ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಎಂಎಸ್‌ಪಿ ನಿಗದಿ ನೆನಪಾಗಲಿಲ್ಲವೇಕೆ?: ಮಾಜಿ ಸಿಎಂ ಬೊಮ್ಮಾಯಿ
ಬ್ಯಾಡಗಿಯಲ್ಲಿ ಪುಡಾರಿ ರೈತರು ನಡೆಸಿದ ದಾಂಧಲೆಗೆ ಇದನ್ನು ತಳುಕು ಹಾಕುತ್ತಿರುವುದು ಸರಿಯಲ್ಲ. ಸಚಿವ ಶಿವಾನಂದ ಪಾಟೀಲ ಅವರ ಹೇಳಿಕೆಯನ್ನು ರಾಜಕೀಯವಾಗಿ ಸ್ವೀಕರಿಸುತ್ತೇನೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.
ಬ್ಯಾಡಗಿ (ಮಾ.16): ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಎಂಎಸ್‌ಪಿ ನಿಗದಿಪಡಿಸುವ ನೆನಪಾಗಲಿಲ್ಲವೇಕೆ..? ಇದೀಗ ದೆಹಲಿಯಲ್ಲಿ ಪ್ರತಿಭಟಿಸುತ್ತಿರುವ ರೈತರು ನೆನಪಾಗಿದ್ಧಾರೆ, ಬ್ಯಾಡಗಿಯಲ್ಲಿ ಪುಡಾರಿ ರೈತರು ನಡೆಸಿದ ದಾಂಧಲೆಗೆ ಇದನ್ನು ತಳುಕು ಹಾಕುತ್ತಿರುವುದು ಸರಿಯಲ್ಲ. ಸಚಿವ ಶಿವಾನಂದ ಪಾಟೀಲ ಅವರ ಹೇಳಿಕೆಯನ್ನು ರಾಜಕೀಯವಾಗಿ ಸ್ವೀಕರಿಸುತ್ತೇನೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.
ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೆಹಲಿಯಲ್ಲಿನ ರೈತರ ಮೂರು ಬೇಡಿಕೆಗಳನ್ನು ಕೇಂದ್ರ ಸರ್ಕಾರ ಈಗಾಗಲೇ ಈಡೇರಿಸಿದೆ. ಅಷ್ಟಕ್ಕೂ ಹೊಸ ವರಸೆಯನ್ನು ಹಾಕಿಕೊಂಡು ಬಂದಿರುವ ದೆಹಲಿ ರೈತರು ಎಂ.ಎಸ್.ಪಿ. ನಿರ್ಧರಿಸುವಂತೆ ಬೇಡಿಕೆ ಇಟ್ಟಿದ್ದು ಅಂತಾರಾಷ್ಟ್ರೀಯ ಮಟ್ಟದಲ್ಲಿ ಚರ್ಚೆಗಳಾಗಬೇಕಾಗಿರುವ ವಿಷಯ ಇದಾಗಿದೆ, ಇಂತಹ ಸಂದರ್ಭದಲ್ಲಿ ಎಂ.ಎಸ್.ಪಿ. ನಿಗದಿಪಡಿಸುವುದರಿಂದ ಎಕ್ಸಪೋರ್ಟ್ ಅಗ್ರಿಮೆಂಟ್ ಗಳ ಮೇಲೆ ದೊಡ್ಡ ಪರಿಣಾಮ ಬೀರಲಿದೆ. ಅದಾಗ್ಯೂ ಕೇಂದ್ರ ಸರ್ಕಾರ ಈ ಕುರಿತು ಗಂಭೀರ ಚರ್ಚೆ ನಡೆಸುತ್ತಿದೆ ಎಂದರು.
ಜೆಡಿಎಸ್ ಈಗ ಇದೆಯೇ? ಇದ್ದರೆ ಎಲ್ಲಿದೆ?: ಡಿಸಿಎಂ ಡಿಕೆಶಿ ವ್ಯಂಗ್ಯ
ದೆಹಲಿ ಮಾದರಿ: ಬರ ಪರಿಹಾರ ಹಾಗೂ ಬೆಳೆವಿಮೆ ಬಿಡುಗಡೆಗೊಳಿಸುವಂತೆ ರೈತ ಪರ ಸಂಘಟನೆಗಳು ದೆಹಲಿ ಮಾದರಿಯಲ್ಲಿ ರಾಜ್ಯದಲ್ಲಿಯೂ ಹೋರಾಟ ನಡೆಸುತ್ತಿದ್ದಾರೆ, ಅವರಿಗೆ ತಾವುಗಳು ನೀಡಿದ್ದೇನು? ಅಭಿವೃದ್ಧಿ ಕಾರ್ಯಗಳಿಗೆ ಹಣವಿಲ್ಲದೇ ಒದ್ದಾಡುತ್ತಿರುವ ರಾಜ್ಯ ಸರ್ಕಾರ, ರೈತರನ್ನು ದಾರಿ ತಪ್ಪಿಸುವ ಕೆಲಸ ಮಾಡಬಾರದು. ನಮ್ಮ ಸರ್ಕಾರದ ಅವಧಿಯಲ್ಲಿಯೇ ರೈತರಿಗಾಗಿ ಎರಡು ಕೋಲ್ಡ್ ಸ್ಟೋರೇಜ್ ನಿರ್ಮಿಸಲು ನೀಡಿದ್ದ ಅನುದಾನ ಬಳಕೆ ಮಾಡಿಲ್ಲ. ಕೂಡಲೇ ರಾಜ್ಯ ಸರ್ಕಾರ ಒಣ ಮೆಣಸಿನಕಾಯಿ ಬೆಳೆಯನ್ನು ವಿಮೆವ್ಯಾಪ್ತಿಯಲ್ಲಿ ತರುವಂತೆ ಆಗ್ರಹಿಸಿದರು. ಈ ಸಂದರ್ಭದಲ್ಲಿ ಶಾಸಕ ಅರವಿಂದ ಬೆಲ್ಲದ, ಮಾಜಿ ಶಾಸಕರಾದ ಸುರೇಶಗೌಡ ಪಾಟೀಲ, ವಿರೂಪಾಕ್ಷಪ್ಪ ಬಳ್ಳಾರಿ, ಶಿವರಾಜ ಸಜ್ಜನ, ಅರುಣಕುಮಾರ ಪೂಜಾರ ಇನ್ನಿತರರಿದ್ದರು.