ಬಯಲಾಗಲಿದೆ ಸಚಿವರೊಬ್ಬರ ಅಕ್ರಮ: ರಾಜ್ಯ ರಾಜಕಾರಣದಲ್ಲಿ ಬಾಂಬ್ ಸಿಡಿಸಿದ ಕುಮಾರಸ್ವಾಮಿ

0 ಪರ್ಸೆಂಟ್ ಕಮಿಷನ್ ಆರೋಪ ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದೆ. ಇದರ ಮಧ್ಯೆ ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಅವರು ಸಚಿವರೊಬ್ಬರ ಅಕ್ರಮದ ಬಗ್ಗೆ ದಾಖಲಿ ಬಿಡುಗಡೆ ಮಾಡಲು ಮುಂದಾಗಿದ್ದಾರೆ.
 

Will Reveal Minister corruption documents In Session On Sept 22 Says HD Kumaraswamy rbj

ಕಲಬುರಗಿ, (ಸೆಪ್ಟೆಂಬರ್.21): ಈಗಾಗಲೇ ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಪಿಎಸ್‌ಐ, ಕೆಪಿಟಿಸಿಎಲ್ ಹಾಗೂ ಶಿಕ್ಷಕರ ನೇಮಕಾತಿ ಅಕ್ರಮ ಭಾರೀ ಸದ್ದು ಮಾಡುತ್ತಿದೆ. ಅದರಲ್ಲೂ ಪ್ರಮುಖವಾಗಿ ಬೊಮ್ಮಾಯಿ ಸರ್ಕಾರದ ವಿರುದ್ಧ 40 ಪರ್ಸೆಂಟ್ ಕಮಿಷನ್ ಆರೋಪ ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದೆ.
 
ವಿರೋಧ ಪಕ್ಷ ಕಾಂಗ್ರೆಸ್ ಸಾಮಾಜಿಕ ಜಾಲತಾಣಗಳ ಮೂಲಕ ಬಿಜೆಪಿ ಸರ್ಕಾರದ 40 ಪರ್ಸೆಂಟ್ ಕಮಿಷನ್ ಜಗಜ್ಜಾಹೀರು ಮಾಡುತ್ತಿದೆ. ಇದರಿಂದ ಕರ್ನಾಟಕ ವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ಇದು ಬಿಜೆಪಿ ಮೇಲೆ ಭಾರೀ ಪರಿಣಾಮ ಬೀಳಲಿದೆ. ಇದರ ಮಧ್ಯೆ ಇದೀಗ ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಹೊಸ ಬಾಂಬ್ ಸಿಡಿಸಿದ್ದಾರೆ.

ಕಾಂಗ್ರೆಸ್‌ ಮತ್ತು ಬಿಜೆಪಿ ಎರಡೂ ಪಕ್ಷಗಳು ಒಂದೇ ನಾಣ್ಯದ ಎರಡು ಮುಖಗಳು: ಎಚ್‌.ಡಿ.ಕುಮಾರಸ್ವಾಮಿ

ಹೌದು...ಅಧಿವೇಶನದಲ್ಲಿ ಸಚಿವರೊಬ್ಬರ ಅಕ್ರಮಕ್ಕೆ ಸಂಬಂಧಿಸಿದ ದಾಖಲೆ ಬಿಡುಗಡೆ ಮಾಡಲು ಕುಮಾರಸ್ವಾಮಿ ಸಜ್ಜಾಗಿದ್ದು, ಬಿಜೆಪಿಯಲ್ಲಿ ತಳಮಳ ಸೃಷ್ಟಿಸಿದೆ.

ಕಲಬುರಗಿ ನಗರದ ವಿಮಾನ ನಿಲ್ದಾಣದಲ್ಲಿ ಈ ಬಗ್ಗೆ ಬುಧವಾರ ಸುದ್ದಿಗಾರರಿಗೆ ಮಾಹಿತಿ ನೀಡಿದ ಅವರು. ಯಾವ ಸಚಿವರು, ಯಾವ ಅಕ್ರಮ ಎಂಬುದೆಲ್ಲವನ್ನೂ ನಾಳೆ(ಸೆ.22) ಸದನದಲ್ಲಿ ಬಹಿರಂಗ ಮಾಡುವೆ. ನಾನು ಗಾಳಿಯಲ್ಲಿ ಗುಂಡು ಹೊಡೆಯುವ ಕೆಲಸ ಮಾಡಲ್ಲ, ಹಿಟ್ ಆಯಂಡ್ ರನ್ ಅಲ್ಲ. ನನ್ನ ಬಗ್ಗೆ ಹಗುರವಾಗಿ ಮತ್ತು ಏಕವಚನದಲ್ಲಿ ಮಾತನಾಡಿರುವ ಆ ಸಚಿವರಿಗೆ ಇದು ನಮ್ಮ ಸ್ಯಾಂಪಲ್‌. ಮುಂದಿನ ದಿನಗಳಲ್ಲಿ ಇನ್ನೂ ಕೆಲವು ದಾಖಲೆಗಳನ್ನು ಬಿಡುಗಡೆ ಮಾಡುವೆ ಎಂದು ಹೊಸ ಬಾಂಬ್ ಸಿಡಿಸಿದರು.

ಸಚಿವರೊಬ್ಬರು ನಿಯಮ ಉಲ್ಲಂಘಿಸಿ, ಅಧಿಕಾರ ದುರುಪಯೋಗ ಮಾಡಿಕೊಂಡು ಮಾಡಿರುವ ಅಕ್ರಮವನ್ನು ದಾಖಲೆ ಸಮೇತ ಬಯಲಿಗೆ ಎಳೆಯುವೆ ಎಂದು ಹೇಳುವ ಮೂಲಕ ಕುಮಾರಸ್ವಾಮಿ ಅವರು ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದ್ದಾರೆ.

ಹಾಗಾದ್ರೆ, ಅಕ್ರಮ ಮಾಡಿದ ಸಚಿವರು ಯಾರು? ಆ ಸಚಿವರೊಬ್ಬರು ಮಾಡಿದ ಅಕ್ರಮ ಯಾವುದು? ಕುಮಾರಸ್ವಾಮಿಯನ್ನು ಏಕವಚನದಲ್ಲಿ ನಿಂದಿಸಿದ ಸಚಿವರು ಯಾರು? ಎನ್ನುವುದು ರಾಜ್ಯ ರಾಜಕಾರಣದಲ್ಲಿ ತೀವ್ರ ಕುತೂಹಲ ಮೂಡಿಸಿದೆ.

Latest Videos
Follow Us:
Download App:
  • android
  • ios