ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗುವ ಸಾಧ್ಯತೆಯಿದ್ದು, ಇದು ಬೆಂಗಳೂರು ದಕ್ಷಿಣ ಜಿಲ್ಲೆಗೆ ಐದನೇ ಸಿಎಂ ಕೊಡುಗೆಯಾಗಲಿದೆ. ಈ ಹಿಂದೆ ಕೆಂಗಲ್ ಹನುಮಂತಯ್ಯ, ರಾಮಕೃಷ್ಣ ಹೆಗಡೆ, ದೇವೇಗೌಡ ಹಾಗೂ ಕುಮಾರಸ್ವಾಮಿ ಈ ಜಿಲ್ಲೆಯಿಂದ ಸಿಎಂ ಆಗಿದ್ದರು.

ರಾಮನಗರ (ಮೇ.29): ಕರುನಾಡಿಗೆ ನಾಲ್ವರು ಮುಖ್ಯಮಂತ್ರಿಗಳನ್ನು ಕೊಡುಗೆಯಾಗಿ ನೀಡಿರುವ ಬೆಂಗಳೂರು ದಕ್ಷಿಣ ಜಿಲ್ಲೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್(KPCC President DK Shivakumar) ಮೂಲಕ ಐದನೇ ಬಾರಿಗೆ ಸಿಎಂ(5th Chief Ministers from Ramanagara) ಗಾದಿ ಒಲಿಯುತ್ತಿದೆಯೇ ಎಂಬ ಕುತೂಹಲ ಮೂಡಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಸರಾಜ್ಯದಲ್ಲಿ ಹಲವು ತಿಂಗಳಿಂದ ನಡೆಯುತ್ತಿದ್ದ ನಾಯಕತ್ವ ಬದಲಾವಣೆ ಚರ್ಚೆಗೆ ಕೊನೆಗೂ ಇತಿಶ್ರೀ ಹಾಡಲಾಗಿದೆ. ಸಿದ್ದರಾಮಯ್ಯ(Siddaramaiah)ನವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ(resignation) ಸಲ್ಲಿಸಿದ್ದು, ಮುಂದಿನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಎಂಬ ಸಂದೇಶ ನೀಡಿದ್ದಾರೆ.

8ನೇ ಬಾರಿ ವಿಧಾನಸಭೆ ಪ್ರವೇಶಿಸಿರುವ ಡಿ.ಕೆ.ಶಿವಕುಮಾರ್ ಸೋಲಿಲ್ಲದ ಸರದಾರ, ಕಾಂಗ್ರೆಸ್ ಪಕ್ಷದಲ್ಲಿ ಡೈನಾಮಿಕ್ ಲೀಡರ್ ಎಂದೇ ಬಿಂಬಿತಗೊಂಡವರು. ಈಗ ಬೆಂಗಳೂರು ದಕ್ಷಿಣ (ರಾಮನಗರ) ಜಿಲ್ಲೆಯಿಂದ ಮುಖ್ಯಮಂತ್ರಿ ಗಾದಿ ಅಲಂಕರಿಸಿದ ಕಾಂಗ್ರೆಸ್‌ನ ಎರಡನೇ ನಾಯಕ ಎಂಬ ಪ್ರಶಂಸೆಗೆ ಪಾತ್ರರಾಗಲಿದ್ದಾರೆಯೇ ಎಂಬ ಪ್ರಶ್ನೆ ಮೂಡಿದೆ.

ವಿಧಾನಸೌಧದ ನಿರ್ಮಾತೃ ಕೆಂಗಲ್ ಹನುಮಂತಯ್ಯ ಮೂಲತಃ ರಾಮನಗರದವರು. 1952 ಮತ್ತು 1957ರ ಚುನಾವಣೆಗಳಲ್ಲಿ ರಾಮನಗರ ಕ್ಷೇತ್ರದಿಂದ ಕೆಂಗಲ್ ಆಯ್ಕೆಯಾಗಿದ್ದರು. 1952ರಲ್ಲಿ ಸಿಎಂ ಪಟ್ಟ ಅವರಿಗೆ ಒಲಿದು ಬಂದಿತ್ತು. 1983ರಲ್ಲಿ ಬಿಜೆಪಿ ಬೆಂಬಲದೊಂದಿಗೆ ಅಧಿಕಾರಕ್ಕೆ ಬಂದ ಜನತಾಪಕ್ಷದ ಸರ್ಕಾರದಲ್ಲಿ ರಾಮಕೃಷ್ಣ ಹೆಗಡೆಗೆ ಮುಖ್ಯಮಂತ್ರಿ ಹುದ್ದೆ ಒಲಿದಿತ್ತು. ಈಗ ಡಿಕೆಶಿಗೆ ಅವಕಾಶ ಸಿಕ್ಕರೆ ಕನಕಪುರ ಕ್ಷೇತ್ರಕ್ಕೆ 2ನೇ ಬಾರಿ ಸಿಎಂ ಹುದ್ದೆ ಲಭಿಸಿದಂತಾಗುತ್ತದೆ.

ಗೌಡರ ಕುಟುಂಬಕ್ಕೆ 3 ಬಾರಿ ಅವಕಾಶ:

1994ರಲ್ಲಿ ರಾಮನಗರದಿಂದಲೇ ಗೆದ್ದ ದೇವೇಗೌಡರು ಮುಖ್ಯಮಂತ್ರಿ ಹುದ್ದೆಗೇರಿ 17 ತಿಂಗಳು ಆಡಳಿತ ನಡೆಸಿದರು. ಇನ್ನು, 2004ರಲ್ಲಿ ರಾಮನಗರ ಕ್ಷೇತ್ರದಿಂದ ವಿಧಾನಸಭೆಗೆ ಮೊದಲ ಬಾರಿ ಪ್ರವೇಶಿಸಿದ ಕುಮಾರಸ್ವಾಮಿ ಜೆಡಿಎಸ್ - ಬಿಜೆಪಿ ಮೈತ್ರಿ ಸರ್ಕಾರದಲ್ಲಿ 20 ತಿಂಗಳು ಮುಖ್ಯಮಂತ್ರಿಯಾದರು.