Asianet Suvarna News Asianet Suvarna News

ಕಾಂಗ್ರೆಸ್‌ನಿಂದ ಯಾರೇ ಎದುರಾಳಿಯಾದ್ರೂ 2 ಲಕ್ಷ ಲೀಡಿಂದ ಗೆಲ್ತೀನಿ: ಪ್ರತಾಪ್ ಸಿಂಹ

ಲೋಕಸಭಾ ಚುನಾವಣೆಯಲ್ಲಿ ನನ್ನ ವಿರುದ್ಧ ಕಾಂಗ್ರೆಸ್ ನಿಂದ ಯಾರೇ ಸ್ಪರ್ಧಿಸಿದರೂ 2 ಲಕ್ಷ ಮತಗಳ ಅಂತರದಿಂದ ಗೆಲ್ಲುತ್ತೇನೆ ಎಂದು ಸಂಸದ ಪ್ರತಾಪ್ ಸಿಂಹ ವಿಶ್ವಾಸ ವ್ಯಕ್ತಪಡಿಸಿದರು. 
 

Whoever contests from Congress will win by a margin of 2 lakh votes Says MP Pratap Simha gvd
Author
First Published Nov 29, 2023, 1:57 PM IST

ಮೈಸೂರು (ನ.29): ಲೋಕಸಭಾ ಚುನಾವಣೆಯಲ್ಲಿ ನನ್ನ ವಿರುದ್ಧ ಕಾಂಗ್ರೆಸ್ ನಿಂದ ಯಾರೇ ಸ್ಪರ್ಧಿಸಿದರೂ 2 ಲಕ್ಷ ಮತಗಳ ಅಂತರದಿಂದ ಗೆಲ್ಲುತ್ತೇನೆ ಎಂದು ಸಂಸದ ಪ್ರತಾಪ್ ಸಿಂಹ ವಿಶ್ವಾಸ ವ್ಯಕ್ತಪಡಿಸಿದರು. ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಒಂದು ರೀತಿ ಎಲ್ಲಾ ಪಕ್ಷಗಳ ಮತದಾರರ ಅಭ್ಯರ್ಥಿ ಇದ್ದಂತೆ. ಎಲ್ಲಾ ಪಕ್ಷದಲ್ಲೂ ಮೋದಿ ಅಭಿಮಾನಿಗಳಿದ್ದಾರೆ. ಅವರೆಲ್ಲರೂ ನನಗೆ ಮತ ಹಾಕುತ್ತಾರೆ. ಈಗ ಜೆಡಿಎಸ್ ಪಕ್ಷ ಕೂಡ ನಮ್ಮೊಂದಿಗೆ ಮೈತ್ರಿ ಮಾಡಿಕೊಂಡಿರುವುದರಿಂದ ನಮಗೆ ಹೆಚ್ಚಿನ ಬಲ ಬಂದಿದೆ ಎಂದು ಹೇಳಿದರು.

ಚುನಾವಣೆಗೂ ಹೆಸರು ಬದಲಾವಣೆಗೂ ಸಂಬಂಧ ಇಲ್ಲ: ತಮ್ಮ ಹೆಸರಿನಲ್ಲಿ ಇಂಗ್ಲಿಷ್ ಅಕ್ಷರಗಳ ಬದಲಾವಣೆ ಕುರಿತು ಪ್ರತಿಕ್ರಿಯಿಸಿದ ಅವರು, ಅದು ಸಂಖ್ಯಾಶಾಸ್ತ್ರ ಅಂತೇನೂ ಅಲ್ಲ. ನೀವು ಸಂಖ್ಯಾಶಾಸ್ತ್ರ ಎಂದರೆ ಅದು ಸಂಖ್ಯಾಶಾಸ್ತ್ರ ಅಷ್ಟೇ. ಇಂಗ್ಲಿಷ್ ಮತ್ತು ಹಿಂದಿಯಲ್ಲಿ ಹೆಸರು ಬರೆಯುವಾಗ ಸಮಸ್ಯೆಯಾಗುತ್ತಿತ್ತು. ಹೀಗಾಗಿ ಕನ್ನಡದಲ್ಲಿ ಹೆಸರು ಇರುವಂತೆ ಯತಾವತ್ತಾಗಿ ಇಂಗ್ಲಿಷ್ ನಲ್ಲಿ ಬದಲಾವಣೆ ಮಾಡಿಕೊಂಡಿದ್ದೇನೆ ಎಂದರು. ಈ ಬದಲಾವಣೆಗೂ ಚುನಾವಣೆಗೂ ಸಂಬಂಧ ಇಲ್ಲ. ಅದೇ ಹೆಸರಿನಿಂದಲೇ ನಾನು ಎರಡು ಬಾರಿ ಗೆದ್ದಿದ್ದೇನೆ. ಮೈಸೂರೇ ಗೊತ್ತಿಲ್ಲದ ನನಗೆ ಮೊದಲ ಬಾರಿ ಮೈಸೂರಿನ ಜನ ಗೆಲ್ಲಿಸಿದರು. ಎರಡನೇ ಬಾರಿಯೂ ನನ್ನನ್ನು ಇಲ್ಲಿನ ಜನರು ಗೆಲ್ಲಿಸಿದ್ದಾರೆ. ಹೀಗಾಗಿ, ಚುನಾವಣೆಗೂ ಹೆಸರು ಬದಲಾವಣೆಗೂ ಸಂಬಂಧ ಇಲ್ಲ ಎಂದು ಅವರು ಸ್ಪಷ್ಟಪಡಿಸಿದರು.

ನೇಜಾರು ಕಗ್ಗೊಲೆ ಆರೋಪಿಗೆ ಗಲ್ಲುಶಿಕ್ಷೆಯೇ ಆಗಬೇಕು: ಅಬ್ದುಲ್ ಅಜೀಂ

ಬಿಎಸ್‌ಎನ್‌ಎಲ್ ಟವರ್ ನಿರ್ಮಾಣಕ್ಕೆ ಭೂಮಿಪೂಜೆ: ಸೋಮವಾರಪೇಟೆ ತಾಲೂಕಿನ ಗರ್ವಾಲೆ- ಶಿರಂಗಳ್ಳಿ, ಹಂಡ್ಲಿ ಹಾಗೂ ಸಂಪಿಗೆದಾಳು, ಐಗೂರು ಗ್ರಾ.ಪಂ. ವ್ಯಾಪ್ತಿಯ ಯಡವನಾಡು ಗ್ರಾಮದಲ್ಲಿ ನೂತನವಾಗಿ ನಿರ್ಮಿಸಲು ಉದ್ದೇಶಿಸಿರುವ ಬಿಎಸ್‌ಎನ್‌ಎಲ್ ಟವರ್ ನಿರ್ಮಾಣಕ್ಕೆ ಸಂಸದ ಪ್ರತಾಪ್ ಸಿಂಹ ಅವರು ಭೂಮಿ ಪೂಜೆ ನೆರವೇರಿಸಿದರು. ಕೊಡಗಿನಲ್ಲಿ ಒಟ್ಟು ೬೩ ಕಡೆಗಳಲ್ಲಿ ನೂತನ ಬಿಎಸ್‌ಎನ್‌ಎಲ್ ಟವರ್ ನಿರ್ಮಾಣವಾಗಲಿದೆ. ಈಗಾಗಲೇ ೨೦ ಕಾಮಗಾರಿಗಳು ಪ್ರಾರಂಭವಾಗಿವೆ. ಮಾರ್ಚ್ ಒಳಗಡೆ ಎಲ್ಲ ಟವರ್ ನಿರ್ಮಾಣ ಕಾಮಗಾರಿ ಪೂರ್ಣಗೊಂಡು ಸೇವೆ ಒದಗಿಸುವ ಗುರಿ ಹೊಂದಲಾಗಿದೆ ಎಂದು ಸಂಸದರು ತಿಳಿಸಿದರು.

ನಂತರ ಚೌಡ್ಲು ಗ್ರಾ.ಪಂ. ವ್ಯಾಪ್ತಿಯಲ್ಲಿ ಪೂರ್ಣಗೊಂಡಿರುವ ಜಲಜೀವನ್ ಮಿಷನ್ ಯೋಜನೆಯ ಕಾಮಗಾರಿಯನ್ನು ಸಂಸದರು ಪರಿಶೀಲಿಸಿದರು. ೧.೯ ಕೋಟಿ ರು. ವೆಚ್ಚದಲ್ಲಿ ಜಲಜೀವನ್ ಮಿಷನ್ ಯೋಜನೆಯಡಿ ಚೌಡ್ಲು ಗ್ರಾ.ಪಂ. ವ್ಯಾಪ್ತಿಯಲ್ಲಿ ಚೆಕ್‌ಡ್ಯಾಂ ಹಾಗೂ ಜಾಕ್‌ವೆಲ್ ನಿರ್ಮಾಣ ಮಾಡಿ ಕುಡಿಯುವ ನೀರಿನ ಸೌಕರ್ಯ ಕಲ್ಪಿಸಲಾಗಿದೆ. ಕೆಲಸ ಪೂರ್ಣಗೊಂಡಿದ್ದು, ಈಗಾಗಲೇ ಸಾರ್ವಜನಿಕರಿಗೆ ಕುಡಿಯುವ ನೀರು ಸರಬರಾಜು ಮಾಡಲಾಗುತ್ತಿದೆ ಎಂದು ಸಂಸದರು ತಿಳಿಸಿದರು. ನಂತರ ಜೂನಿಯರ್ ಕಾಲೇಜು ಮೈದಾನದಲ್ಲಿ ಉದ್ಘಾಟನೆಗೆ ಸಿದ್ಧಗೊಂಡಿರುವ ಟರ್ಫ್ ಮೈದಾನ ಕಾಮಗಾರಿಯನ್ನು ಪರಿಶೀಲಿಸಿದ ಸಂಸದರು, ಮಾಜಿ ಶಾಸಕ ಅಪ್ಪಚ್ಚು ರಂಜನ್ ಅವರ ಪ್ರಯತ್ನದ ಫಲವಾಗಿ ಮೈದಾನ ನಿರ್ಮಾಣಗೊಂಡಿದ್ದು, ಇದರಿಂದ ಮುಂದಿನ ದಿನಗಳಲ್ಲಿ ಕ್ರೀಡಾಪಟುಗಳಿಗೆ ಹೆಚ್ಚಿನ ಅನುಕೂಲವಾಗಲಿದೆ ಎಂದು ಅಭಿಪ್ರಾಯಿಸಿದರು.

ರಿಪೇರಿ ಮಾಡದಷ್ಟು ಹದಗೆಟ್ಟಿರುವ ಬಿಜೆಪಿ ಪಕ್ಷ: ಜಗದೀಶ್‌ ಶೆಟ್ಟರ್‌

ಹೆಣ್ಣು ಭ್ರೂಣ ಹತ್ಯೆ ಪ್ರಕರಣದಲ್ಲಿ ಭಾಗಿಯಾಗಿರುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು. ಭ್ರೂಣ ಹತ್ಯೆ ಪ್ರಕರಣ ಮೈಸೂರು ಸೇರಿದಂತೆ ಮೂರು ಜಿಲ್ಲೆಗಳಿಗೆ ವಿಸ್ತರಿಸಿದೆ. ಹೀಗಾಗಿ, ರಾಜ್ಯ ಪೊಲೀಸ್ ಇಲಾಖೆ ತನಿಖೆ ನಡೆಸಿ, ತಪ್ಪಿತಸ್ಥರಿಗೆ ಶಿಕ್ಷೆ ಆಗಬೇಕು.
- ಪ್ರತಾಪ್ ಸಿಂಹ, ಸಂಸದ

Follow Us:
Download App:
  • android
  • ios