ಮೋದಿಯ ರೈತ ವಿರೋಧಿ ನಿಲುವಿಗೆ ದೇವೇಗೌಡರ ಮೌನವೇಕೆ?: ಸಚಿವ ಚಲುವರಾಯಸ್ವಾಮಿ
ರಾಜ್ಯದ ರೈತರಿಗೆ ಶೂನ್ಯ ಬಡ್ಡಿದರದಲ್ಲಿ ಸಾಲ ವಿತರಿಸುವ, ಸಹಕಾರ ಸಂಘಗಳಿಗೆ ನೀಡಲಾಗುವ ಸಾಲದ ಮೊತ್ತವನ್ನು ನಬಾರ್ಡ್ ಕಡಿತಗೊಳಿ ಸಿರುವುದು ರೈತ ವಿರೋಧಿ ನಿಲುವಾಗಿದೆ. ಈ ಬಗ್ಗೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಮೌನ ವಹಿಸಿರುವುದು ಸರಿಯಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ ಕೃಷಿ ಸಚಿವ ಎನ್.ಚಲುವರಾಯಸ್ವಾಮಿ
ಮಂಡ್ಯ(ನ.23): ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ನಿರಂತರವಾಗಿ ಅನ್ಯಾಯವಾಗುತ್ತಿರುವುದನ್ನು ಕಂಡೂ ರಾಜ್ಯದ ಸಂಸದರು, ವಿಪಕ್ಷ ನಾಯಕರು ಪ್ರಶ್ನಿಸದಿರುವುದು ವಿಪರ್ಯಾಸದ ಸಂಗತಿ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ ಟೀಕಿಸಿದರು.
ನಗರದ ಹೊರವಲಯದ ಸ್ಯಾಂಟೋ ಆಸತ್ರೆ ಹಿಂಭಾಗದಲ್ಲಿ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ವೇದಿಕೆಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದ ಅವರು, ಅತಿವೃಷ್ಟಿಗೆ ಪರಿಹಾರ ಕೋರಿ ಕೇಂದ್ರ ಸರ್ಕಾರಕ್ಕೆ ದಾಖಲೆ ಸಹಿತ ವರದಿ ಸಲ್ಲಿಸಿ ಮನವಿ ಮಾಡಲಾಯಿತು. ಹೈಪವರ್ ಕಮಿಟಿ ಸಭೆ ನಡೆಸಿದ ಕೇಂದ್ರ ಸರ್ಕಾರ ರೈತರ ಸಂಕಷ್ಟಕ್ಕೆ ಸ್ಪಂದಿಸಲಿಲ್ಲ. ಸಮಯದಲ್ಲಿ ಅನಿವಾರ್ಯವಾಗಿ ನಾವು ಸುಪ್ರೀಂಕೋರ್ಟ್ ಮೆಟ್ಟಿಲೇರಿದ ನಂತರ ನ್ಯಾಯಾಲಯದ ನಿರ್ದೇ ಶನದಂತೆ 3450 ಕೋಟಿ ರು. ಪರಿಹಾರ ಬಿಡುಗಡೆ ಮಾಡಿಸಲಾಯಿತು ಎಂದು ಹೇಳಿದರು. ಕಳೆದ ಐದು ವರ್ಷಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪರಿಣಾ ಮಕಾರಿಯಾಗಿ ಯಾವುದೇ ಜನಪರ ಯೋಜನೆಗಳನ್ನು ಅನುಷ್ಠಾನಗೊಳಿಸಿಲ್ಲ. ರಾಜ್ಯದ ಅನ್ನಭಾಗ್ಯ ಯೋಜನೆಗೆ ಅಕ್ಕಿಖರೀದಿಸಲು ಅವಕಾಶ ನೀಡಲಿಲ್ಲ. ಇದು ಎನ್‌ಡಿಎ ನಾಯಕರಿಗೆ ಅರ್ಥವಾಗಲಿಲ್ಲವೇ ಎಂದು ಪ್ರಶ್ನಿಸಿದರು.
ಮಗನ ಚುನಾವಣೆಗೆ ಕಂಪನಿಗಳಿಂದ ಎಚ್‌ಡಿಕೆ ರೋಲ್ ಕಾಲ್ ಮಾಡಿ ಸಾವಿರಾರು ಕೋಟಿ ಹಣ ಪಡೆದಿದ್ದಾರೆ: ಚಲುವರಾಯಸ್ವಾಮಿ
ಸಿದ್ದರಾಮಯ್ಯರಿಂದ ಜನಪರ ಯೋಜನೆ:
ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ 2013-18 ರಲ್ಲಿ ಕೈಗೆತ್ತಿಕೊಂಡಿದ್ದ ಬೆಂಗಳೂರು ಮಹಾನಗರದ 50 ಲಕ್ಷ ಮಂದಿಗೆ ಕುಡಿಯುವ ನೀರು ಪೂರೈಸುವ ಯೋಜನೆಯನ್ನು ಪೂರ್ಣಗೊಳಿಸಲು ವಿಫಲವಾದ ಜೆಡಿಎಸ್ ಹಾಗೂ ಬಿಜೆಪಿ ಸರ್ಕಾರಗಳ ನಿರ್ಲಕ್ಷತೆಯನ್ನು ಗಮನಿಸಿ, 2023ರಲ್ಲಿ ಅಧಿಕಾರಕ್ಕೆ ಬಂದ ಸಿದ್ದರಾಮಯ್ಯ ಸರ್ಕಾರವೇ ಯೋಜನೆ ಪೂರ್ಣಗೊಳಿಸಿ ಲೋಕಾರ್ಪಣೆಗೊಳಿಸಿ ರುವುದು ಸಾಧನೆಯಲ್ಲವೇ ಎಂದು ಪ್ರಶ್ನಿಸಿದರು.
ಚುನಾವಣಾ ಪೂರ್ವದಲ್ಲಿ ಭರವಸೆ ನೀಡಿದ್ದ 5 ಗ್ಯಾರಂಟಿಗಳ ಅನುಷ್ಠಾನ, ಎತ್ತಿನಹೊಳೆ ಯೋಜನೆ ಜಾರಿ, ಭದ್ರಾ ಡ್ಯಾಂ ಗೇಟ್‌ಗಳ ದುರಸ್ತಿಗೆ ತುರ್ತು ಕ್ರಮ ವಹಿಸಿ ರೈತರ ಬಗ್ಗೆ ಕಾಳಜಿ ತೋರಿರುವುದು ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿಗಳ ಕಾರ್ಯದಕ್ಷತೆಯಾಗಿದೆ ಎಂದು ತಿಳಿಸಿದರು.
ಶಾಸಕ ರವಿಕುಮಾರ್‌ಗಣಿಗ, ರಮೇಶ್ ಬಾಬು, ವಿಧಾನ ಪರಿಷತ್ ಸದಸ್ಯರಾದ ಮಧು ಜಿ. ಮಾದೇಗೌಡ, ದಿನೇಶ್ ಗೊಳೀಗೌಡ, ವಿವೇಕಾ ನಂದ, ಮೈಷುಗರ್‌ಅಧ್ಯಕ್ಷ ಸಿ.ಡಿ.ಗಂಗಾ ಧರ್, ನಗರಸಭೆ ಅಧ್ಯಕ್ಷ ಪ್ರಕಾಶ್, ಡಾ ಅಧ್ಯಕ್ಷ ನಹೀಂ ಇತರರಿದ್ದರು.
ಸಾಹಿತ್ಯ ಸಮ್ಮೇಳನ ಯಶಸ್ವಿಗೆ ಸಚಿವರ ಮನವಿ ಮಂಡ್ಯದಲ್ಲಿ ನಡೆಸಲುದ್ದೇಶಿಸಿರುವ ಸಾಹಿತ್ಯ ಸಮ್ಮೇಳನದ ಯಶಸ್ಸಿಗೆ ಎಲ್ಲರೂ ಕೈಜೋಡಿಸಬೇಕು. ಯಾವುದೇ ಭಿನ್ನಾಭಿಪ್ರಾಯವಿದ್ದರೂ ಅದನ್ನು ತೋರ್ಪಡಿಸದೆ ರಾಜ್ಯದಲ್ಲೇ ಇತಿಹಾಸ ಸೃಷ್ಟಿಸುವ ಸಮ್ಮೇಳನ ನಡೆಸಲು ಸಹಕಾರ ನೀಡಬೇಕು ಎಂದು ಮನವಿ ಮಾಡಿದರು. ಸಮ್ಮೇಳನದಲ್ಲಿ ನಾನು ಸಚಿವನಾಗಿ ಭಾಗವಹಿಸುತ್ತಿಲ್ಲ. ಕನ್ನಡಾಭಿಮಾನಿಯಾಗಿ, ಸಾಮಾನ್ಯ ಕಾರ್ಯಕರ್ತನಾಗಿ ಕೆಲಸ ಮಾಡುತ್ತಿದ್ದೇನೆ. ಸಮ್ಮೇಳನ ಹಾಗೂ ಜಿಲ್ಲೆಯ ಗೌರವವನ್ನು ಎತ್ತಿ ಹಿಡಿಯುವ ಕೆಲಸವನ್ನು ಎಲ್ಲರೂ ಒಗ್ಗೂಡಿ ಮಾಡಬೇಕು ಎಂದು ಸಲಹೆ ನೀಡಿದರು. ಈ ಬಗ್ಗೆ ಟೀಕೆ ಟಿಪ್ಪಣಿಗಳು ಬಂದರೂ ಅದರ ಬಗ್ಗೆ ನಾನು ಪ್ರಶ್ನೆ ಮಾಡುವುದಿಲ್ಲ. ಎಲ್ಲವನ್ನೂ ಸ್ವೀಕರಿಸುತ್ತೇನೆ. ಸಾಹಿತ್ಯ ಸಮ್ಮೇಳನವನ್ನು ಯಶಸ್ವಿಗೊಳಿಸುವುದಷ್ಟೇ ನಮ್ಮ ಕೆಲಸವಾಗಿದೆ. ಈ ಹಿನ್ನೆಲೆಯಲ್ಲಿ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಜವಾಬ್ದಾರಿ ನೀಡಿ ಕೆಲಸ ಮಾಡುತ್ತಿದ್ದೇವೆ ಎಂದು ಹೇಳಿದರು.
ಮೋದಿಯ ರೈತವಿರೋಧಿ ನಿಲುವಿಗೆ ದೇವೇಗೌಡರ ಮೌನವೇಕೆ?
ರಾಜ್ಯದ ರೈತರಿಗೆ ಶೂನ್ಯ ಬಡ್ಡಿದರದಲ್ಲಿ ಸಾಲ ವಿತರಿಸುವ, ಸಹಕಾರ ಸಂಘಗಳಿಗೆ ನೀಡಲಾಗುವ ಸಾಲದ ಮೊತ್ತವನ್ನು ನಬಾರ್ಡ್ ಕಡಿತಗೊಳಿ ಸಿರುವುದು ರೈತ ವಿರೋಧಿ ನಿಲುವಾಗಿದೆ. ಈ ಬಗ್ಗೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಮೌನ ವಹಿಸಿರುವುದು ಸರಿಯಲ್ಲ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಅಸಮಾಧಾನ ವ್ಯಕ್ತಪಡಿಸಿದರು.
ಆರ್‌ಬಿಐ ಮೂಲಕ ನಬಾರ್ಡ್‌ಗೆ ಹೆಚ್ಚು ಹಣ ನೀಡಿ, ರಾಷ್ಟ್ರದ ಕೃಷಿಕರಿಗೆ ನೆರವಾಗಬೇಕಿದ್ದ ಕೇಂದ್ರ ಸರ್ಕಾರ ಸಾಲದ ಮೊತ್ತವನ್ನು ಶೇ.50 ರಷ್ಟು ಕಡಿತಗೊಳಿಸಿ ರೈತವಿರೋಧಿ ನಿಲುವು ತಾಳಿದೆ. ಈಬಗ್ಗೆ ಮಾಜಿ ಪ್ರದಾನಿದೇವೇಗೌಡರು ಚಕಾರವೆತ್ತದಿರುವುದು ಈ ನಾಡಿನ ದುರಂತ ವಲ್ಲವೇ ಎಂದು ಪ್ರಶ್ನಿಸಿದರು. ನಾವು ರೈತರ ಪರ ಎನ್ನುವವರು ರೈತರಿಗೆ ಅನ್ಯಾಯವಾದಾಗ ಏಕೆ ಮಾತನಾಡುತ್ತಿಲ್ಲ? ನಬಾರ್ಡ್‌ನಿಂದ ನಿಗದಿಪಡಿಸಿದಷ್ಟು ಹಣ ಬಾರದಿರುವುದರ ವಿರುದ್ಧ ಧ್ವನಿ ಎತ್ತುತ್ತಿಲ್ಲವೇಕೆ? ಇದು ರೈತರ ಪರವಾದ ನಿಲುವೇ. ಇದನ್ನು ಜನರೇ ತೀರ್ಮಾನಿಸಬೇಕುಎಂದು ಹೇಳಿದರು. ಮಾಜಿ ಮುಖ್ಯಮಂತ್ರಿಗಳಾದ ರಾಮಕೃಷ್ಣ ಹೆಗಡೆ, ಜೆ.ಎಚ್.ಪಟೇಲ್ ವಿರುದ್ಧ ಹೋರಾಟ ನಡೆಸಿದ್ದ ದೇವೇಗೌಡರು ಪ್ರಧಾನಿ ನರೇಂದ್ರ ಮೋದಿಯವರ ರೈತ ವಿರೋಧಿ ನಿಲುವಿನ ಬಗ್ಗೆಯೂ ಹೋರಾಟ ನಡೆಸಬೇಕಿತ್ತು. ಆದರೆ, ಏಕೆ ಮೌನ ವಹಿಸಿದ್ದಾರೆ ಅರ್ಥವಾಗುತ್ತಿಲ್ಲ ಎಂದ ಅವರು ಈ ಬಗ್ಗೆ ಕೇಂದ್ರ ಸಚಿವರಾದ ಕುಮಾರಸ್ವಾಮಿ, ಪ್ರಹ್ಲಾದ್ ಜೋಶಿ ಹಾಗೂ ಬಿ.ಎಸ್. ಯಡಿಯೂರಪ್ಪ ಮೌನವಾಗಿರುವ ಗುಟ್ಟೇನು ಎಂದು ಪ್ರಶ್ನಿಸಿದರು.
ಕುಮಾರಸ್ವಾಮಿಗೆ 'ಕರಿಯ..' ಎಂದ ಜಮೀರ್, ಜನಾಂಗೀಯ ದ್ವೇಷದ ಮಾತಿಗೆ ಜೆಡಿಎಸ್
ನರೇಂದ್ರಸ್ವಾಮಿಗೆ ಸಚಿವ ಸ್ಥಾನ ನೀಡುವಂತೆ ನಿರಂತರ ಒತ್ತಾಯ:
ಮಳವಳ್ಳಿ ಶಾಸಕ ಪಿ. ಎಂ.ನರೇಂದ್ರಸ್ವಾಮಿ ಅವರಿಗೆ ಪಕ್ಷದ ಹಿರಿತನ ಗಮನಿಸಿ, ಸಚಿವ ಸ್ಥಾನ ನೀಡಬೇಕೆಂಬ ಒತ್ತಾ ಯಕ್ಕೆ ಜಿಲ್ಲೆಯ ಶಾಸಕರು, ಮಾಜಿ ಶಾಸಕರು ಸೇರಿದಂತೆ ಒಕ್ಕೊರಲ ಆಗ್ರಹವಿದೆ. ಸಚಿವ ಸ್ಥಾನ ಸಿಗದ ಹಿನ್ನೆಲೆಯಲ್ಲಿ ನರೇಂದ್ರಸ್ವಾಮಿ ನೋವಿ ನಲ್ಲಿದ್ದಾರೆ. ಅದಕ್ಕೆ ಬೇರೆ ಅರ್ಥ ಕಲ್ಪಿಸುವ ಅಗತ್ಯ ವಿಲ್ಲವೆಂದು ಸಚಿವ ಚಲುವರಾಯಸ್ವಾಮಿ ಹೇಳಿದರು.
ಪಕ್ಷ ಅಧಿಕಾರಕ್ಕೆ ಬಂದ ವೇಳೆಯಲ್ಲೇ ಹೈ ಕಮಾಂಡ್, ಮುಖ್ಯಮಂತ್ರಿ, ಉಪಮುಖ್ಯ ಮಂತ್ರಿ ನೀಡಿರುವ ಭರವಸೆಯನ್ನು ಕಾರಣಾ ಂತರದಿಂದ ಈಡೇರಿಸಲು ಸಾಧ್ಯವಾಗಿಲ್ಲ. ಅದು ಮುಂದಿನ ಸಂಪುಟ ವಿಸ್ತರಣೆ ಅಥವಾ ಪುನಾರಚನೆ ವೇಳೆ ನರೇಂದ್ರಸ್ವಾಮಿಗೆ ಸಚಿವ ಗಾದಿ ಒಲಿಯವುದು ಗ್ಯಾರಂಟಿ ಎಂದು ವಿಶ್ವಾಸ ವ್ಯಕ್ತಪಡಿದರು.
ನಮ್ಮಲ್ಲಿ ಯಾವುದೇ ಭಿನ್ನಾಭಿಪ್ರಾಯವಿಲ್ಲ. ನಾವು ಪ್ರಾಮಾಣಿಕವಾಗಿ ಅವರಿಗೆ ಸಂಪುಟದಲ್ಲಿ ಅವಕಾಶ ನೀಡಬೇಕು ಎಂದು ಒತ್ತಾಯ ಮಾಡುತ್ತಿದ್ದೇವೆ. ನಾನು, ನರೇಂದ್ರಸ್ವಾಮಿ ಮುಂದೆಯೂ ಜೊತೆಯಲ್ಲಿಯೇ ಇರುತ್ತೇವೆ ಎಂದರು.