Asianet Suvarna News Asianet Suvarna News

ಬಿಜೆಪಿಗರ ಮನೆಗೆ ಏಕೆ ಐಟಿ, ಇಡಿ ದಾಳಿ ಆಗಲ್ಲ?: ಸಚಿವ ಶಿವರಾಜ ತಂಗಡಗಿ

ಬಿಜೆಪಿಯವರ ಮನೆಗೆ ಏಕೆ ದಾಳಿಯಾಗುವುದಿಲ್ಲ? ಐಟಿ, ಇಡಿ, ಸಿಬಿಐ ಬಿಟ್ಟರೆ ಬಿಜೆಪಿಗೆ ಬೇರೆನೂ ಇಲ್ಲವೇ ಇಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ಪ್ರಶ್ನಿಸಿದ್ದಾರೆ. 

Why didnt IT ED attack BJP leaders house Says Minster Shivaraj Tangadagi gvd
Author
First Published Oct 14, 2023, 3:40 AM IST

ಕೊಪ್ಪಳ (ಅ.14): ಬಿಜೆಪಿಯವರ ಮನೆಗೆ ಏಕೆ ದಾಳಿಯಾಗುವುದಿಲ್ಲ? ಐಟಿ, ಇಡಿ, ಸಿಬಿಐ ಬಿಟ್ಟರೆ ಬಿಜೆಪಿಗೆ ಬೇರೆನೂ ಇಲ್ಲವೇ ಇಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ಪ್ರಶ್ನಿಸಿದ್ದಾರೆ. ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರ ಮನೆಯಲ್ಲಿ ಏನೂ ಇಲ್ಲವೇ? ಹಿಂದಿನ ಸರ್ಕಾರದ ಅವಧಿಯಲ್ಲಿ ಏನೇನು ತಿಂದಿದ್ದಾರೆ ಎನ್ನುವುದು ಜನರಿಗೆ ಗೊತ್ತಿದೆ. ದೆಹಲಿಯಲ್ಲಿ ಎಎಪಿ ಪಕ್ಷದವರು, ಕರ್ನಾಟಕದಲ್ಲಿ ಕಾಂಗ್ರೆಸ್ಸಿಗರು, ಆಂಧ್ರದಲ್ಲಿ ಚಂದ್ರಬಾಬು ನಾಯ್ಡು ಪಕ್ಷದವರು ಮಾತ್ರ ಇವರಿಗೆ ಕಾಣು ತ್ತಾರೆಯೇ ಎಂದು ಪ್ರಶ್ನಿಸಿದರು.

ಇನ್ನು ರಾಜ್ಯ ಸರ್ಕಾರವನ್ನು ಈಗ ಎಟಿಎಂ ಸರ್ಕಾರ ಎಂದು ಆರೋಪಿಸುವ ಬಿಜೆಪಿ ಅದನ್ನು ಫ್ರೂವ್ ಮಾಡಲಿ. ಈಗಾಗಲೇ ರಾಜ್ಯದಲ್ಲಿ ಜನರು ಬಿಜೆಪಿಯವರಿಗೆ ತಕ್ಕ ಪಾಠ ಕಲಿಸಿದ್ದು, ದೇಶದಲ್ಲಿಯೂ ಕಲಿಸಲಿದ್ದಾರೆ ಎಂದರು. ವಿದ್ಯುತ್ ಸಮಸ್ಯೆಯಿಂದ ಲೋಡ್ ಶೆಡ್ಡಿಂಗ್ ಅನಿವಾರ್ಯವಾಗಿದೆ. ಆದರೂ ರೈತರ ಹಿತದೃಷ್ಟಿಯಿಂದ ಗರಿಷ್ಠ ವಿದ್ಯುತ್ ನೀಡುವ ಪ್ರಯತ್ನ ನಡೆಯುತ್ತಿದೆ ಎಂದರು.

ಹಿಂದೂಗಳ ಹತ್ಯೆ ಕಂಡು ಹೊಟ್ಟೆ ಉರಿಯುತ್ತಿದೆ: ಕೆ.ಎಸ್‌.ಈಶ್ವರಪ್ಪ

ನೂತನ ಕಂದಾಯ ಗ್ರಾಮದಲ್ಲಿ ಹಕ್ಕುಪತ್ರ ವಿತರಿಸಿ: ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಈಗಾಗಲೇ ಹೊಸದಾಗಿ ರಚನೆಯಾಗಿರುವ ಕಂದಾಯ ಗ್ರಾಮಗಳಲ್ಲಿನ ಫಲಾನುಭವಿಗಳಿಗೆ ಶೀಘ್ರ ಹಕ್ಕುಪತ್ರ ವಿತರಿಸಲು ಸೂಕ್ತ ಕ್ರಮ ವಹಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲಾಧಿಕಾರಿ ಕಾರ್ಯಾಲಯದ ಸಭಾಂಗಣದಲ್ಲಿ ಶುಕ್ರವಾರ ಜಿಲ್ಲೆಯಲ್ಲಿ ಹೊಸದಾಗಿ ರಚಿಸಬೇಕಾಗಿರುವ ಕಂದಾಯ ಗ್ರಾಮಗಳ ಕುರಿತು ಹಾಗೂ ಈಗಾಗಲೇ ಹೊಸದಾಗಿ ರಚನೆಯಾಗಿರುವ ಕಂದಾಯ ಗ್ರಾಮಗಳಲ್ಲಿನ ಫಲಾನುಭವಿಗಳಿಗೆ ಹಕ್ಕುಪತ್ರ ವಿತರಿಸುವ ಕುರಿತು ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಿಲ್ಲೆಯ ಕೊಪ್ಪಳ ತಾಲೂಕಿನಲ್ಲಿ 8, ಗಂಗಾವತಿ-3, ಕುಷ್ಟಗಿ-6, ಯಲಬುರ್ಗಾ-7, ಕನಕಗಿರಿ-3, ಕಾರಟಗಿ-9 ಸೇರಿದಂತೆ ಒಟ್ಟು 36 ಗ್ರಾಮಗಳನ್ನು ಕಂದಾಯ ಗ್ರಾಮಗಳೆಂದು ಗುರುತಿಸಲಾಗಿದೆ. ಇವುಗಳಲ್ಲಿ 35 ಗ್ರಾಮಗಳಿಗೆ ಜಿಲ್ಲಾಧಿಕಾರಿಯಿಂದ ಪ್ರಸ್ತಾವನೆ ಸಲ್ಲಿಕೆಯಾಗಿದ್ದು, ಅದರನ್ವಯ 35 ಪ್ರಸ್ತಾವನೆಗಳಿಗೆ ಪ್ರಾಥಮಿಕ ಅಧಿಸೂಚನೆ ಹಾಗೂ 27 ಗ್ರಾಮಗಳಿಗೆ ಅಂತಿಮ ಅಧಿಸೂಚನೆ ಹೊರಡಿಸಲಾಗಿದೆ. ಅಂತಿಮ ಅಧಿಸೂಚನೆ ಹೊರಡಿಸಲು ಜಿಲ್ಲಾಧಿಕಾರಿಯಿಂದ ಎಂಟು ಪ್ರಸ್ತಾವನೆಗಳು ಬರುವುದು ಬಾಕಿ ಇದೆ. ಬಾಕಿ ಉಳಿದ ಪ್ರಕರಣಗಳಲ್ಲಿನ ಕಾನೂನಾತ್ಮಕ ಹಾಗೂ ಆಡಳಿತಾತ್ಮಕ ಸಮಸ್ಯೆಗಳನ್ನು ಬಗೆಹರಿಸಿ ಶೀಘ್ರದಲ್ಲಿ ಸಂಬಂಧಿಸಿದ ಫಲಾನುಭವಿಗಳಿಗೆ ಹಕ್ಕುಪತ್ರ ವಿತರಿಸಲು ಕ್ರಮ ವಹಿಸಿ ಎಂದು ಅವರು ತಹಶೀಲ್ದಾರರು, ತಾಪಂ, ಪಪಂ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಬಿಜೆಪಿ - ಜೆಡಿಎಸ್‌ ಮೈತ್ರಿ ತಾಪಂ, ಗ್ರಾಪಂನಲ್ಲೂ ಆಗುತ್ತೆ: ಜಿ.ಟಿ.ದೇವೇಗೌಡ

ಕೆಲವು ಪ್ರಕರಣಗಳು ನ್ಯಾಯಾಲಯದ ಹಂತದಲ್ಲಿದ್ದು, ನ್ಯಾಯಾಲಯ ತಡೆಯಾಜ್ಞೆ ನೀಡಿದೆ. ಇಂತಹ ಪ್ರಕರಣಗಳಲ್ಲಿ ಸೂಕ್ತ ದಾಖಲೆಗಳ ಸಹಿತ ನ್ಯಾಯಾಲಯಕ್ಕೆ ವಾಸ್ತವಾಂಶ ತಿಳಿಸಿ ತಡೆಯಾಜ್ಞೆ ತೆರವುಗೊಳಿಸಲು ಕ್ರಮ ವಹಿಸಬೇಕು ಎಂದರು. ಉಪ ವಿಭಾಗಾಧಿಕಾರಿಗಳು, ತಹಶೀಲ್ದಾರರ ಹಂತದಲ್ಲಿರುವ ಪ್ರಕರಣಗಳನ್ನು ಸೂಕ್ತ ರೀತಿಯಲ್ಲಿ ಪರಿಶೀಲನೆ ನಡೆಸಿ ಹಕ್ಕುಪತ್ರ ವಿತರಣೆಗೆ ಕ್ರಮ ಕೈಗೊಳ್ಳಬೇಕು. ಜಿಲ್ಲೆಯಲ್ಲಿ ಹೊಸದಾಗಿ ರಚಿಸಬೇಕಾಗಿರುವ ಕಂದಾಯ ಗ್ರಾಮಗಳಿಗೆ ಸರ್ಕಾರದ ಮಾರ್ಗಸೂಚಿ, ಮಾನದಂಡಗಳನ್ನು ಅನುಸರಿಸಿ ಅಗತ್ಯ ಕ್ರಮ ವಹಿಸಬೇಕು. ಇಂತಹ ವಿಷಯಗಳಲ್ಲಿ ಕಂದಾಯ ಇಲಾಖೆ ಅಧಿಕಾರಿಗಳು ಗಂಭೀರವಾಗಿ ಕಾರ್ಯ ನಿರ್ವಹಿಸಬೇಕು. ನಿರ್ದಿಷ್ಟ ಕಾಲಮಿತಿ ಹಾಕಿಕೊಂಡು ಅದಕ್ಕೆ ತಕ್ಕಂತೆ ಕೆಲಸ ನಿರ್ವಹಿಸಬೇಕು ಎಂದು ಅವರು ಅಧಿಕಾರಿಗಳಿಗೆ ತಿಳಿಸಿದರು.

Follow Us:
Download App:
  • android
  • ios