ವರುಣ ಕ್ಷೇತ್ರದಲ್ಲಿ ಸಿದ್ದರಾಮಯ್ಯ ಎದುರು ವಿಜಯೇಂದ್ರ ಸ್ಪರ್ಧೆ ಮಾಡ್ತಾರಾ?
ಪ್ರತಿಪಕ್ಷದ ನಾಯಕರೂ ಆಗಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ವರುಣ ವಿಧಾನಸಭಾ ಕ್ಷೇತ್ರದ ಟಿಕೆಟ್ ಪ್ರಕಟಗೊಂಡ ಬೆನ್ನಲ್ಲೇ ಆಡಳಿತಾರೂಢ ಬಿಜೆಪಿಯಿಂದ ಪಕ್ಷದ ಉಪಾಧ್ಯಕ್ಷ ಹಾಗೂ ಯುವ ನಾಯಕ ಬಿ.ವೈ.ವಿಜಯೇಂದ್ರ ಅವರನ್ನು ಕಣಕ್ಕಿಳಿಸಲು ಒಲವು ವ್ಯಕ್ತವಾಗತೊಡಗಿದೆ.
ಬೆಂಗಳೂರು (ಮಾ.26): ಪ್ರತಿಪಕ್ಷದ ನಾಯಕರೂ ಆಗಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ವರುಣ ವಿಧಾನಸಭಾ ಕ್ಷೇತ್ರದ ಟಿಕೆಟ್ ಪ್ರಕಟಗೊಂಡ ಬೆನ್ನಲ್ಲೇ ಆಡಳಿತಾರೂಢ ಬಿಜೆಪಿಯಿಂದ ಪಕ್ಷದ ಉಪಾಧ್ಯಕ್ಷ ಹಾಗೂ ಯುವ ನಾಯಕ ಬಿ.ವೈ.ವಿಜಯೇಂದ್ರ ಅವರನ್ನು ಕಣಕ್ಕಿಳಿಸಲು ಒಲವು ವ್ಯಕ್ತವಾಗತೊಡಗಿದೆ. ಸಿದ್ದರಾಮಯ್ಯ ಅವರನ್ನು ಕಟ್ಟಿಹಾಕುವ ಉದ್ದೇಶದಿಂದ ವಿಜಯೇಂದ್ರ ಅವರನ್ನೇ ಅಖಾಡಕ್ಕಿಳಿಸುವುದು ಸೂಕ್ತ ಎಂಬ ಅಭಿಪ್ರಾಯ ಬಲವಾಗಿದ್ದು, ಈ ಬಗ್ಗೆ ಪಕ್ಷದ ವರಿಷ್ಠರು ಅಂತಿಮ ತೀರ್ಮಾನ ಕೈಗೊಳ್ಳಬೇಕಾಗಿದೆ.
ಕಳೆದ 2018ರ ಚುನಾವಣೆಯಲ್ಲಿ ವಿಜಯೇಂದ್ರ ಅವರು ಈ ಕ್ಷೇತ್ರದಿಂದ ಸ್ಪರ್ಧಿಸುವ ದಟ್ಟವದಂತಿ ಹಬ್ಬಿತ್ತು. ಒಂದು ಹಂತದಲ್ಲಿ ಪಕ್ಷದ ವರಿಷ್ಠರೂ ಒಲವು ತೋರಿದ್ದರು. ಆದರೆ, ಕೊನೆಯ ಹಂತದಲ್ಲಿ ನಡೆದ ರಾಜಕೀಯ ಬೆಳವಣಿಗೆಗಳಿಂದಾಗಿ ವಿಜಯೇಂದ್ರ ಅವರಿಗೆ ಟಿಕೆಟ್ ನಿರಾಕರಿಸಲಾಯಿತು. ಆ ವೇಳೆ ಸಿದ್ದರಾಮಯ್ಯ ಅವರೂ ಈ ಕ್ಷೇತ್ರ ಬಿಟ್ಟು ಬಾದಾಮಿಗೆ ವಲಸೆ ಹೋದರು. ವಿಜಯೇಂದ್ರ ಅವರನ್ನು ಕಣಕ್ಕಿಳಿಸುವುದರಿಂದ ಮೈಸೂರು-ಚಾಮರಾಜನಗರ ಭಾಗದಲ್ಲಿ ಪಕ್ಷಕ್ಕೆ ಹೆಚ್ಚಿನ ಸ್ಥಾನಗಳನ್ನು ಗಳಿಸಲು ಅನುಕೂಲವಾಗುತ್ತದೆ ಎಂಬ ಮಾತು ಆಗಲೂ ಕೇಳಿಬಂದಿತ್ತು. ಈಗಲೂ ಕೇಳಿಬರುತ್ತಿದೆ.
ಪ್ರಾದೇಶಿಕ ಭಾಷೆ ಹೆಸರಲ್ಲಿ ರಾಜಕೀಯದಾಟ: ಪ್ರಧಾನಿ ಮೋದಿ
ಆದರೆ, ವಿಜಯೇಂದ್ರ ಅವರ ತಂದೆ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಈ ಪ್ರಸ್ತಾಪಕ್ಕೆ ಒಪ್ಪುತ್ತಾರೆಯೇ ಎಂಬುದು ಕುತೂಹಲಕರವಾಗಿದೆ. ಯಡಿಯೂರಪ್ಪ ಅವರು ಈಗಾಗಲೇ ತಮ್ಮ ಶಿಕಾರಿಪುರ ವಿಧಾನಸಭಾ ಕ್ಷೇತ್ರದ ಉತ್ತರಾಧಿಕಾರಿಯನ್ನಾಗಿ ವಿಜಯೇಂದ್ರ ಅವರ ಹೆಸರನ್ನು ಬಹಿರಂಗವಾಗಿಯೇ ಘೋಷಿಸಿದ್ದಾರೆ. ಶಿಕಾರಿಪುರದಲ್ಲಿ ಯಡಿಯೂರಪ್ಪ ಅವರ ಬಲವಾದ ಹಿಡಿತ ಇರುವುದರಿಂದ ಅಲ್ಲಿ ಗೆಲ್ಲುವುದು ಸುಲಭವಾಗಲಿದೆ. ಆದರೆ, ವರುಣ ಕ್ಷೇತ್ರದಿಂದ ವಿಜಯೇಂದ್ರ ಸ್ಪರ್ಧಿಸಿದರೆ ಗೆಲುವು ಸುಲಭವಲ್ಲ.
ಶಿಕಾರಿಪುರದಲ್ಲಿ ಕಣಕ್ಕಿಳಿದು ಗೆದ್ದರೆ ಮುಂದಿನ ರಾಜಕೀಯ ಭವಿಷ್ಯಕ್ಕೆ ಭದ್ರ ಬುನಾದಿ ಹಾಕಿದಂತಾಗುತ್ತದೆ. ವರುಣದಲ್ಲಿ ನಿಂತು ಸೋತರೆ ಮುಂದಿನ ಭವಿಷ್ಯ ಅತಂತ್ರವಾಗಬಹುದು ಎಂಬ ಆತಂಕ ಯಡಿಯೂರಪ್ಪ ಅವರ ಬೆಂಬಲಿಗರಲ್ಲಿದೆ ಎನ್ನಲಾಗಿದೆ. ಈ ನಡುವೆ ವಿಜಯೇಂದ್ರ ಅವರೂ ತಾವು ಯಾವ ಕ್ಷೇತ್ರದಿಂದ ಸ್ಪರ್ಧಿಸಬೇಕು ಎಂಬುದನ್ನು ಪಕ್ಷದ ವರಿಷ್ಠರ ಮೇಲೆ ಹಾಕಿ ನಿಟ್ಟುಸಿರು ಬಿಟ್ಟಿದ್ದಾರೆ. ಆದರೆ, ಶಿಕಾರಿಪುರ ಕ್ಷೇತ್ರದಲ್ಲಿ ಈಗಾಗಲೇ ಪ್ರವಾಸ ಆರಂಭಿಸಿದ್ದೇನೆ ಎಂಬ ಮಾತನ್ನೂ ಹೇಳುವ ಮೂಲಕ ವರುಣಕ್ಕೆ ಹೋಗುವ ಬಗ್ಗೆ ಅರೆಮನಸ್ಸಿನ ಭಾವನೆ ಹೊರಹಾಕಿದ್ದಾರೆ.
ಬಿಜೆಪಿ ಅಧಿಕಾರಕ್ಕೆ ಬರುವುದು ಖಚಿತ: ಬಿಜೆಪಿ ಡಬಲ್ ಇಂಜಿನ್ ಸರ್ಕಾರದ ಅಭಿವೃದ್ದಿ ಕಾರ್ಯಗಳನ್ನು ಜನರು ಮೆಚ್ಚಿದ್ದಾರೆ. ಆದ್ದರಿಂದ ರಾಜ್ಯದಲ್ಲಿ ಮತ್ತೊಮ್ಮೆ ಬಿಜೆಪಿ ಅಧಿಕಾರಕ್ಕೆ ಬರುವುದನ್ನು ಯಾವ ದುಷ್ಟಶಕ್ತಿಗಳಿಂದಲೂ ತಡೆಯಲು ಸಾಧ್ಯವಿಲ್ಲ ಎಂದು ಬಿಜೆಪಿ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದರು. ಪಟ್ಟಣದ ವಿದ್ಯಾವರ್ಧಕ ಶಾಲಾ ಮೈದಾನದಲ್ಲಿ ಬಿಜೆಪಿ ಆಯೋಜಿಸಿದ್ದ ಜಿಲ್ಲಾ ಎಸ್ಟಿಸಮಾವೇಶ ಮತ್ತು ಕಾರ್ಯಕರ್ತರ ಬೃಹತ್ ಸಮಾವೇಶವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಬಿ. ಹರ್ಷವರ್ಧನ್‌ರನ್ನು ಮತ್ತೊಮ್ಮೆ ಆಶೀರ್ವದಿಸಿ: ಕ್ಷೇತ್ರದಲ್ಲಿ ಸುಮಾರು 750 ಕೋಟಿಗಿಂತಲೂ ಹೆಚ್ಚಿನ ಅಭಿವೃದ್ದಿ ಕೆಲಸ ಮಾಡುವ ಮೂಲಕ ಯಾವೊಬ್ಬ ಶಾಸಕರು ಮಾಡಿರಲಾರದಷ್ಟುಕೆಲಸವನ್ನು ಶಾಸಕ ಬಿ.ಹರ್ಷವರ್ಧನ್ ಮಾಡಿದ್ದಾರೆ. ಅವರು ಕಳೆದ 5 ವರ್ಷದಲ್ಲಿ ಮಾಡಿರುವ ಅಭಿವೃದ್ದಿ ಕೆಲಸವನ್ನು ಯೋಚಿಸಿ ಅವರನ್ನು ಮತ್ತೊಮ್ಮೆ ಆಶೀರ್ವಾದ ಮಾಡಿ ಗೆಲ್ಲಿಸಿ ಎಂದು ಕರೆ ನೀಡಿದರು. ಶಾಸಕ ರಾಜುಗೌಡ ಮಾತನಾಡಿ, ಬಿಜೆಪಿ ಸಂವಿಧಾನ ಬದಲಿಸುತ್ತದೆ ಎಂದು ಕಾಂಗ್ರೆಸ್ ಅಪಪ್ರಚಾರದಲ್ಲಿ ತೊಡಗಿದೆ. ಆದರೆ ಬಾಬಾ ಸಾಹೇಬರ ಸಂವಿಧಾನವನ್ನು ಯಾರಿಂದಲೂ ಬದಲಿಸಲು ಸಾಧ್ಯವಿಲ್ಲ ಈ ಭಾಗದ ನಾಯಕ ಸಮುದಾಯದವರು ಬಿ. ಹರ್ಷವರ್ಧನ್ ಅವರ ಕೈ ಬಲಪಡಿಸುವ ಮೂಲಕ ಬಿಜೆಪಿ ಪಕ್ಷವನ್ನು ಬೆಂಬಲಿಸಬೇಕು ಎಂದರು.
ರೋಹಿಣಿ ಸಿಂಧೂರಿ ಕೇಸ್: ಡಿ.ರೂಪಾಗೆ ಮ್ಯಾಜಿಸ್ಪ್ರೇಟ್ ಕೋರ್ಟ್ ಸಮನ್ಸ್
ಸಂಸದ ವಿ. ಶ್ರೀನಿವಾಸಪ್ರಸಾದ್ ಮಾತನಾಡಿ, ಕಾಂಗ್ರೆಸ್‌ನಲ್ಲಿ ಬಸವರಾಜ ಬೊಮ್ಮಾಯಿ ಅವರ ಸಮಾನವಾಗಿ ಯಾರೂ ಮುಖ್ಯಮಂತ್ರಿಯಾಗುವ ಯೋಗ್ಯತೆ ಇಲ್ಲ, ಸಿಎಂ ರೇಸ್‌ನಲ್ಲಿರುವವರು ಕೋಟಿ ರು. ಗಳ ಬೇಲ್‌ಮೇಲೆ ಹೊರಗಿದ್ದಾರೆ. ಚುನಾವಣೆ ಮುಗಿದ ನಂತರ ಅವರು ಮತ್ತೆ ಜೈಲಿಗೆ ಹೋಗುತ್ತಾರೆ, ಅವರು ಮುಖ್ಯಮಂತ್ರಿಯಾಗುವುದಿಲ್ಲ ಮತ್ತೊಮ್ಮೆ ಬಿಜೆಪಿ ಅಧಿಕಾರ ನಡೆಸುವುದು ಅದರಲ್ಲಿ ಅನುಮಾನ ಬೇಡ ಎಂದರು. ಸಿದ್ದರಾಮಯ್ಯ ಉಪಕಾರ ಸ್ಮರಣೆಯಿಲ್ಲದೆ ಸಂಪುಟದಿಂದ ಕೈಬಿಟ್ಟು ನನ್ನನ್ನು ಅವಮಾನಿಸಿದರು. ಅಲ್ಲದೆ ಕಚ್ಚೆ ಪಂಚೆ ಎತ್ತಿಕೊಂಡು ಉಪಚುನಾವಣೆಯಲ್ಲಿ ನನ್ನನ್ನು ಸೋಲಿಸಿದರು. ಈಗ ಬಾ ಓಡಾಡು ನೋಡೋಣ. ತಾಕತ್ತಿದ್ದರೆ ವರುಣದಲ್ಲಿ ಸ್ಪರ್ಧಿಸಲಿ ಎಂದು ಸವಾಲು ಹಾಕಿದರು.