ಲೋಕ ಕದನ 2024: ಹ್ಯಾಟ್ರಿಕ್ ವೀರ ಡಿಕೆಸು ವಿರುದ್ಧ ಮೈತ್ರಿ ಅಭ್ಯರ್ಥಿ ಯಾರು?
ಈ ಕ್ಷೇತ್ರದಿಂದ ಪ್ಯಾಟ್ರಿಕ್ ಗೆಲುವು ಸಾಧಿಸಿರುವ ಸಂಸದ ಡಿ.ಕೆ.ಸುರೇಶ್, ಕಳೆದ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಕರ್ನಾಟಕದಲ್ಲಿ ಗೆಲುವು ಸಾಧಿಸಿದ ಏಕೈಕ ಸಂಸದ ಕೂಡ ಹೌದು. ಅವರು ಮತ್ತೊಮ್ಮೆ ಸ್ಪರ್ಧಿಸಲು ತಯಾರಿ ನಡೆಸಿದ್ದಾರೆ. ಆದರೂ ಬೆಂಗಳೂರು ಉತ್ತರ ಕ್ಷೇತ್ರಕ್ಕೆ ಸುರೇಶ್‌ವಲಸೆ ಹೋಗಿ, ಕುಸುಮಾ ಹನುಮಂತರಾ ಯಪ್ಪ ಅವರಿಗೆ ಸ್ಪರ್ಧಿಸಲು ಇಲ್ಲಿ ಅವಕಾಶ ಕಲ್ಪಿಸುತ್ತಾರೆ ಎಂಬ ಮಾತುಗಳು ಕಾಂಗ್ರೆಸ್ ಪಾಳೆಯದಲ್ಲಿಯೇ ಕೇಳಿ ಬರುತ್ತಿವೆ.
ಎಂ.ಅಪ್ರೋಜ್ ಖಾನ್
ರಾಮನಗರ(ಜ.14): ಲೋಕಸಭಾ ಚುನಾವಣೆ ನಡೆದಾಗಲೆಲ್ಲಾ ಮೈತ್ರಿ, ಒಳ ಒಪ್ಪಂದ ಹಾಗೂ ಶತ್ರುವಿನ ಕತ್ರು ಮಿತ್ರರಾಗುವುದಕ್ಕೆ ಬೆಂಗಳೂರು ಗ್ರಾಮಾಂತರ ಕ್ಷೇತ್ರ ಸಾಕ್ಷಿಯಾಗುತ್ತಲೇ ಬಂದಿದೆ. ಈ ಬಾರಿಯೂ ಅಂತಹುದೇ ವಾತಾವರಣ ನಿರ್ಮಾಣಗೊಂಡಿದೆ.
1967ರಲ್ಲಿ ಅಸ್ತಿತ್ವಕ್ಕೆ ಬಂದ ಕನಕಪುರ ಲೋಕ ಸಭಾ ಕ್ಷೇತ್ರ ಆರಂಭದಿಂದ 1996ರ ತನಕವೂ ಕಾಂಗ್ರೆಸ್‌ನ ನೆಲೆವೀಡಾಗಿತ್ತು. ಬಳಿಕ ಇದು ಬಹುತೇಕ ಕಾಂಗ್ರೆಸ್ - ಜೆಡಿಎಸ್ ಹಣಾಹಣಿಗೆ ವೇದಿಕೆಯಾಯಿತು. 2008ರ ಕ್ಷೇತ್ರ ಪುನರ್ ವಿಂಗಡಣೆ ನಂತರ ಕನಕಪುರ ಲೋಕಸಭಾ ಕ್ಷೇತ್ರದ ಬದಲು ಬೆಂಗಳೂರು ಗ್ರಾಮಾಂತರ ಕ್ಷೇತ್ರ ಅಸ್ತಿತ್ವಕ್ಕೆ ಬಂತು. ಈಗ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ರಾಮನಗರ ಜಿಲ್ಲೆಯ ರಾಮನಗರ, ಚನ್ನಪಟ್ಟಣ, ಮಾಗಡಿ, ಕನಕಪುರ, ತುಮಕೂರು ಜಿಲ್ಲೆಯ ಕುಣಿಗಲ್ ಹಾಗೂ ಬೆಂಗಳೂರು ನಗರ ಜಿಲ್ಲೆಯ ರಾಜರಾಜೇಶ್ವರಿನಗರ, ಬೆಂಗ ಳೂರು ದಕ್ಷಿಣ ಸೇರಿ ಒಟ್ಟು 8 ವಿಧಾನಸಭಾ ಕ್ಷೇತ್ರಗಳು ಬರುತ್ತವೆ. ಈ ಕ್ಷೇತ್ರದಲ್ಲಿ ಇಲ್ಲಿವರೆಗೆ ಒಟ್ಟು 14 ಸಾರ್ವ ತ್ರಿಕ ಮತ್ತು 2 ಉಪಚುನಾವಣೆಗಳು ನಡೆದಿವೆ. ಆ ಪೈಕಿ, ಕಾಂಗ್ರೆಸ್-12, ಜೆಡಿಎಸ್-03, ಬಿಜೆಪಿ-01 ಬಾರಿ ಗೆಲುವು ಸಾಧಿಸಿದೆ. ಈಗ ಕಾಂಗ್ರೆಸ್‌ನ ಭದ್ರಕೋಟೆಯಾಗಿರುವ ಬೆಂ. ಗ್ರಾಮಾಂತರ ಲೋಕಸಭಾ ಕ್ಷೇತ್ರವನ್ನು ಕಸಿದು ಕೊಳ್ಳಲು ಜೆಡಿಎಸ್ -ಬಿಜೆಪಿ ಪ್ರಯತ್ನಿಸುತ್ತಿದೆ.
ಮಂಡ್ಯ ಲೋಕಸಭೆ ಜೆಡಿಎಸ್ ಪಾಲು? ಬಿಜೆಪಿ ನಿರ್ಧಾರಕ್ಕೆ ಸುಮಲತಾ ಕಂಗಾಲು!
2023ರ ವಿಧಾನಸಭಾ ಕ್ಷೇತ್ರ ಚುನಾವಣೆಯಲ್ಲಿ ರಾಮನಗರ ಮಾಗಡಿ, ಕನಕಪುರ, ಕುಣಿಗಲ್, ಆನೇಕಲ್ ವಿಧಾನಸಭಾ ಕ್ಷೇತ್ರಗ ಳಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸಿದರೆ, ರಾಜ ರಾಜೇಶ್ವರಿ ನಗರ, ಬೆಂಗಳೂರು ದಕ್ಷಿಣ ವಿಧಾನ ಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಹಾಗೂ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್ ಗೆದ್ದಿದೆ.
ಈ ಕ್ಷೇತ್ರದಿಂದ ಪ್ಯಾಟ್ರಿಕ್ ಗೆಲುವು ಸಾಧಿಸಿರುವ ಸಂಸದ ಡಿ.ಕೆ.ಸುರೇಶ್, ಕಳೆದ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಕರ್ನಾಟಕದಲ್ಲಿ ಗೆಲುವು ಸಾಧಿಸಿದ ಏಕೈಕ ಸಂಸದ ಕೂಡ ಹೌದು. ಅವರು ಮತ್ತೊಮ್ಮೆ ಸ್ಪರ್ಧಿಸಲು ತಯಾರಿ ನಡೆಸಿದ್ದಾರೆ. ಆದರೂ ಬೆಂಗಳೂರು ಉತ್ತರ ಕ್ಷೇತ್ರಕ್ಕೆ ಸುರೇಶ್‌ವಲಸೆ ಹೋಗಿ, ಕುಸುಮಾ ಹನುಮಂತರಾ ಯಪ್ಪ ಅವರಿಗೆ ಸ್ಪರ್ಧಿಸಲು ಇಲ್ಲಿ ಅವಕಾಶ ಕಲ್ಪಿಸುತ್ತಾರೆ ಎಂಬ ಮಾತುಗಳು ಕಾಂಗ್ರೆಸ್ ಪಾಳೆಯದಲ್ಲಿಯೇ ಕೇಳಿ ಬರುತ್ತಿವೆ.
ಚಿಕ್ಕಬಳ್ಳಾಪುರ ರಣಕಣ: ಮತ್ತೊಮ್ಮೆ ಕಾಂಗ್ರೆಸ್ ಅಭ್ಯರ್ಥಿಯಾಗಲು ಮೊಯ್ಲಿ ಕಸರತ್ತು..!
ಇನ್ನು ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ವಿಧಾನ ಪರಿಷತ್ ಸದಸ್ಯ ಸಿ.ಪಿ.ಯೋಗೇಶ್ವರ್ ಮತ್ತು ಬಿಜೆಪಿ ರಾಜ್ಯ ಮುಖ್ಯ ವಕ್ತಾರ ಅಶ್ವತ್ ನಾರಾಯಣ ಗೌಡ ನಡುವೆ ಪೈಪೋಟಿ ನಡೆದಿದೆ. ಕಳೆದ ಚುನಾವಣೆಯಲ್ಲಿ ಯೋಗೇಶ್ವರ್‌ಪುತ್ರಿ ನಿಶಾ ಯೋಗೇಶ್ವರ್ ಹೆಸರು ಕೂಡ ಚಾಲ್ತಿಗೆ ಬಂದಿತ್ತು. ಅವರಿಗ ಡಿ.ಕೆ.ಶಿವಕುಮಾರ್ ಅವರನ್ನು ಇತ್ತೀಚೆಗೆ ಭೇಟಿಯಾಗಿದ್ದು ಸಾಕಷ್ಟು ಕುತೂಹಲ ಮೂಡಿಸಿದೆ. ಭೇಟಿಯ ಉದ್ದೇಶ ಗೊತ್ತಾಗಿಲ್ಲ, ಒಂದು ವೇಳೆ ಬಿಜೆಪಿ ಸ್ಪರ್ಧೆಗೆ ಹಿಂದೇಟು ಹಾಕಿದರೆ ತಮಗೆ ಅವಕಾಶ ನೀಡುವಂತೆ ಮಾಜಿ ಶಾಸಕ ಎ.ಮಂಜುನಾಥ್ ಜೆಡಿಎಸ್ ವರಿಷ್ಠರಲ್ಲಿ ಕೇಳಿಕೊಂಡಿದ್ದಾರೆ. ಅಲ್ಲದೆ, ಕುಮಾರಸ್ವಾಮಿ ಸ್ಪರ್ಧೆ ಬಗ್ಗೆಯೂ ಗುಸು, ಗುಸು ಇದೆ. ಕಾಂಗ್ರೆಸ್‌ನಿಂದ ಡಿ.ಕೆ.ಸುರೇಶ್ ಹಾಗೂ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಸಿ.ಪಿ.ಯೋಗೇಶ್ವರ್ ಸ್ಪರ್ಧಿಸುವುದು ಬಹುತೇಕ ಖಚಿತ ಎನ್ನಲಾಗುತ್ತಿದೆ. ಆದರೆ, ಇದು ಪ್ರಾಥ ಮಿಕ ಹಂತದ ಅಂದಾಜು ಎನ್ನಬಹುದಷ್ಟೆ.
ಬೆಂಗಳೂರು ಉತ್ತರ ಕ್ಷೇತ್ರಕ್ಕೆ ಸುರೇಶ್ ವಲಸೆ ಹೋಗಿ, ಕುಸುಮಾ ಹನುಮಂತರಾಯಪ್ಪ ಅವರಿಗೆ ಸ್ಪರ್ಧಿಸಲು ಇಲ್ಲಿ ಅವಕಾಶ ಕಲ್ಪಿಸುತ್ತಾರೆ ಎಂಬ ಮಾತುಗಳು ಕಾಂಗ್ರೆಸ್ ಪಾಳಯದಲ್ಲಿಯೇ ಕೇಳಿ ಬರುತ್ತಿವೆ.