Asianet Suvarna News Asianet Suvarna News

Vijayapura: ಜಿಲ್ಲಾ ಉಸ್ತುವಾರಿ ಹೊಣೆ ಯಾರಿಗೆ?: ಎಂ.ಬಿ.ಪಾಟೀಲರೋ? ಶಿವಾನಂದ ಪಾಟೀಲರೋ ಎಂಬ ಕುತೂಹಲ

ಸಿದ್ದರಾಮಯ್ಯ ಸಂಪುಟದಲ್ಲಿ ವಿಜಯಪುರ ಜಿಲ್ಲೆಗೆ ಎರಡು ಸಚಿವ ಸ್ಥಾನ ಲಭಿಸಿದ್ದು, ಈ ಇಬ್ಬರು ಸಚಿವರಲ್ಲಿ ಜಿಲ್ಲಾ ಉಸ್ತುವಾರಿ ಹೊಣೆಗಾರಿಕೆ ಯಾರ ಹೆಗಲಿಗೆ ಏರುತ್ತದೆ ಎಂಬುವುದು ಸಾರ್ವಜನಿಕ ವಲಯದಲ್ಲಿ ತೀವ್ರ ಕುತೂಹಲ ಕೆರಳಿಸಿದೆ. 

Who is in charge of Vijayapura district in charge gvd
Author
First Published Jun 1, 2023, 10:23 PM IST

ರುದ್ರಪ್ಪ ಆಸಂಗಿ

ವಿಜಯಪುರ (ಜೂ.01): ಸಿದ್ದರಾಮಯ್ಯ ಸಂಪುಟದಲ್ಲಿ ವಿಜಯಪುರ ಜಿಲ್ಲೆಗೆ ಎರಡು ಸಚಿವ ಸ್ಥಾನ ಲಭಿಸಿದ್ದು, ಈ ಇಬ್ಬರು ಸಚಿವರಲ್ಲಿ ಜಿಲ್ಲಾ ಉಸ್ತುವಾರಿ ಹೊಣೆಗಾರಿಕೆ ಯಾರ ಹೆಗಲಿಗೆ ಏರುತ್ತದೆ ಎಂಬುವುದು ಸಾರ್ವಜನಿಕ ವಲಯದಲ್ಲಿ ತೀವ್ರ ಕುತೂಹಲ ಕೆರಳಿಸಿದೆ. ಹೌದು, ವಿಜಯಪುರ ಜಿಲ್ಲೆಯಲ್ಲಿ ಸಚಿವ ಸ್ಥಾನಕ್ಕಿಂತಲೂ ಜಿಲ್ಲಾ ಉಸ್ತುವಾರಿ ಸಚಿವ ಸ್ಥಾನ ಯಾರಿಗೆ ಎಂಬುವುದು ಚರ್ಚಾಸ್ಪದ ವಿಷಯವಾಗಿದೆ. ಏಕೆಂದರೆ ಕಳೆದ ನಾಲ್ಕು ವರ್ಷಗಳವರೆಗೆ ಬಿಜೆಪಿ ಸರ್ಕಾರದ ಅಧಿಕಾರಾವಧಿಯಲ್ಲಿ ಜಿಲ್ಲೆಯಲ್ಲಿ 8 ಕ್ಷೇತ್ರಗಳ ಪೈಕಿ 4 ಸ್ಥಾನಗಳಲ್ಲಿ ಬಿಜೆಪಿ ಜಯಭೇರಿ ಬಾರಿಸಿತ್ತು. ಆದರೆ, ಒಬ್ಬರಿಗೂ ಸಚಿವ ಸ್ಥಾನ ಲಭಿಸಿರಲಿಲ್ಲ. 

ಹಾಗಾಗಿ, ಜಿಲ್ಲಾ ಉಸ್ತುವಾರಿ ಸಚಿವ ಸ್ಥಾನವೂ ಹೊರಗಿನಿಂದ ಹೇರಲಾಗಿತ್ತು. ಆದರೆ ಈ ಬಾರಿ ಪರಿಸ್ಥಿತಿ ಬೇರೆಯಾಗಿದೆ. ರಾಜ್ಯದಲ್ಲಿ ಕಾಂಗ್ರೆಸ್‌ ಸ್ಪಷ್ಟಬಹುಮತದೊಂದಿಗೆ ಅಧಿಕಾರ ಹಿಡಿದಿದೆ. ಅಷ್ಟೇಯಲ್ಲ. ವಿಜಯಪುರ ಜಿಲ್ಲೆಯಲ್ಲಿ 8 ಕ್ಷೇತ್ರಗಳ ಪೈಕಿ 6 ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಜಯಭೇರಿ ಗಳಿಸಿದೆ. ಹಾಗಾಗಿ, ಸಿದ್ದು ಸಂಪುಟದಲ್ಲಿ ಜಿಲ್ಲೆಯ ಇಬ್ಬರು ಹಿರಿಯ ರಾಜಕಾರಣಿಗಳಾದ ಎಂ.ಬಿ.ಪಾಟೀಲ, ಶಿವಾನಂದ ಪಾಟೀಲ ಅವರಿಗೆ ಸಚಿವ ಸ್ಥಾನ ಲಭಿಸಿದೆ. ಎಂ.ಬಿ.ಪಾಟೀಲ ಅವರಿಗೆ ಬೃಹತ್‌ ಹಾಗೂ ಮಧ್ಯಮ ಕೈಗಾರಿಕೆ ಸಚಿವ ಸ್ಥಾನ ನೀಡಲಾಗಿದೆ. ಶಿವಾನಂದ ಪಾಟೀಲ ಅವರಿಗೆ ಸಕ್ಕರೆ, ಜವಳಿ, ಎಪಿಎಂಸಿ ಖಾತೆಗಳನ್ನು ನೀಡಲಾಗಿದೆ. 

ಮಂಚನಬೆಲೆಗೆ ಶಾಶ್ವತ ಸೇತುವೆ ನಿರ್ಮಾಣ ಯಾವಾಗ?: ತಾತ್ಕಾಲಿಕ ಸೇತುವೆಯು ಮುಳುಗಡೆ ಸಾಧ್ಯತೆ

ಈಗ ಈ ಇಬ್ಬರು ಸಚಿವರಲ್ಲಿ ಯಾರಿಗೆ ಜಿಲ್ಲಾ ಉಸ್ತುವಾರಿ ಸಚಿವರಾಗುವ ಯೋಗ ಕೂಡಿ ಬರುತ್ತದೆ ಎಂಬುವುದನ್ನು ಜನರು ಕುತೂಹಲದಿಂದ ನೋಡುತ್ತಿದ್ದಾರೆ. ಈ ಇಬ್ಬರು ಸಚಿವರಲ್ಲಿಯೂ ತಾನು ಜಿಲ್ಲಾ ಉಸ್ತುವಾರಿ ಸಚಿವನಾಗಬೇಕು ಎಂಬ ಬಯಕೆ ಇರುವುದು ಸಹಜ. ಹಾಗಾಗಿ, ಈ ಇಬ್ಬರು ಸಚಿವರು ಜಿಲ್ಲಾ ಉಸ್ತುವಾರಿ ಸಚಿವ ಸ್ಥಾನದ ರೇಸ್‌ನಲ್ಲಿ ಇದ್ದಾರೆ ಎಂದೇ ಬೇರೆ ಹೇಳಬೇಕಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯನವರ ಆಪ್ತ ವಲಯದ ಸಚಿವರಲ್ಲಿ ಎಂ.ಬಿ. ಪಾಟೀಲ ಅವರೂ ಗುರುತಿಸಿಕೊಂಡಿದ್ದಾರೆ. ಈ ಹಿಂದೆ ಸಿದ್ದು ನೇತೃತ್ವದ ಕಾಂಗ್ರೆಸ್‌ ಸರ್ಕಾರದಲ್ಲಿ ಎಂ.ಬಿ.ಪಾಟೀಲ ಅವರು ಜಲ ಸಂಪನ್ಮೂಲ ಸಚಿವರಾಗಿದ್ದರಲ್ಲದೆ ಜಿಲ್ಲಾ ಉಸ್ತುವಾರಿ ಸಚಿವ ಸ್ಥಾನದ ಹೊಣೆಗಾರಿಕೆಯನ್ನು ಎಂ.ಬಿ.ಪಾಟೀಲರು ನಿಭಾಯಿಸಿದ ಅನುಭವವಿದೆ. ಆದರೆ ಆಗ ಜಿಲ್ಲಾ ಉಸ್ತುವಾರಿ ಸಚಿವ ಸ್ಥಾನಕ್ಕೆ ಪೈಪೋಟಿ ಇರಲಿಲ್ಲ. 

ಆದರೆ ಈಗ ಜಿಲ್ಲೆಯ ಹಿರಿಯ ರಾಜಕಾರಣಿಗಳಲ್ಲಿ ಒಬ್ಬರಾದ ಶಿವಾನಂದ ಪಾಟೀಲ ಅವರೂ ಸಚಿವರಾಗಿದ್ದಾರೆ. ಅವರೂ ಕೂಡಾ ತಮಗೂ ಜಿಲ್ಲಾ ಉಸ್ತುವಾರಿ ಸಚಿವ ಸ್ಥಾನದ ಹೊಣೆಗಾರಿಕೆ ಬೇಕು ಎಂದು ತಮ್ಮ ಹಕ್ಕನ್ನು ಪ್ರತಿಪಾದಿಸುತ್ತಿದ್ದಾರೆ ಎನ್ನಲಾಗಿದೆ. ಹಾಗಾಗಿ, ಈ ಇಬ್ಬರು ಸಚಿವರಲ್ಲಿ ಯಾರಿಗೆ ಜಿಲ್ಲಾ ಉಸ್ತುವಾರಿ ಹೊಣೆಗಾರಿಕೆ ವಹಿಸಬೇಕು ಎಂಬುವುದು ವರಿಷ್ಠರಿಗೆ ಬಿಸಿ ತುಪ್ಪವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ತಮ್ಮ ಆಪ್ತ ಎಂ.ಬಿ ಪಾಟೀಲ ಅವರನ್ನು ಬಿಟ್ಟುಕೊಡುವಂತಿಲ್ಲ. ಅದೇ ರೀತಿ ಸಚಿವ ಶಿವಾನಂದ ಪಾಟೀಲ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯನವರ ಜೊತೆಗೆ ಒಳ್ಳೆಯ ಒಡನಾಟ ಇಟ್ಟುಕೊಂಡಿದ್ದಾರೆ. 

ಅವರನ್ನು ಅಷ್ಟುಈಜಿಯಾಗಿ ನಿರ್ಲಕ್ಷ್ಯ ಮಾಡುವಂತಿಲ್ಲ. ಇದರಿಂದಾಗಿ ಈ ಇಬ್ಬರಲ್ಲಿ ಯಾರಿಗೆ ಜಿಲ್ಲಾ ಉಸ್ತುವಾರಿ ಸಚಿವ ಸ್ಥಾನದ ಜವಾಬ್ದಾರಿ ವಹಿಸಬೇಕು ಎಂಬುದು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೂ ತಲೆಬಿಸಿಯಾಗಿದೆ. ಜಿಲ್ಲಾ ಉಸ್ತುವಾರಿ ಸಚಿವ ಸ್ಥಾನ ಇಬ್ಬರಲ್ಲಿ ಯಾರಿಗಾದರೂ ನೀಡಲಿ. ತಮ್ಮ ಅಭ್ಯಂತರವಿಲ್ಲ. ಆದರೆ ಜಿಲ್ಲೆಯ ಸರ್ವಾಂಗೀಣ ಅಭಿವೃದ್ದಿಯಾಗಬೇಕು ಎಂಬುವುದು ಜಿಲ್ಲೆಯ ಜನರ ಆಶಾಭಾವನೆಯಾಗಿದೆ. ವಿಜಯಪುರ ಜಿಲ್ಲೆಗೆ ಇಬ್ಬರು ಸಚಿವರು ದೊರೆತಿರುವುದರಿಂದಾಗಿ ಬರದ ನಾಡು ವಿಜಯಪುರ ಜಿಲ್ಲೆಯಲ್ಲಿ ಅಭಿವೃದ್ಧಿ ಶೆಕೆ ಆರಂಭವಾಗಬೇಕಿದೆ. 

ಶಿಕ್ಷಣ ಕ್ಷೇತ್ರದಲ್ಲಿ ಸಾಕಷ್ಟು ಸವಾಲುಗಳಿವೆ: ಸಚಿವ ಮಧು ಬಂಗಾರಪ್ಪ

ಎಂ.ಬಿ.ಪಾಟೀಲ ಅವರು ಭಾರಿ ಮತ್ತು ಮಧ್ಯಮ ಕೈಗಾರಿಕೆ ಸಚಿವರಾಗಿದ್ದಾರೆ. ಹೀಗಾಗಿ, ಜಿಲ್ಲೆಯಲ್ಲಿ ಭಾರಿ ಮತ್ತು ಮಧ್ಯಮ ಕೈಗಾರಿಕೆಗಳ ತೀವ್ರ ಕೊರತೆಯು ನೀಗುವುದೇ ಎಂದು ಜನರು ಕೇಳುವಂತಾಗಿದೆ. ಇನ್ನಾದರೂ ಜಿಲ್ಲೆಯಲ್ಲಿ ಹೊಸ ಹೊಸ ಭಾರಿ ಹಾಗೂ ಮಧ್ಯಮ ಕೈಗಾರಿಕೆಗಳು ತಲೆ ಎತ್ತುತ್ತವೆ ಎಂಬುವುದು ಜಿಲ್ಲೆಯ ಜನರ ಆಶಾಭಾವನೆ ಹೊಂದಿದ್ದಾರೆ. ಅದರಂತೆ ಶಿವಾಂದ ಪಾಟೀಲ ಅವರು ಸಕ್ಕರೆ, ಜವಳಿ, ಎಪಿಎಂಸಿ ಸಚಿವರೂ ಆಗಿದ್ದಾರೆ. ಹಾಗಾಗಿ ಜಿಲ್ಲೆಯಲ್ಲಿ ಇನ್ನಷ್ಟುಹೆಚ್ಚಿನ ಪ್ರಮಾಣದಲ್ಲಿ ಸಕ್ಕರೆ, ಜವಳಿ, ಎಂಪಿಎಂಸಿ ಕ್ಷೇತ್ರಗಳಲ್ಲಿ ಉತ್ತೇಜನ ಸಿಗುವ ನಿರೀಕ್ಷೆಯನ್ನು ಜನರು ಇಟ್ಟುಕೊಂಡಿದ್ದಾರೆ. ಜಿಲ್ಲಾ ಉಸ್ತುವಾರಿ ಯಾರಿಗೆ ಕೊಟ್ಟರೆನಂತೆ. ನಮ್ಮ ಜಿಲ್ಲೆ ಸರ್ವಾಂಗೀಣ ಪ್ರಗತಿಯತ್ತ ಮುನ್ನಡೆಯಬೇಕು ಎಂಬುವುದು ಎಲ್ಲರ ಆಶಯವಾಗಿದೆ. ಜಿಲ್ಲೆಯ ಜನರ ಈ ಆಶಯಕ್ಕೆ ಇಬ್ಬರು ಸಚಿವರಿಂದ ಸೂಕ್ತ ಸ್ಪಂದನೆ ಸಿಗುವುದೇ? ಎಂದು ಕಾದು ನೋಡಬೇಕಿದೆ.

Follow Us:
Download App:
  • android
  • ios