ರಾಮಭಕ್ತರ ಮೇಲೆ ಕಾಂಗ್ರೆಸ್ಸಿಗೆ ಇಷ್ಟೊಂದು ಆಕ್ರೋಶ ಏಕೆ?: ಶಾಸಕ ವೇದವ್ಯಾಸ್‌ ಕಾಮತ್

ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆಗೆ ಮುಹೂರ್ತ ಸನ್ನಿಹಿತವಾಗಿರುವಂತೆಯೇ ರಾಜ್ಯದ ಕರಸೇವಕರ ಮೇಲಿನ ದುರುದ್ದೇಶಪೂರಿತ ಪ್ರಕರಣಗಳನ್ನು ಮತ್ತೆ ಮುನ್ನೆಲೆಗೆ ತಂದು ಕಾಂಗ್ರೆಸ್ ಸರ್ಕಾರ ತನ್ನ ಹಿಂದೂ ವಿರೋಧಿ ನೀತಿಯನ್ನು ಹಾಗೂ ಅಲ್ಪಸಂಖ್ಯಾತರ ಓಲೈಕೆ ರಾಜಕಾರಣವನ್ನು ಮುಂದುವರಿಸಿದೆ ಎಂದು ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
 

Why is Congress so angry with Ram devotees Says MLA Vedavyas Kamath gvd

ಮಂಗಳೂರು (ಜ.03): ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆಗೆ ಮುಹೂರ್ತ ಸನ್ನಿಹಿತವಾಗಿರುವಂತೆಯೇ ರಾಜ್ಯದ ಕರಸೇವಕರ ಮೇಲಿನ ದುರುದ್ದೇಶಪೂರಿತ ಪ್ರಕರಣಗಳನ್ನು ಮತ್ತೆ ಮುನ್ನೆಲೆಗೆ ತಂದು ಕಾಂಗ್ರೆಸ್ ಸರ್ಕಾರ ತನ್ನ ಹಿಂದೂ ವಿರೋಧಿ ನೀತಿಯನ್ನು ಹಾಗೂ ಅಲ್ಪಸಂಖ್ಯಾತರ ಓಲೈಕೆ ರಾಜಕಾರಣವನ್ನು ಮುಂದುವರಿಸಿದೆ ಎಂದು ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೋರ್ಟ್ ನಿರ್ದೇಶನದ ಮೇರೆಗೆ ಈ ಕ್ರಮ ಕೈಗೊಳ್ಳಲಾಗಿದೆ.

ಇದರಲ್ಲಿ ಸರ್ಕಾರದ ಯಾವುದೇ ಒತ್ತಡ ಇಲ್ಲ ಎಂದು ಹುಬ್ಬಳ್ಳಿ ಧಾರವಾಡ ಪೊಲೀಸ್ ಆಯುಕ್ತರು ಹೇಳಿಕೆ ನೀಡಿದರೆ, ಸ್ವತಃ ಗೃಹ ಸಚಿವರೇ ಹಳೆಯ ಪ್ರಕರಣಗಳನ್ನು ಇತ್ಯರ್ಥಗೊಳಿಸಲು ಸೂಚನೆ ನೀಡಿದ್ದೆ, ಅದರಂತೆ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿಕೆ ನೀಡಿದ್ದಾರೆ. ಇಲ್ಲಿ ಯಾರ ಮಾತು ನಿಜ? ಏನೇ ಇದ್ದರೂ ಕಾಂಗ್ರೆಸ್ ಸರ್ಕಾರ ಈ ಮೂಲಕ ಹಿಂದೂ ವಿರೋಧಿಯಾಗಿ ನಡೆದುಕೊಳ್ಳುತ್ತಿರುವುದಂತೂ ಸ್ಪಷ್ಟ. ಅದರಲ್ಲಿ ಯಾವುದೇ ಸಂಶಯವೂ ಇಲ್ಲ. ರಾಮಭಕ್ತರ ಮೇಲೆ ಇಷ್ಟೊಂದು ಹಗೆ ಸಾಧಿಸುವ ಕಾಂಗ್ರೆಸ್ಸಿನವರು ರಾಮಭಕ್ತರ ಮತವೇ ನಮಗೆ ಬೇಡ ಎಂದು ಹೇಳಲಿ ನೋಡೋಣ ಎಂದು ಅವರು ಸವಾಲು ಹಾಕಿದರು.

ಲೋಕಸಭೆ ಚುನಾವಣೆಗೆ ಕಾಂಗ್ರೆಸ್‌ನಿಂದ ಯೋಗ್ಯ ಅಭ್ಯರ್ಥಿ: ಸಚಿವ ಮಂಕಾಳ ವೈದ್ಯ

ಇಡೀ ದೇಶದ ಜನತೆ ರಾಮ ಮಂದಿರದ ಸಂಭ್ರಮದಲ್ಲಿರುವಾಗ ನಮ್ಮ ರಾಜ್ಯದಲ್ಲಿ ಮಾತ್ರ ಕಾಂಗ್ರೆಸ್ ಸರ್ಕಾರ ರಾಮಭಕ್ತರ ಮೇಲೆ ಆಕ್ರೋಶದಲ್ಲಿದೆ. ಹಾಗಾಗಿಯೇ ಕರಸೇವಕರು ಹಾಗೂ ಹಿಂದೂಪರ ಕಾರ್ಯಕರ್ತರಿಗೆ ಉದ್ದೇಶಪೂರ್ವಕವಾಗಿ ಕಿರುಕುಳ ನೀಡಲು ಮುಂದಾಗಿದೆ. ಇನ್ನಷ್ಟು ಹೋರಾಟಗಾರರನ್ನು ಗಡಿಪಾರು ಮಾಡಲು ಸಿದ್ಧತೆ ನಡೆಸಿರುವುದು ಕಾಂಗ್ರೆಸ್ ಹಿಂದೂಗಳನ್ನು ಧಮನಿಸುವ ನೀತಿಗೆ ಸಾಕ್ಷಿ. ಇದಕ್ಕೆ ಹೆದರುವ ಪ್ರಶ್ನೆಯೇ ಇಲ್ಲ ಎಂದು ಶಾಸಕ ವೇದವ್ಯಾಸ್‌ ಕಾಮತ್‌ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಪಿಎಂ ಸ್ವನಿಧಿ, ಪಿಎಂ ವಿಶ್ವಕರ್ಮ ಯೋಜನೆಗಳ ಸೌಲಭ್ಯ ಪಡೆಯಿರಿ: ಪರಧಾನ ಮಂತ್ರಿಗಳ ಮಹತ್ವಾಕಾಂಕ್ಷಿ ಯೋಜನೆಯಾದ ‘ಪಿಎಂ ಸ್ವನಿಧಿ’ ‘ಪಿಎಂ ವಿಶ್ವಕರ್ಮ’ ಸೇರಿದಂತೆ ಪ್ರಧಾನ ಮಂತ್ರಿಗಳ ವಿವಿಧ ಯೋಜನೆಯಡಿಯಲ್ಲಿ ನೀಡಲಾಗುವ ಸಾಲ ಸೌಲಭ್ಯಗಳ ಬಗ್ಗೆ ನಗರದ ಕೊಡಿಯಾಲ್ ಬೈಲ್‌ನ ಅಟಲ್ ಸೇವಾ ಕೇಂದ್ರದಲ್ಲಿ ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ್ ಕಾಮತ್ ಅವರು ಬೀದಿಬದಿ ವ್ಯಾಪಾರಿಗಳ ಸಂಘದ ಹಾಗೂ ವಿವಿಧ ಸಮುದಾಯಗಳ, ಕ್ಷೇತ್ರಗಳ ಮುಖಂಡರ ಸಭೆ ನಡೆಸಿದರು.

ಪಕ್ಷದ ಆಗುಹೋಗು ಬಗ್ಗೆ ಸಾರ್ವಜನಿಕ ಚರ್ಚೆ ಬೇಡ: ಪ್ರಲ್ಹಾದ್‌ ಜೋಶಿ

ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು, ಬಿಜೆಪಿ ದಕ್ಷಿಣ ಮಂಡಲದ ಅಧ್ಯಕ್ಷ ವಿಜಯ್ ಕುಮಾರ್ ಶೆಟ್ಟಿ, ಮಾಜಿ ಮೇಯರ್ ದಿವಾಕರ್ ಪಾಂಡೇಶ್ವರ, ಮಾಜಿ ಉಪಮೇಯರ್ ಪೂರ್ಣಿಮಾ, ಬಿಜೆಪಿ ದಕ್ಷಿಣ ಮಂಡಲದ ಪ್ರಧಾನ ಕಾರ್ಯದರ್ಶಿ ರೂಪಾ ಡಿ ಬಂಗೇರ, ಪಾಲಿಕೆ ಸ್ಥಾಯಿ ಸಮಿತಿ ಅಧ್ಯಕ್ಷರಾದ ಗಣೇಶ್ ಕುಲಾಲ್, ಭರತ್ ಸೂಟರ್ ಪೇಟೆ, ಬಿಜೆಪಿ ಹಿರಿಯ ಮುಖಂಡ ನಿತಿನ್ ಕುಮಾರ್ ಇದ್ದರು.

Latest Videos
Follow Us:
Download App:
  • android
  • ios