ವಾಸ್ತವವಾಗಿ ಸೋಮಣ್ಣ ಅವರ ಪುತ್ರ ಹಾಗೂ ಬಿಜೆಪಿ ಯುವ ಮುಖಂಡ ಡಾ.ಅರುಣ್ ಸೋಮಣ್ಣ ಅವರಿಗೆ ಟಿಕೆಟ್ ಕೊಡಿ ಎಂಬ ಲಿಖಿತ ಬೇಡಿಕೆಯನ್ನು ಸ್ಥಳೀಯ ಮುಖಂಡರು ಪಕ್ಷದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರನ್ನು ಭೇಟಿ ಮಾಡಿ ಸಲ್ಲಿಸಿದ್ದಾರೆ. ಆದರೆ, ಸೋಮಣ್ಣ ಅವರಿಗೆ ಈಗಾಗಲೇ ಚಾಮರಾಜನಗರ ಮತ್ತು ವರುಣಾ ಕ್ಷೇತ್ರಗಳನ್ನು ನೀಡಿರುವುದರಿಂದ ಒಂದೇ ಕುಟುಂಬಕ್ಕೆ ಮೂರು ಕ್ಷೇತ್ರಗಳನ್ನು ನೀಡುವ ಸಾಧ್ಯತೆ ತೀರಾ ಕಡಿಮೆ ಎನ್ನಲಾಗಿದೆ.
ಬೆಂಗಳೂರು(ಏ.14): ಸಚಿವ ವಿ.ಸೋಮಣ್ಣ ಅವರ ವಲಸೆ ಹಿನ್ನೆಲೆಯಲ್ಲಿ ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಯಾರನ್ನು ಕಣಕ್ಕಿಳಿಸಲಾಗುತ್ತದೆ ಎಂಬುದು ಕುತೂಹಲಕರವಾಗಿದೆ. ವಾಸ್ತವವಾಗಿ ಸೋಮಣ್ಣ ಅವರ ಪುತ್ರ ಹಾಗೂ ಬಿಜೆಪಿ ಯುವ ಮುಖಂಡ ಡಾ.ಅರುಣ್ ಸೋಮಣ್ಣ ಅವರಿಗೆ ಟಿಕೆಟ್ ಕೊಡಿ ಎಂಬ ಲಿಖಿತ ಬೇಡಿಕೆಯನ್ನು ಸ್ಥಳೀಯ ಮುಖಂಡರು ಪಕ್ಷದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರನ್ನು ಭೇಟಿ ಮಾಡಿ ಸಲ್ಲಿಸಿದ್ದಾರೆ. ಆದರೆ, ಸೋಮಣ್ಣ ಅವರಿಗೆ ಈಗಾಗಲೇ ಚಾಮರಾಜನಗರ ಮತ್ತು ವರುಣಾ ಕ್ಷೇತ್ರಗಳನ್ನು ನೀಡಿರುವುದರಿಂದ ಒಂದೇ ಕುಟುಂಬಕ್ಕೆ ಮೂರು ಕ್ಷೇತ್ರಗಳನ್ನು ನೀಡುವ ಸಾಧ್ಯತೆ ತೀರಾ ಕಡಿಮೆ ಎನ್ನಲಾಗಿದೆ.
ಒಕ್ಕಲಿಗರ ಮತ್ತು ಕುರುಬ ಸಮುದಾಯಗಳು ನಿರ್ಣಾಯಕವಾಗಿರುವ ಈ ಕ್ಷೇತ್ರದಿಂದ ಇವೆರಡು ಸಮುದಾಯಗಳಿಗೆ ಸೇರಿದವರನ್ನೇ ಕಣಕ್ಕಿಳಿಸುವುದು ಸೂಕ್ತ ಎಂಬ ಅಭಿಪ್ರಾಯ ವ್ಯಕ್ತವಾಗಿದೆ. ಕುರುಬ ಸಮುದಾಯದ ಮಾಜಿ ಮೇಯರ್ ಶಾಂತಕುಮಾರಿ, ಒಕ್ಕಲಿಗ ಸಮುದಾಯದ ಬಿಬಿಎಂಪಿ ಮಾಜಿ ಸದಸ್ಯ ದಾಸೇಗೌಡ ಅವರ ಹೆಸರುಗಳು ಸದ್ಯಕ್ಕೆ ಕೇಳಿಬರುತ್ತಿವೆ. ಬಿಬಿಎಂಬಿ ಮಾಜಿ ಸದಸ್ಯ ಉಮೇಶ್ ಶೆಟ್ಟಿಅವರ ಹೆಸರೂ ಚರ್ಚೆಯಲ್ಲಿದೆ. ಅಲ್ಲದೆ, ಅದೇ ಕ್ಷೇತ್ರದ ವ್ಯಾಪ್ತಿಯಲ್ಲಿರುವ ಒಕ್ಕಲಿಗ ಸಮುದಾಯಕ್ಕೆ ಸೇರಿದ ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಅಶ್ವತ್ಥನಾರಾಯಣ ಅವರ ಹೆಸರೂ ಚಿಂತನೆಯಲ್ಲಿದೆ ಎನ್ನಲಾಗುತ್ತಿದೆ.
ಬೈಂದೂರು: ಬರಿಗಾಲಲ್ಲಿ ಓಡಾಡುವ ಬೈಂದೂರು ಬಿಜೆಪಿ ಅಭ್ಯರ್ಥಿ..!
ಈ ನಡುವೆ ಅಚ್ಚರಿ ಅಭ್ಯರ್ಥಿಯಾಗಿ ಒಕ್ಕಲಿಗ ಸಮುದಾಯದ ವಿಧಾನಪರಿಷತ್ ಸದಸ್ಯ ತುಳಸಿ ಮುನಿರಾಜುಗೌಡ ಅವರ ಹೆಸರೂ ಪಕ್ಷದ ನಾಯಕರ ಚರ್ಚೆ ವೇಳೆ ಪ್ರಸ್ತಾಪವಾಗಿದೆ. ಆದರೆ, ಮುನಿರಾಜುಗೌಡ ಅವರು ಸ್ಪರ್ಧಿಸಲು ಒಪ್ಪುವ ಸಾಧ್ಯತೆ ಕಡಮೆ. ಅಂತಿಮವಾಗಿ ಸಚಿವ ಸೋಮಣ್ಣ ಅವರು ಒಪ್ಪುವ ಅಭ್ಯರ್ಥಿಯೇ ಗೋವಿಂದರಾಜನಗರದಿಂದ ಕಣಕ್ಕಿಳಿಯುವುದಂತೂ ನಿಶ್ಚಿತ ಎಂದು ಮೂಲಗಳು ತಿಳಿಸಿವೆ.
ಕರ್ನಾಟಕದಲ್ಲಿ ಒಂದೇ ಹಂತದಲ್ಲಿ ಮೇ 10ರಂದು ಮತದಾನ ನಡೆಯಲಿದ್ದು, ಮೇ 13ಕ್ಕೆ ಮತ ಎಣಿಕೆ ನಡೆಯಲಿದೆ. ಏಪ್ರಿಲ್ 13ಕ್ಕೆ ಚುನಾವಣೆ ಅಧಿಸೂಚನೆ ಹೊರಡಿಸಲಿದ್ದು, ಏಪ್ರಿಲ್ 13ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ. ನಾಮಪತ್ರ ಹಿಂಪಡೆಯಲು ಏಪ್ರಿಲ್ 24 ಕಡೆಯ ದಿನಾಂಕ.
