9 ವಿಧಾನಸಭಾ ಕ್ಷೇತ್ರದಲ್ಲಿ ಮಹಿಳೆಯರನ್ನು ಕಣಕ್ಕಿಳಿಸಲಾಗುವುದು    ಜೆಡಿಎಸ್‌ ವರಿಷ್ಠ ದೇವೇಗೌಡರಿಂದ ಮಹತ್ವದ ಘೋಷಣೆ 

ಬೆಂಗಳೂರು (ಸೆ.03): ಮುಂದಿನ ಸಾರ್ವತ್ರಿಕ ವಿಧಾನಸಭೆ ಚುನಾವಣೆ ವೇಳೆ ಬೆಂಗಳೂರು ನಗರದ 9 ವಿಧಾನಸಭಾ ಕ್ಷೇತ್ರದಲ್ಲಿ ಮಹಿಳೆಯರನ್ನು ಕಣಕ್ಕಿಳಿಸಲಾಗುವುದು ಎಂದು ಜೆಡಿಎಸ್‌ ವರಿಷ್ಠ ದೇವೇಗೌಡ ಘೋಷಿಸಿದ್ದಾರೆ. 

 ಗುರುವಾರ ಪಕ್ಷದ ಕಚೇರಿಯಲ್ಲಿ ಮಹಿಳಾ ಘಟಕದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಮಹಿಳಾ ಸಮಾವೇಶ ಉದ್ಘಾಟಿಸಿ ಅವರು ಮಾತನಾಡಿದರು

ಪಕ್ಷ ಬಲಪಡಿಸದವರಿಗೆ ಟಿಕೆಟ್‌ ಇಲ್ಲ: ದೇವೇಗೌಡ

2023ರ ವಿಧಾನಸಭೆ ಚುನಾವಣೆಗೆ ಬೆಂಗಳೂರು ನಗರದ ಎಲ್ಲಾ 28 ವಿಧಾನಸಭಾ ಕ್ಷೇತ್ರದಲ್ಲಿಯೂ ಅಭ್ಯರ್ಥಿಯನ್ನು ಚುನಾವಣಾ ಕಣಕ್ಕಿಳಿಸಲಾಗುವುದು. ಈ ಪೈಕಿ ಒಂಭತ್ತು ಕ್ಷೇತ್ರದಲ್ಲಿ ಮಹಿಳೆಯರಿಗೆ ಟಿಕೆಟ್‌ ನೀಡಲಾಗುವುದು ಎಂದರು. 

ಅವರು ಸೋಲಿ, ಗೆಲ್ಲಲಿ ಯಾವುದೇ ಸಮಸ್ಯೆ ಇಲ್ಲ. ಆದರೆ, ಪಕ್ಷದ ಸಂಘಟನೆಗೆ ಶ್ರಮಿಸಲಿ, ಒಂದು ವೇಳೆ ಸೋತರೆ ಅವರು ಮುಂದೆ ಬೆಳೆಯುತ್ತಾರೆ. ಹೀಗಾಗಿ ಎಲ್ಲಾ ಕ್ಷೇತ್ರಗಳಿಗೂ ಅಭ್ಯರ್ಥಿಗಳನ್ನು ಹಾಕುತ್ತೇವೆ ಎಂದರು.