆಯಲ್ಲಿ ಪ್ರತಿಕ್ರಿಯಿಸಿದ ಪುತ್ರ, ಸಂಸದ ಪ್ರಜ್ವಲ್‌ ರೇವಣ್ಣ, ಇದು ದೊಡ್ಡವರಿಗೆ ಬಿಟ್ಟವಿಚಾರ ಎಂದು ಹೇಳಿದ್ದಾರೆ. ಈ ಕುರಿತು ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಅವರೇ ನಿರ್ಧರಿಸಲಿದ್ದಾರೆ. ಈ ಹಿಂದೆ ನಾನು ಕೂಡ ವಿಧಾನಸಭೆಗೆ ಸ್ಪರ್ಧಿಸಲು ಬಯಸಿದ್ದೆ, ಆದರೆ ದೇವೇಗೌಡರು ಹಾಸನ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುವಂತೆ ಸಲಹೆ ನೀಡಿದರು. ಹೀಗಾಗಿ ಭವಾನಿ ರೇವಣ್ಣ ವಿಚಾರದಲ್ಲೂ ಅವರೇ ನಿರ್ಧರಿಸುತ್ತಾರೆ ಎಂದು ಪ್ರತಿಕ್ರಿಯಿಸಿದರು.

'ಕಳ್ಳಕಾಕರ ಜೊತೆ ನಾನು ಹೋಗಲು ಸಾಧ್ಯವಿಲ್ಲ': ಜೆಡಿಎಸ್‌ಗೆ ಬಹುಮತ ನೀಡಿ ಎಂದ ಹೆಚ್‌ಡಿಕೆ

ನಾನೇ ಅಭ್ಯರ್ಥಿ ಎಂದು ಘೋಷಣೆಗೆ ಬಿಜೆಪಿಯಲ್ಲಿ ಅವಕಾಶ ಇಲ್ಲ: ಪ್ರೀತಂ ಟಾಂಗ್‌

ಹಾಸನ: 2023ರ ವಿಧಾನಸಭಾ ಚುನಾವಣೆಯಲ್ಲಿ ನಾನು ಕೂಡ ಟಿಕೆಟ್‌ ಆಕಾಂಕ್ಷಿ. ಆದರೆ ನಾನೇ ಅಭ್ಯರ್ಥಿ ಎಂದು ಘೋಷಣೆ ಮಾಡಿಕೊಳ್ಳಲು ಬಿಜೆಪಿಯಲ್ಲಿ ಅವಕಾಶವಿಲ್ಲ ಎಂದು ಶಾಸಕ ಪ್ರೀತಂ ಗೌಡ ಹೇಳಿದ್ದಾರೆ. ಈ ಮೂಲಕ ನಾನೇ ಹಾಸನದ ಜೆಡಿಎಸ್‌ ಅಭ್ಯರ್ಥಿ ಎಂದು ಘೋಷಣೆ ಮಾಡಿರುವ ಭವಾನಿ ರೇವಣ್ಣಗೆ ಟಾಂಗ್‌ ಕೊಟ್ಟಿದ್ದಾರೆ.

ಬಿಜೆಪಿ, ಜೆಡಿಎಸ್‌ ಅಲ್ಪಸಂಖ್ಯಾತರ ವಿರೋಧಿ: ಸಿದ್ದು

ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿ, ನಮ್ಮದು ರಾಷ್ಟ್ರೀಯ ಪಕ್ಷ. ಚುನಾವಣೆಗಾಗಿ ಒಂದು ಸಮಿತಿ ಇರುತ್ತದೆ. ಅವರು ಯಾವ ಕ್ಷೇತ್ರಕ್ಕೆ? ಯಾರು ಅಭ್ಯರ್ಥಿ ಸೂಕ್ತ ಎಂದು ತೀರ್ಮಾನ ಮಾಡುತ್ತಾರೆ. ಅಲ್ಲಿಯವರೆಗೆ ನಾವು ಕಾದು ನೋಡಬೇಕು, ನಾವಾಗಿಯೇ ಅಭ್ಯರ್ಥಿ ಎಂದು ಘೋಷಣೆ ಮಾಡಿಕೊಳ್ಳಲು ನಮ್ಮ ಪಕ್ಷದಲ್ಲಿ ಅವಕಾಶ ಇಲ್ಲ ಎಂದರು.

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಹಾಸನ ಕ್ಷೇತ್ರದಿಂದ ವರಿಷ್ಠರು ನನಗೆ ಟಿಕೆಟ್‌ ಕೊಡುವ ಭರವಸೆ ಇದೆ. ಆದರೆ ಭವಾನಿ ರೇವಣ್ಣ ತಾವೇ ಅಭ್ಯರ್ಥಿ ಎಂದು ಯಾವ ಅರ್ಥದಲ್ಲಿ ಹೇಳಿದ್ದಾರೋ ಗೊತ್ತಿಲ್ಲ. ಈ ವಿಚಾರದಲ್ಲಿ ಪಕ್ಷದ ಹಿರಿಯರಾದ ಎಚ್‌.ಡಿ.ದೇವೇಗೌಡ, ರೇವಣ್ಣ ಮತ್ತು ಕುಮಾರಣ್ಣ ಯಾವ ತೀರ್ಮಾನ ಕೈಗೊಳ್ಳುತ್ತಾರೋ ಅದಕ್ಕೆ ನಾವೆಲ್ಲ ಬದ್ಧ ಅಂತ ಜೆಡಿಎಸ್‌ ಟಿಕೆಟ್‌ ಆಕಾಂಕ್ಷಿ ಎಚ್‌.ಪಿ.ಸ್ವರೂಪ್‌ ತಿಳಿಸಿದ್ದಾರೆ.