ವಿಧಾನಪರಿಷತ್ ಬಿಜೆಪಿ ಸದಸ್ಯರು ಮಹಿಳಾ ಐಎಎಸ್ ಅಧಿಕಾರಿಗೆ ಪಾಕಿಸ್ತಾನಿ ಎಂದಿದ್ದಾರೆ. ಈ ಬಗ್ಗೆ ಏನು ಕ್ರಮ ಕೈಗೊಂಡಿದ್ದಾರೆ. ನ್ಯಾಯಾಂಗದವರು ಸುಮೋಟೊ ಪ್ರಕರಣ ದಾಖಲಿಸಿಕೊಂಡು ಯಾಕೆ ಖಂಡಿಸಲು ಆಗಿಲ್ಲ? ಎಂದು ಸಚಿವ ಪ್ರಿಯಾಂಕ್ ಖರ್ಗೆ ಪ್ರಶ್ನೆ ಮಾಡಿದ್ದಾರೆ.
ಬೆಂಗಳೂರು (ಮೇ.30): ವಿಧಾನಪರಿಷತ್ ಬಿಜೆಪಿ ಸದಸ್ಯರು ಮಹಿಳಾ ಐಎಎಸ್ ಅಧಿಕಾರಿಗೆ ಪಾಕಿಸ್ತಾನಿ ಎಂದಿದ್ದಾರೆ. ಈ ಬಗ್ಗೆ ಏನು ಕ್ರಮ ಕೈಗೊಂಡಿದ್ದಾರೆ. ನ್ಯಾಯಾಂಗದವರು ಸುಮೋಟೊ ಪ್ರಕರಣ ದಾಖಲಿಸಿಕೊಂಡು ಯಾಕೆ ಖಂಡಿಸಲು ಆಗಿಲ್ಲ? ಎಂದು ಸಚಿವ ಪ್ರಿಯಾಂಕ್ ಖರ್ಗೆ ಪ್ರಶ್ನೆ ಮಾಡಿದ್ದಾರೆ. ಹುಬ್ಬಳ್ಳಿ ಗಲಭೆ ಪ್ರಕರಣದ 43 ಮಂದಿ ಆರೋಪಿಗಳ ವಿರುದ್ಧದ ಪ್ರಕರಣ ರದ್ದು ಮಾಡಿದ್ದ ರಾಜ್ಯ ಸರ್ಕಾರ ಆದೇಶ ರದ್ದುಪಡಿಸಿರುವ ಹೈಕೋರ್ಟ್ ಆದೇಶದ ಕುರಿತು ಪ್ರಿಯಾಂಕ್ ಮಾತನಾಡಿದರು.
ಹುಬ್ಬಳ್ಳಿ ಗಲಭೆ ಪ್ರಕರಣದ ಆರೋಪಿಗಳ ಮೇಲಿನ ಕೇಸು ಹಿಂಪಡೆದಿದ್ದು ತುಷ್ಟೀಕರಣದ ರಾಜಕಾರಣ ಎಂಬ ಆರೋಪಕ್ಕೆ ತಿರುಗೇಟು ನೀಡಿದ ಪ್ರಿಯಾಂಕ್ , ಕೇಸು ದಾಖಲಿಸಿದರೂ ತುಷ್ಟೀಕರಣ, ದಾಖಲಿಸದಿದ್ದರೂ ತುಷ್ಟೀಕರಣ, ಹಿಂಪಡೆದರೂ ತುಷ್ಟೀಕರಣ. ಬಿಜೆಪಿ ಶಾಸಕ ಅತ್ಯಾ ಚಾರ, ದಲಿತರ ನಿಂದನೆ ಸಾಬೀತಾಗಿದೆ ಅವರ ಮೇಲೆ ಏನು ಕ್ರಮ ಆಗಿದೆ? ಎಂದು ಬಿಜೆಪಿ ನಾಯಕರನ್ನು ಪ್ರಶ್ನಿಸಿದರು. ಇಡೀ ರಾಷ್ಟ್ರದಲ್ಲಿ ಪೋಕ್ಸೊ ಪ್ರಕರಣ ಹೇಗೆ ಹ್ಯಾಂಡಲ್ ಮಾಡಬೇಕು ಎಂದು ಮಾನದಂಡ ಇದೆ. ಇಲ್ಲಿ ಏನಾಗುತ್ತಿದೆ? ಏನು ಕ್ರಮ ತೆಗೆದುಕೊಂಡಿದ್ದಾರೆ.
ವಿಧಾನಪರಿಷತ್ ಸದಸ್ಯರು ಐಎಎಸ್ ಅಧಿಕಾರಿಗೆ ಪಾಕಿಸ್ತಾನಿ ಎಂದು ಹೇಳುತ್ತಾರೆ. ಈ ಬಗ್ಗೆ ಬಿಜೆಪಿಯವರಾಗಲಿ, ನ್ಯಾಯಾಂಗದವರಾಗಲಿ ಸುಮೊಟೋ ಪ್ರಕರಣ ದಾಖಲಿಸಿಕೊಂಡು ಯಾಕೆ ಖಂಡಿಸಿಲ್ಲ? ಎಂದು ಪ್ರಶ್ನೆ ಮಾಡಿದರು. ತಮ್ಮ ಗಮನಕ್ಕೆ ತಾರದೆ ವರ್ಗಾವಣೆ ಮಾಡದಂತೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಮುಖ್ಯಕಾರ್ಯದರ್ಶಿ ಅವರಿಗೆ ಬರೆದಿರುವ ಪತ್ರಕ್ಕೆ ಪ್ರತಿಕ್ರಿಯಿಸಿ, ಯಾರೂ ಯಾರ ಇಲಾಖೆಯಲ್ಲೂ ಹಸ್ತಕ್ಷೇಪ ಮಾಡುತ್ತಿಲ್ಲ. ನಮಗೆ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಗಳು ಸ್ವಾತಂತ್ರ್ಯ ನೀಡಿದ್ದಾರೆ. ನಾವೂ ಸಂಬಂಧಪಟ್ಟ ಶಾಸಕರನ್ನು ಸಂಪರ್ಕಿಸಿಯೇ ನಿರ್ಧಾರ ಮಾಡುತ್ತೇವೆ ಎಂದರು.
ಎಲ್ಲ ಸೈಟ್‌ಗೂ ಇ - ಖಾತಾ: ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿರುವ ಕ್ರಮ ಬದ್ಧವಲ್ಲದ ನಿವೇಶನ ಹಾಗೂ ಕಟ್ಟಡಗಳನ್ನು ತೆರಿಗೆ ವ್ಯಾಪ್ತಿಗೆ ಒಳಪಡಿಸಲು ಕ್ರಮ ಕೈಗೊಳ್ಳುತ್ತಿದ್ದು, 2013ಕ್ಕೆ ಮೊದಲು ಅಥವಾ ನಂತರ ನೋಂದಣಿಯಾದ ಎಲ್ಲಾ ನಿವೇಶನ ಹಾಗೂ ಕಟ್ಟಡಗಳಿಗೂ ಇ-ಖಾತೆ ನೀಡಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಪ್ರಶ್ನೋತ್ತರ ಅವಧಿಯಲ್ಲಿ ವಿಷಯ ಪ್ರಸ್ತಾಪಿಸಿದ ಮೇಲುಕೋಟೆ ಸದಸ್ಯ ದರ್ಶನ್ ಪುಟ್ಟಣ್ಣಯ್ಯ, ಗ್ರಾಮ ಪಂಚಾಯ್ತಿಗಳ ವ್ಯಾಪ್ತಿಯಲ್ಲಿ 2013ಕ್ಕಿಂತ ಮೊದಲು ನೋಂದಣಿಯಾದ ನಿವೇಶನಗಳಿಗೆ ಇ-ಖಾತಾ ಅಭಿಯಾನ ಮಾಡಲಾಗುತ್ತಿದೆ. ಆದರೆ 2013ರ ನಂತರ ನೋಂದಣಿಯಾದ ನಿವೇಶನಗಳಿಗೆ ಇ-ಖಾತೆ ಮಾಡದೆ ತಿರಸ್ಕಾರ ಮಾಡುತ್ತಿದ್ದು, ಒಂದೇ ಕಡೆ ಎರಡು ರೀತಿಯ ನಿಯಮ ಅನುಸರಿಸಲಾಗುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
