Asianet Suvarna News Asianet Suvarna News

ಚನ್ನಪಟ್ಟಣದಲ್ಲಿ ಯಾರೇ ನಿಂತರೂ ನಾನೇ ಅಭ್ಯರ್ಥಿ: ಡಿಸಿಎಂ ಡಿಕೆಶಿ

ಚನ್ನಪಟ್ಟಣ ನನ್ನ ಊರು. ಅಲ್ಲಿ ಯಾರೇ ನಿಂತರೂ ನಾನೇ ಅಭ್ಯರ್ಥಿ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು.

Whoever stands in Channapatna I am the candidate Says DCM DK Shivakumar gvd
Author
First Published Jun 23, 2024, 7:14 PM IST | Last Updated Jun 23, 2024, 7:14 PM IST

ಬೆಂಗಳೂರು (ಜೂ.23): ಚನ್ನಪಟ್ಟಣ ನನ್ನ ಊರು. ಅಲ್ಲಿ ಯಾರೇ ನಿಂತರೂ ನಾನೇ ಅಭ್ಯರ್ಥಿ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚನ್ನಪಟ್ಟಣ ಉಪಚುನಾವಣೆಯಲ್ಲಿ ನಿಮ್ಮ ಸ್ಪರ್ಧೆ ಬಗ್ಗೆ ಬೇರೆ ಬೇರೆ ಅಭಿಪ್ರಾಯ ವ್ಯಕ್ತವಾಗುತ್ತಿದೆ ಎಂದು ಕೇಳಿದಾಗ, ಯಾರು ಏನೇ ಅಭಿಪ್ರಾಯ ಹೇಳಲಿ. ಜನರ ಜತೆ ಚರ್ಚೆ ಮಾಡಿದ ಬಳಿಕ ನನ್ನ ಅಭಿಪ್ರಾಯ ತೀರ್ಮಾನಿಸುತ್ತೇನೆ. ಚನ್ನಪಟ್ಟಣ ನನ್ನ ಊರು. ಅಲ್ಲಿ ಯಾರೇ ನಿಂತರೂ ನಾನೇ ಅಭ್ಯರ್ಥಿ ಎಂದು ಹೇಳಿದರು.

ನನ್ನ ರಾಜಕೀಯ ಅಂತ್ಯ ಜನ ನಿರ್ಧರಿಸ್ತಾರೆ: ರಾಜಕಾರಣಿಗಳ ಅಂತ್ಯವನ್ನು ಜನ ತೀರ್ಮಾನಿಸುತ್ತಾರೆ. ನನ್ನ ರಾಜಕೀಯ ಅಂತ್ಯ ತೀರ್ಮಾನ ಮಾಡುವವರು ಜನರು ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ಮಾಜಿ ಸಚಿವ ಸಿ.ಪಿ.ಯೋಗೇಶ್ವರ್‌ ಅವರಿಗೆ ತಿರುಗೇಟು ನೀಡಿದರು. ಅಲ್ಲದೆ, ಉಪ ಚುನಾವಣೆಯನ್ನು ಕಾಂಗ್ರೆಸ್ ಪಕ್ಷ ನನ್ನ ನಾಯಕತ್ವದಲ್ಲಿ ಎದುರಿಸಲಿದೆ. ನಾನು ಹಾಗೂ ಸಿದ್ದರಾಮಯ್ಯ ಸೇರಿ ಚುನಾವಣೆ ನಡೆಸುತ್ತೇವೆ ಎಂದೂ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನರೇ ನನ್ನ ಹಿಂದಿರುವ ಶಕ್ತಿ. ರಾಮನಗರ, ಚನ್ನಪಟ್ಟಣದ ಜನರ ಮೇಲೆ ನನಗೆ ನಂಬಿಕೆ ಇದೆ. ಅವರ ಋಣ ತೀರಿಸಬೇಕಿದೆ. ‘ಚನ್ನಪಟ್ಟಣದಿಂದ ಸ್ಪರ್ಧೆ ಮಾಡಿದರೆ ಶಿವಕುಮಾರ್ ಅವರ ರಾಜಕೀಯ ಭವಿಷ್ಯ ಅಂತ್ಯವಾಗಲಿದೆ’ ಎಂದು ಯೋಗೇಶ್ವರ್ ಹೇಳಿಕೆ ನೀಡಿದ್ದಾರೆ. ನಮ್ಮ ರಾಜಕೀಯ ಅಂತ್ಯ ತೀರ್ಮಾನ ಮಾಡುವವರು ಜನರು. ಯೋಗೇಶ್ವರ್ ದೊಡ್ಡವರು. ಅವರ ಮಾತಿಗೆ ಪ್ರತಿಕ್ರಿಯೆ ನೀಡುವಷ್ಟು ಸಮಯ ನನ್ನ ಬಳಿ ಇಲ್ಲ. ನಾನೂ ರಾಮನಗರ ಜಿಲ್ಲೆಯವನು. ನಿಮ್ಮ ಋಣ ತೀರಿಸಲು ಬದ್ಧನಿದ್ದೇನೆ, ಶಕ್ತಿ ಕೊಡಿ ಎಂದು ಆ ಕ್ಷೇತ್ರದ ಜನರ ಬಳಿ ಕೇಳಿಕೊಂಡಿದ್ದೇನೆ. 

ಕಾಂಗ್ರೆಸ್ ಗ್ಯಾರಂಟಿಯೇ ಬೆಲೆ ಹೆಚ್ಚಳಕ್ಕೆ ಮೂಲ ಕಾರಣ: ಎಚ್‌.ಡಿ.ಕುಮಾರಸ್ವಾಮಿ

ನನ್ನ ಮೇಲೆ ವಿಶ್ವಾಸವಿದ್ದರೆ ಬೆಂಬಲ ನೀಡುತ್ತಾರೆ ಎಂದು ಪ್ರತಿಕ್ರಿಯಿಸಿದರು. ಸ್ವಪ್ರತಿಷ್ಠೆಗಾಗಿ ದೇಶದ ಸಂಪತ್ತು ಹಾಳು ಮಾಡುತ್ತಿದ್ದಾರೆ ಎಂಬ ಬಿಜೆಪಿ ಶಾಸಕ ಸುರೇಶ್ ಕುಮಾರ್ ಹೇಳಿಕೆಗೆ ಪ್ರತಿಕ್ರಿಯಿಸಿ, ‘ಚನ್ನಪಟ್ಟಣದಲ್ಲಿ ಉಪಚುನಾವಣೆ ನಡೆದರೆ ಕನಕಪುರದಲ್ಲಿ ಯಾಕೆ ಉಪಚುನಾವಣೆ ನಡೆಯುತ್ತದೆ? ನಾನು ಕನಕಪುರದ ಶಾಸಕ. ಪಕ್ಷದ ಅಧ್ಯಕ್ಷನಾಗಿ ನನ್ನ ಮೇಲೆ ಜವಾಬ್ದಾರಿ ಇದೆ. ಇದೂ ನನ್ನದೇ ಕ್ಷೇತ್ರ, ನನ್ನದೇ ನಾಯಕತ್ವ. ಸಿದ್ದರಾಮಯ್ಯ ಹಾಗೂ ನಾನು ಸೇರಿ ಚುನಾವಣೆ ನಡೆಸುತ್ತೇವೆ ಎಂದು ಉತ್ತರಿಸಿದರು.

Latest Videos
Follow Us:
Download App:
  • android
  • ios