* ಕರ್ನಾಟಕ ಪ್ರವಾದಲ್ಲಿ ರಾಹುಲ್ ಗಾಂಧಿ* ಕರ್ನಾಟಕ ಕಾಂಗ್ರೆಸ್ ನಾಯಕರ ಜೊತೆ ಮಹತ್ವದ ಸಭೆ* ರಾಹುಲ್ ಗಾಂಧಿಗೆ ಮಹತ್ವದ ಭರವಸೆ ನೀಡಿದ ಡಿಕೆ ಶಿವಕುಮಾರ್
ಬೆಂಗಳೂರು, (ಏ.01) : ನಾನು ಎಲ್ಲರನ್ನು ಒಟ್ಟಿಗೆ ಕರೆದೊಯ್ಯುತ್ತೇನೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ (DK Shivakumar) ಅವರು ರಾಹುಲ್ ಗಾಂಧಿ(Rahul Gandhi) ಸಮ್ಮುಖದಲ್ಲಿ ಘೋಷಣೆ ಮಾಡುವ ಮೂಲಕ ಕಾಂಗ್ರೆಸ್ ಒಳಜಗಳಕ್ಕೆ ಅಂತ್ಯ ಹಾಡುವುದಕ್ಕೆ ಮುಂದಾಗಿದ್ದಾರೆ.
ಹೌದು...ರಾಹುಲ್ ಗಾಂಧಿ ಸಮ್ಮುಖದಲ್ಲಿ ಇಂದು(ಶುಕ್ರವಾರ) ನಡೆದ ಕೆಪಿಸಿಸಿ ವಿಶೇಷ ಸಭೆಯಲ್ಲಿ (KPCC Meeting) ಮಾತನಾಡಿದ ಡಿಕೆ ಶಿವಕುಮಾರ್, ನಾನು ಎಲ್ಲರನ್ನು ಒಟ್ಟಿಗೆ ಕರೆದೊಯ್ಯುತ್ತೇನೆ ಎಂದು ಸ್ಪಷ್ಟಪಡಿಸಿದರು.
ಪಕ್ಷ ನನ್ನ ಮೇಲಿಟ್ಟ ಭರವಸೆಯನ್ನು ಯಾವುದೇ ಕಾರಣಕ್ಕೂ ನಾನು ಹುಸಿ ಮಾಡುವುದಿಲ್ಲ. ಕರ್ನಾಟಕದ ಮೂಲಕ ರಾಷ್ಟ್ರದಲ್ಲಿ ಕಾಂಗ್ರೆಸ್(Congress) ನ್ನು ಮತ್ತೆ ಅಧಿಕಾರದಲ್ಲಿ ಸ್ಥಾಪಿಸುವ ಪ್ರಯತ್ನ ಮಾಡಬೇಕಿದೆ. ಹೀಗಾಗಿ ನಾನು ಎಲ್ಲರನ್ನೂ ಒಟ್ಟಿಗೆ ಕರೆದೊಯ್ಯುತ್ತೇನೆ ಎಂದು ಭರವಸೆ ನೀಡುತ್ತೇನೆ ಎಂದು ಹೇಳಿದರು.
ನಿಮ್ ಬಗ್ಗೆ ಚೆನ್ನಾಗಿ ಗೊತ್ತು ಎನ್ನುತ್ತಲೇ ಸಿದ್ದು, ಡಿಕೆಶಿ, ಖರ್ಗೆಗೆ ರಾಹುಲ್ ಎಚ್ಚರಿಕೆ, ಜತೆಗೊಂದು ಹೊಸ ಟಾಸ್ಕ್
ವ್ಯಕ್ತಿ ಪೂಜೆಗಿಂತ , ಪಕ್ಷ ಪೂಜೆ ಮುಖ್ಯ ಎಂದು ನಾನು ಮೊದಲಿನಿಂದಲೂ ಪ್ರತಿಪಾದಿಸಿಕೊಂಡು ಬಂದಿದ್ದೇನೆ. ಈಗಲೂ ಅದನ್ನೇ ಹೇಳುತ್ತೇನೆ. ರಾಜ್ಯದಲ್ಲಿ ಒಂದು ಭ್ರಷ್ಟ ಸರಕಾರ ಅಧಿಕಾರದಲ್ಲಿದ್ದು ಅದನ್ನು ಕಿತ್ತೊಗೆಯುವ ಪ್ರಯತ್ನ ನಡೆಸಬೇಕು ಎಂದು ಕಾರ್ಯಕರ್ತರಿಗೆ ಕರೆ ಕೊಟ್ಟರು.
ರಾಜ್ಯ ಸರಕಾರ ಭ್ರಷ್ಟಾಚಾರದಲ್ಲಿ ದಾಖಲೆ ಮೀರಿಸಿದೆ. ಹೀಗಾಗಿ ಜನರು ಬೇಸತ್ತಿದ್ದಾರೆ. ಹೀಗಾಗಿ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಕಾಂಗ್ರೆಸ್ ಮುನ್ನಡೆ ಸಾಧಿಸಿದೆ. ಉಪ ಚುನಾವಣೆಯಲ್ಲೂ ನಾವು ಸಮಬಲದಿಂದ ಗೆದ್ದಿದ್ದೇವೆ. ರಾಜ್ಯದಲ್ಲಿ ಕಾಂಗ್ರೆಸ್ ಗೆಲ್ಲುವುದಕ್ಕೆ ಪೂರಕವಾದ ಎಲ್ಲ ವಾತಾವರಣವಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ದೇಶದಲ್ಲಿ ಶೇ.62 ಕ್ಕೂ ಹೆಚ್ಚು ಯುವ ಮತದಾರರಿದ್ದಾರೆ. ಹೀಗಾಗಿ ಯುವಕರ ಆಶಯಕ್ಕೆ ತಕ್ಕಂತೆ ನಾವು ಕಾರ್ಯ ನಿರ್ವಹಿಸಬೇಕಾಗುತ್ತದೆ. ಈ ಹಿನ್ನೆಲೆಯಲ್ಲಿ ಎವೆರಿ ಬೂತ್ ಡಿಜಿಟಲ್ ಯೂತ್ ಎಂಬ ಕಾರ್ಯಕ್ರಮ ರೂಪಿಸಲಾಗಿದೆ. ಜತೆಗೆ ಸದ್ಯದಲ್ಲೇ ಚಿಂತನ-ಮಂಥನ ಕಾರ್ಯಕ್ರಮ ನಡೆಸಲಾಗುವುದು ಎಂದರು.
150 ಸೀಟು ಟಾರ್ಗೆಟ್ ಕೊಟ್ಟ ರಾಹುಲ್ ಗಾಂಧಿ
ಸಿದ್ದರಾಮಯ್ಯ, ಡಿಕೆಶಿ, ಮಲ್ಲಿಕಾರ್ಜುನ ಖರ್ಗೆ ಅವರೇ ನಿಮ್ಮ ಬಗ್ಗೆ ನನಗೆ ಚೆನ್ನಾಗಿ ಗೊತ್ತಿದೆ. ನೀವೆಲ್ಲರೂ ಒಗ್ಗಟ್ಟಿನಿಂದ ಕೆಲಸ ಮಾಡಬೇಕು. ಮುಂಬರುವ ಚುನಾವಣೆಯಲ್ಲಿ 150 ಸ್ಥಾನಗಳನ್ನು ಗೆಲ್ಲಿಸಬೇಕು. ಒಂದು ಸ್ಥಾನ ಕೂಡ ಕಡಿಮೆ ಆಗಬಾರದು ಎಂದು ರಾಜ್ಯದ ನಾಯಕರಿಗೆ ರಾಹುಲ್ ಗಾಂಧಿ ಎಚ್ಚರಿಕೆ ಕೊಟ್ಟಿದ್ದಾರೆ.
ಮುಂದಿನ ವಿಧಾನಸಭಾ ಚುನಾವಣೆಯ ರೂಪುರೇಷೆ ಕುರಿತು ಚರ್ಚಿಸಿದರು. ಡಿ.ಕೆ.ಶಿವಕುಮಾರ್, ಸಿದ್ದರಾಮಯ್ಯ, ಮಲ್ಲಿಕಾರ್ಜುನ ಖರ್ಗೆ, ಕೆ.ಎಚ್.ಮುನಿಯಪ್ಪ, ವೀರಪ್ಪ ಮೊಯ್ಲಿ ಸೇರಿದಂತೆ ಹಿರಿಯ ನಾಯಕರ ಉಪಸ್ಥಿತರಿದ್ದರು. ರಾಜ್ಯದಲ್ಲಿ 150 ಸೀಟು ಗೆಲ್ಲಬೇಕು. ಒಂದು ಸ್ಥಾನ ಕೂಡ ಕಡಿಮೆ ಆಗಬಾರದು. ಪಕ್ಷ ನಿಷ್ಠೆಯ ಮೆರಿಟ್ ಮೇಲೆ ಟಿಕೆಟ್ ಹಂಚಿಕೆ ಮಾಡಲಾಗುತ್ತದೆ. ಹಿರಿಯ ನಾಯರೆಲ್ಲರೂ ಒಟ್ಟಿಗೆ ಹೋಗಬೇಕು. ಪ್ರತಿ ಕ್ಷೇತ್ರಕ್ಕೂ ನಾಯಕರು ಭೇಟಿ ಕೊಡಬೇಕು. ನೀವು ಕರೆದರೆ ನಾನು ರಾಜ್ಯದ ಮೂಲೆ ಮೂಲೆಗೂ ಬರುತ್ತೇನೆ. ಆದ್ರೆ 150 ಸ್ಥಾನ ಗೆಲ್ಲಿಸಬೇಕು ಎಂದು ತಾಕೀತು ಮಾಡಿದ್ದಾರೆ.
ರಾಜ್ಯದಲ್ಲಿ ಕಾಂಗ್ರೆಸ್ ಉತ್ತಮ ಸಂಘಟನೆ ಮಾಡುತ್ತಿದೆ. ಚುನಾವಣೆಯಲ್ಲಿ ಯುವಕರು ಮತ್ತು ಮಹಿಳೆಯರಿಗೆ ಆದ್ಯತೆ ನೀಡಿ. ಇದರಿಂದ ರಾಜ್ಯದಲ್ಲಿ ಹೊಸ ಕಾಂಗ್ರೆಸ್ ಉದಯ ಆಗುತ್ತೆ. ಪ್ರಸ್ತುತ ಸಮಸ್ಯೆಗಳ ಮೇಲೆ ಹೋರಾಟ ಮಾಡಿ. ಸಿದ್ದರಾಮಯ್ಯ ಸರ್ಕಾರದ ಸಾಧನೆ ಬಗ್ಗೆ ಜನರಿಗೆ ತಿಳಿಸಿ. 150 ಕ್ಷೇತ್ರದಲ್ಲಿ ಗೆಲ್ಲಲೇಬೇಕು. ಒಂದು ಕೂಡ ಕಡಿಮೆ ಆಗಬಾರದರು ಎಂದು ಕಾಂಗ್ರೆಸ್ ನಾಯಕರು ಮತ್ತು ಕಾರ್ಯಕರ್ತರಿಗೆ ರಾಹುಲ್ ಗಾಂಧಿ ಕರೆ ನೀಡಿದರು.
"
