Asianet Suvarna News Asianet Suvarna News

Assembly election 2023: ಕಾಂಗ್ರೆಸ್‌ ಗೆದ್ದರೆ ಶೇ.33 ಮಹಿಳಾ ಮೀಸಲಿಗೆ ಒತ್ತಾಯ: ಸಿದ್ದರಾಮಯ್ಯ

ಮಹಿಳೆಯರಿಗೆ ಸ್ಥಳೀಯ ಸಂಸ್ಥೆಗಳಲ್ಲಿ ಮೀಸಲಾತಿ ಕಲ್ಪಿಸಿದ್ದು ಕಾಂಗ್ರೆಸ್‌ ಪಕ್ಷ. ಅದೇ ರೀತಿ ಮಹಿಳೆಯರಿಗೆ ವಿಧಾನಸಭೆ ಮತ್ತು ಲೋಕಸಭೆಯಲ್ಲೂ ಶೇ.33ರಷ್ಟುಮೀಸಲಾತಿ ಸಿಗಬೇಕು. ಕೇಂದ್ರದಲ್ಲಿ ನಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ಮಹಿಳೆಯರಿಗೆ ಮೀಸಲಾತಿ ಜಾರಿಗೆ ತರಬೇಕು ಎಂದು ಒತ್ತಾಯಿಸುತ್ತೇನೆ’ ಎಂದು ವಿಧಾನಸಭೆ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

women reservation if congress win assembly election says siddaramaiah rav
Author
First Published Jan 17, 2023, 9:44 AM IST

ಬೆಂಗಳೂರು (ಜ.17) : ‘ಮಹಿಳೆಯರಿಗೆ ಸ್ಥಳೀಯ ಸಂಸ್ಥೆಗಳಲ್ಲಿ ಮೀಸಲಾತಿ ಕಲ್ಪಿಸಿದ್ದು ಕಾಂಗ್ರೆಸ್‌ ಪಕ್ಷ. ಅದೇ ರೀತಿ ಮಹಿಳೆಯರಿಗೆ ವಿಧಾನಸಭೆ ಮತ್ತು ಲೋಕಸಭೆಯಲ್ಲೂ ಶೇ.33ರಷ್ಟುಮೀಸಲಾತಿ ಸಿಗಬೇಕು. ಕೇಂದ್ರದಲ್ಲಿ ನಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ಮಹಿಳೆಯರಿಗೆ ಮೀಸಲಾತಿ ಜಾರಿಗೆ ತರಬೇಕು ಎಂದು ಒತ್ತಾಯಿಸುತ್ತೇನೆ’ ಎಂದು ವಿಧಾನಸಭೆ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ಬೆಂಗಳೂರು ಅರಮನೆ ಮೈದಾನದಲ್ಲಿ ನಡೆದ ‘ನಾ ನಾಯಕಿ’(Naa Nayaki) ಮಹಿಳಾ ಕಾಂಗ್ರೆಸ್‌ ಸಮಾವೇಶ(Congress women conferenc) ಉದ್ದೇಶಿಸಿ ಮಾತನಾಡಿದ ಅವರು, ರಾಜೀವ್‌ ಗಾಂಧಿ(Rajeev Gandhi) ಅವರು ಪ್ರಧಾನಿಯಾಗಿದ್ದಾಗ ಸಂವಿಧಾನ ತಿದ್ದುಪಡಿ ಮಾಡಿ ಮಹಿಳೆಯರಿಗೆ, ಹಿಂದುಳಿದವರಿಗೆ ಮೀಸಲಾತಿ ಸ್ಥಳೀಯ ಸಂಸ್ಥೆಗಳಲ್ಲಿ ಮೀಸಲಾತಿ ಕಲ್ಪಿಸಿದ್ದರು. ಮಹಿಳೆಯರಿಗೆ ವಿಧಾನಸಭೆ ಮತ್ತು ಲೋಕಸಭೆಯಲ್ಲೂ 33% ಮೀಸಲಾತಿ ನೀಡಬೇಕು ಎಂಬ ಮಸೂದೆಯನ್ನು 1995ರಲ್ಲಿ ಲೋಕಸಭೆ ಮುಂದೆ ತರಲಾಗಿದೆ. ಈ ಮಸೂದೆ ಇನ್ನೂ ಹಾಗೆ ಇದೆ. ಒಂದು ವೇಳೆ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದರೆ ಮಹಿಳೆಯರಿಗೆ ಮೀಸಲಾತಿ ನೀಡುವ ಈ ಬಿಲ್‌ ಅನ್ನು ಪಾಸ್‌ ಮಾಡಿ ಜಾರಿ ಮಾಡುವ ಕೆಲಸ ಮಾಡಬೇಕು. ಇದು ನನ್ನ ಒತ್ತಾಯ ಎಂದು ಹೇಳಿದರು.

ಬೆಂಗಳೂರಿನಲ್ಲಿ ನಡೆದ ನಾ ನಾಯಕಿ ಕಾರ್ಯಕ್ರಮ: ಪ್ರಿಯಾಂಕಾ ಗಾಂಧಿ ಆಕರ್ಷಕ ಫೋಟೋ ವೈರಲ್‌

ಬಿಜೆಪಿ ಶೇ.10ರಷ್ಟುಭರವಸೆ ಈಡೇರಿಸಿಲ್ಲ:

ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದು ಮೂರೂವರೆ ವರ್ಷ ಆಗಿದೆ. ಈವರೆಗೆ ಮಹಿಳೆಯರಿಗಾಗಿ ಒಂದೇ ಒಂದು ಕಾರ್ಯಕ್ರಮ ರೂಪಿಸಿಲ್ಲ. 2018ರಲ್ಲಿ ನೀಡಿದ್ದ ಭರವಸೆಗಳ ಪೈಕಿ ಶೇ.10ರಷ್ಟನ್ನೂ ಈಡೇರಿಸಿಲ್ಲ. ಇತ್ತೀಚೆಗೆ ನಮ್ಮ ಸರ್ಕಾರ ಉಚಿತವಾಗಿ 200 ಯುನಿಟ್‌ ವಿದ್ಯುತ್‌ ಘೋಷಿಸಿದ್ದರಿಂದ ನಿದ್ದೆಯಿಂದ ಎದ್ದಿರುವ ರಾಜ್ಯ ಬಿಜೆಪಿಯು ಮಹಿಳೆಯರಿಗೆ ಪುಂಖಾನುಪುಂಕವಾಗಿ ಭರವಸೆ ನೀಡಲು ಆರಂಭಿಸಿದೆ. ನಾ ನಾಯಕಿ ಸಮಾವೇಶಕ್ಕೆ ಪ್ರಿಯಾಂಕಾ ಗಾಂಧಿ ಅವರು ಬರುತ್ತಿದ್ದಾರೆಂದು ತಿಳಿದ ಬಳಿಕ ದೊಡ್ಡ ದೊಡ್ಡ ಜಾಹಿರಾತು ನೀಡಿದೆ. ಆದರೆ, ಇದನ್ನು ಜನರು ನಂಬುವುದಿಲ್ಲ. ಬಿಜೆಪಿಯಂತಹ ವಚನಭ್ರಷ್ಟಸರ್ಕಾರ ಯಾವುದೂ ಇಲ್ಲ ಎಂಬುದು ಜನರಿಗೆ ಅರಿವಾಗಿದೆ ಎಂದು ಟೀಕಿಸಿದರು.

ಈ ಚುನಾವಣೆಯಲ್ಲಿ ಮಹಿಳೆಯರಿಗೆ ಹೆಚ್ಚು ಟಿಕೆಟ್‌ ನೀಡಲು ಮನವಿ ಇಡ್ತೇವೆ: ಉಮಾಶ್ರೀ

ಬಿಜೆಪಿ ಸಂವಿಧಾನ ಜಾರಿಯಾಗುವ ಮೊದಲಿನಿಂದಲೂ ಮಹಿಳೆಯರ ಪರವಾಗಿ ಇಲ್ಲ. ಇವರೇ ಮನುಸ್ಮೃತಿಯ ಮೂಲಕ ಮಹಿಳೆಯರನ್ನು ದಮನ ಮಾಡಿದ್ದರು. ನೆಹರು ಅವರ ಆಡಳಿತದಲ್ಲಿ ಬಾಲ್ಯ ವಿವಾಹ, ಸತಿ ಪದ್ಧತಿಗಳಂಥ ಅನಿಷ್ಟಪದ್ಧತಿಗಳನ್ನು ತೊಡೆದು ಹಾಕಲು ಹಿಂದೂ ವಿವಾಹ ಕಾಯ್ದೆ ಜಾರಿಗೆ ತಂದರು. ಹಿಂದೂ ಉತ್ತರಾಧಿಕಾರಿ ಕಾಯ್ದೆ, ದತ್ತು ಸ್ವೀಕರಿಸುವ ಕಾಯ್ದೆ, ವರದಕ್ಷಿಣೆ ನಿಷೇಧ ಕಾಯ್ದೆಯನ್ನು ಜಾರಿಗೆ ತಂದರು. 1951ರ ಜನಗಣತಿ ಪ್ರಕಾರ ದೇಶದ ಮಹಿಳಾ ಸಾಕ್ಷರತೆ ಪ್ರಮಾಣ 8.86% ಇದ್ದದ್ದು 2011ರ ಜನಗಣತಿಯ ಪ್ರಕಾರ 65.45% ಗೆ ಹೆಚ್ಚಳವಾಗಲು ಕಾಂಗ್ರೆಸ್‌ ಸರ್ಕಾರ ಕಾರಣ ಎಂದು ಹೇಳಿದರು.

Follow Us:
Download App:
  • android
  • ios