ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲೇಕೆ ಎಸ್‌ಸಿಎಸ್‌ಪಿ/ಟಿಎಸ್‌ಪಿ ಜಾರಿ ಮಾಡಿಲ್ಲ?: ಸಿಎಂ ಸಿದ್ದರಾಮಯ್ಯ

ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಎಸ್‌ಸಿ ಎಸ್‌ಪಿ/ಟಿಎಸ್‌ಪಿ ಕಾನೂನನ್ನು ಜಾರಿಗೆ ತಂದಿತು. ಈ ರೀತಿಯ ಜನಪರ ಕಾನೂನನ್ನು ಬಿಜೆಪಿ ಆಡಳಿತದಲ್ಲಿರುವ ಯಾವುದೇ ರಾಜ್ಯದಲ್ಲಿ ಜಾರಿಯಾಗಿಲ್ಲ. ಬಿಜೆಪಿಯವರಿಗೆ ಕಾಂಗ್ರೆಸ್ ಸರ್ಕಾರವನ್ನು ಮೂದಲಿಸಲು ಯಾವ ನೈತಿಕತೆ ಇದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದರು. 
 

Why not implement SSSP TSP in BJP ruled states Says CM Siddaramaiah gvd

ಮಾಗಡಿ (ಸೆ.14): ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಎಸ್‌ಸಿ ಎಸ್‌ಪಿ/ಟಿಎಸ್‌ಪಿ ಕಾನೂನನ್ನು ಜಾರಿಗೆ ತಂದಿತು. ಈ ರೀತಿಯ ಜನಪರ ಕಾನೂನನ್ನು ಬಿಜೆಪಿ ಆಡಳಿತದಲ್ಲಿರುವ ಯಾವುದೇ ರಾಜ್ಯದಲ್ಲಿ ಜಾರಿಯಾಗಿಲ್ಲ. ಬಿಜೆಪಿಯವರಿಗೆ ಕಾಂಗ್ರೆಸ್ ಸರ್ಕಾರವನ್ನು ಮೂದಲಿಸಲು ಯಾವ ನೈತಿಕತೆ ಇದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದರು. ಪಟ್ಟಣದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಮತ್ತು ಉದ್ಘಾಟನಾ ಸಮಾರಂಭ ನೆರವೇರಿಸಿ ಮಾತನಾಡಿದ ಅವರು, ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗದವರ ಜನಸಂಖ್ಯೆಗೆ ಅನುಗುಣವಾಗಿ ಅವರ ಅಭಿವೃದ್ಧಿಗಾಗಿ ಪ್ರತ್ಯೇಕ ಅನುದಾನ ನೀಡುವ ಕಾನೂನನ್ನು ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿತು. 

ಬಿಜೆಪಿ ಆಡಳಿತದಲ್ಲಿರುವ ರಾಜ್ಯಗಳಲ್ಲಿ ಹಾಗೂ ಕೇಂದ್ರ ಸರ್ಕಾರ ಏಕೆ ಜಾರಿಗೆ ತಂದಿಲ್ಲ ಎಂದರು. ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗದವರ ಅನುದಾನವನ್ನು ಬೇರೆಯವರಿಗೆ ನೀಡಲಾಗಿದೆ ಎಂದು ಬಿಜೆಪಿಯವರು ಸುಳ್ಳು ನುಡಿದರು. ಆದರೆ, 89.62 ಕೋಟಿ ಮೊತ್ತದ ಅವ್ಯವಹಾರವಾಗಿದ್ದು, ಅದರಲ್ಲಿ 56 ಕೋಟಿ ವಸೂಲು ಮಾಡಲಾಗಿದೆ. ಪರಿಶಿಷ್ಟರ ಹಣ ದುರುಪಯೋಗವಾಗಲು ಬಿಡುವುದಿಲ್ಲ. ಅಭಿವೃದ್ಧಿ ನಿಗಮಕ್ಕೆ ಈ ಮುಂಚೆ ನಿಗದಿಪಡಿಸಿರುವಂತೆ ಅನುದಾನವನ್ನು ನೀಡಿ, ಸಮುದಾಯದ ಅಭಿವೃದ್ಧಿಗೆ ಬಳಸಲಾಗುವುದು ಎಂದು ಹೇಳಿದರು.

Chamarajanagar: ಕೊಳ್ಳೇಗಾಲ ಸರ್ಕಾರಿ ಆಸ್ಪತ್ರೆಗೆ ರಾಜ್ಯದಲ್ಲಿ ಏಳನೇ ಸ್ಥಾನ

ಮೋದಿಯವರು ಬಂಡವಾಳಶಾಹಿಗಳ ಪರ: ಬಿಜೆಪಿಯವರು ಬಡವರ ಹಾಗೂ ರೈತರ ವಿರೋಧಿಗಳಾಗಿದ್ದಾರೆ. ರೈತರ ಸಾಲ ಮನ್ನಾ ಮಾಡಲಿಲ್ಲ. ಆದರೆ, ಕೈಗಾರಿಕೋದ್ಯಮಿಗಳ 16 ಲಕ್ಷ ಕೋಟಿ ರು.ಗಳ ಸಾಲವನ್ನು ಮನ್ನಾ ಮಾಡಿದರು. ಮೋದಿರವರು ಅಂಬಾನಿಯಂತಹ ಬಂಡವಾಳಶಾಹಿಗಳ ಪರವಾಗಿದ್ದಾರೆ. ಮೋದಿರವರ ಸಹಾಯ ಇಲ್ಲದೆ ಅಂಬಾನಿ ನಂಬರ್ ಒನ್ ಶ್ರೀಮಂತ ಹೇಗೆ ಆದಾ ಎಂದು ಪ್ರಶ್ನಿಸಿದರು. ದೇಶದ ಸ್ವಾತಂತ್ರ್ಯಕ್ಕೆ ದುಡಿದ ನೆಹರೂರವರು ಹಾಗೂ ಇಂದಿರಾಗಾಂಧಿ ಸೇರಿದಂತೆ ಹಲವು ನಾಯಕರು ದೇಶಕ್ಕಾಗಿ ದುಡಿದಿದ್ದಾರೆ. ಮನಮೋಹನ್ ಸಿಂಗ್ ತಮ್ಮದೇ ಆದ ಕೊಡುಗೆ ನೀಡಿದ್ದಾರೆ. 

ಆದರೀಗ ಭಾರತದ ಮೇಲಿನ ಸಾಲ 182 ಲಕ್ಷ ಕೋಟಿಯನ್ನು ಮೀರುತ್ತಿದೆ. ಹಿಂದೆ 53.11 ಲಕ್ಷ ಕೋಟಿ ಇದ್ದ ಸಾಲದ ಮೊತ್ತ ಈಗ ಕಳೆದ 10 ವರ್ಷದಲ್ಲಿ 182 ಲಕ್ಷ ಕೋಟಿ ರು.ಗೆ ತಲುಪಿದೆ. ನರೇಂದ್ರ ಮೋದಿ ಸುಳ್ಳು ಹೇಳುತ್ತಾರೆ ಮತ್ತು ಸಾಲ ಮಾಡುತ್ತಾರೆ ಎಂದು ಈ ಬಾರಿ ವೋಟು ನೀಡಲಾಗಿದೆಯೇ ಎಂದು ಸಿದ್ದರಾಮಯ್ಯ ಪ್ರಶ್ನೆ ಮಾಡಿದರು. ದೇಶದಲ್ಲಿ ಗರೀಬಿ ಹಠಾವೋ, ಆಹಾರಸ್ವಾವಲಂಬನೆಯಂತಹ ಜನಪರ ಕಾರ್ಯಕ್ರಮಗಳನ್ನು ಕಾಂಗ್ರೆಸ್ ಪಕ್ಷ ದೇಶಕ್ಕೆ ಕೊಟ್ಟಿದೆ. ಕರ್ನಾಟಕದಲ್ಲಿ ಗ್ಯಾರಂಟಿ ಯೋಜನೆಗಳಿಗೆ 56 ಸಾವಿರ ಕೋಟಿ ರು.ಗಳನ್ನು ಮೀಸಲಿರಿಸಲಾಗಿದೆ. ರಾಜ್ಯದ ಸುಮಾರು 1.20 ಲಕ್ಷ ಕುಟುಂಬಗಳಿಗೆ ವಾರ್ಷಿಕವಾಗಿ 50 ರಿಂದ 60 ಸಾವಿರ ರೂ.ಗಳ ಆರ್ಥಿಕ ಸಹಾಯವನ್ನು ಗ್ಯಾರಂಟಿಗಳ ಮೂಲಕ ಒದಗಿಸಲಾಗುತ್ತಿದೆ.

ಕಾಂಗ್ರೆಸ್ ಸರ್ಕಾರ ಸದಾ ಬಡಜನರ ಪರವಾಗಿದೆ. ಶಕ್ತಿ ಯೋಜನೆಯಡಿ 3.50 ಕೋಟಿ ಜನ ಉಚಿತವಾಗಿ ಪ್ರಯಾಣಿಸಿದ್ದು, ಇದುವರೆಗೆ 287 ಕೋಟಿ ಮಹಿಳೆಯರು ಯೋಜನೆಯ ಲಾಭ ಪಡೆದಿದ್ದಾರೆ. ನಾನು ಬಡವರ ಏಳಿಗೆಗಾಗಿಯೇ ಅಧಿಕಾರದಲ್ಲಿದ್ದೇನೆ. ಸರ್ಕಾರ ಬಡವರು, ಹೈನುಗಾರರು, ದಲಿತರು, ಅಲ್ಪಸಂಖ್ಯಾತರ ಪರವಾಗಿರಲಿದೆ. ರಾಜ್ಯದ ಜನರ ಅಭಿವೃದ್ಧಿಯಲ್ಲಿ ಯಾವುದೇ ರಾಜಿ ಇಲ್ಲ ಎಂದು ಸಿದ್ದರಾಮಯ್ಯ ಹೇಳಿದರು.

ಕಾಂಗ್ರೆಸ್ ಗ್ಯಾರಂಟಿ ಯೋಜನೆ ಬಡವರ ಆಸರೆಯ ಬೆಳಕು: ಶಾಸಕ ಬೇಳೂರು ಗೋಪಾಲಕೃಷ್ಣ

ಸಚಿವರಾದ ಕೆ.ಎನ್ .ರಾಜಣ್ಣ, ಜಮೀರ್ ಅಹಮದ್ ಖಾನ್ , ರಾಮಲಿಂಗಾರೆಡ್ಡಿ, ಮಧು ಬಂಗಾರಪ್ಪ, ಕರ್ನಾಟಕ ರಸ್ತೆ ಅಭಿವೃದ್ಧಿ ನಿಮಗ ಅಧ್ಯಕ್ಷ ಬಾಲಕೃಷ್ಣ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಅಧ್ಯಕ್ಷ ಎಚ್ .ಎಂ.ರೇವಣ್ಣ, ಶಾಸಕರಾದ ಇಕ್ಬಾಲ್ ಹುಸೇನ್ , ವಿಧಾನ ಪರಿಷತ್ ಸದಸ್ಯ ರಾಮೋಜಿಗೌಡ, ಮಾಜಿ ಶಾಸಕ ಕೆ.ರಾಜು, ಕೆಎಂಎಫ್ ಮಾಜಿ ಅಧ್ಯಕ್ಷ ಪಿ.ನಾಗರಾಜು ಮತ್ತಿತರರು ಉಪಸ್ಥಿತರಿದ್ದರು.

Latest Videos
Follow Us:
Download App:
  • android
  • ios