Asianet Suvarna News Asianet Suvarna News

ಬೆಂಗ್ಳೂರು, ದೆಹಲಿಗಿಂತ ಕ್ಷೇತ್ರದ ಸಂಪರ್ಕದಲ್ಲಿದ್ದು ಜನ ಪರ ಕೆಲಸ ಮಾಡಿ: ನೂತನ ಸಂಸದರಿಗೆ ರಾಹುಲ್‌ ಗಾಂಧಿ ಸೂಚನೆ

ಮೊದಲ ಬಾರಿಗೆ ಗೆದ್ದವರು ಕ್ಷೇತ್ರದಿಂದ ದೂರ ಉಳಿಯಬಾರದು. ಬೆಂಗಳೂರು ಹಾಗೂ ದೆಹಲಿಗಿಂತ ಹೆಚ್ಚಾಗಿ ಕ್ಷೇತ್ರದ ಜನರ ಸಂಪರ್ಕದಲ್ಲಿ ಇರಬೇಕು. ನಮ್ಮದೇ ಸರ್ಕಾರ ರಾಜ್ಯದಲ್ಲಿದ್ದು, ಅದರ ನೆರವು ಪಡೆದು ಜನರ ಪರವಾಗಿ ಕೆಲಸ ಮಾಡಬೇಕು ಎಂದು ಸಲಹೆ ನೀಡಿದ ರಾಹುಲ್ ಗಾಂಧಿ

Work for the People Rahul Gandhi Instruct to Karnataka;s Congress New MP's  grg
Author
First Published Jun 7, 2024, 9:38 PM IST

ಬೆಂಗಳೂರು(ಜೂ.07): ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ ಅವರು ಕರ್ನಾಟಕದ 28 ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಗಳ ಜೊತೆ ಚರ್ಚೆ ನಡೆಸಿದ್ದಾರೆ. ಲೋಕಸಭೆಗೆ ಆಯ್ಕೆಯಾದ 9 ಸಂಸದರಿಗೆ ಅಭಿನಂದನೆ ಸಲ್ಲಿಸಿ ಯಾವ ರೀತಿ ಕಾರ್ಯನಿರ್ವಹಿಸಬೇಕು ಎಂದು ಕಿವಿಮಾತು ಹೇಳಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. 

ಎಕ್ಸ್‌ನಲ್ಲಿ ಬರೆದುಕೊಂಡಿರುವ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು, ಮೊದಲ ಬಾರಿಗೆ ಗೆದ್ದವರು ಕ್ಷೇತ್ರದಿಂದ ದೂರ ಉಳಿಯಬಾರದು. ಬೆಂಗಳೂರು ಹಾಗೂ ದೆಹಲಿಗಿಂತ ಹೆಚ್ಚಾಗಿ ಕ್ಷೇತ್ರದ ಜನರ ಸಂಪರ್ಕದಲ್ಲಿ ಇರಬೇಕು. ನಮ್ಮದೇ ಸರ್ಕಾರ ರಾಜ್ಯದಲ್ಲಿದ್ದು, ಅದರ ನೆರವು ಪಡೆದು ಜನರ ಪರವಾಗಿ ಕೆಲಸ ಮಾಡಬೇಕು ಎಂದು ಸಲಹೆ ನೀಡಿದ್ದಾರೆ ಎಂದು ಹೇಳಿದ್ದಾರೆ. 

ಬಿಜೆಪಿಯಿಂದಲೂ ನಿಗಮ ಹಣ ಅಕ್ರಮ ವರ್ಗ: ದಾಖಲೆಗಳು ಸಿಕ್ಕಿವೆ ಎಂದ ಡಿ.ಕೆ.ಶಿವಕುಮಾರ್‌

ಪರಾಭವಗೊಂಡ ಅಭ್ಯರ್ಥಿಗಳಿಗೂ ಧೈರ್ಯ ತುಂಬಿದ ರಾಹುಲ್ ಗಾಂಧಿ ಅವರು, ನೀವು ಸೋತರೂ ಜನರ ಮಧ್ಯೆ ಇರಬೇಕು ಹಾಗೂ ನಮಗೆ ಮತ ನೀಡದವರ ಹೃದಯ ಗೆಲ್ಲಬೇಕು ಎಂದು ಮಾರ್ಗದರ್ಶನ ನೀಡಿದ್ದಾರೆ ಎಂದು ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. 

Latest Videos
Follow Us:
Download App:
  • android
  • ios