Asianet Suvarna News Asianet Suvarna News

100 ದಿನ ಚುರುಕಾಗಿ ಕೆಲಸ ಮಾಡಿ ಪಕ್ಷ ಅಧಿಕಾರಕ್ಕೆ ತನ್ನಿ, ಶಕ್ತಿ ಕೇಂದ್ರದ ಸಭೆಯಲ್ಲಿ ಬಿ.ಎಲ್.ಸಂತೋಷ್

ರಾಜ್ಯ ವಿಧಾನ ಸಭೆ ಚುನಾವಣಾ ಪ್ರಕ್ರಿಯೆಗೆ ಇನ್ನೇನೂ ಮೂರು ತಿಂಗಳು ಮಾತ್ರ ಬಾಕಿ ಉಳಿದಿದ್ದು, ನಾಯಕರಾಗಲಿ,ಕಾರ್ಯಕರ್ತರಾಗಲಿ ಬೆಂಗಳೂರು ಹೋಗುವುದನ್ನು ಬಿಟ್ಟು, ನಿಮ್ಮ ನಿಮ್ಮ ಕ್ಷೇತ್ರಗಳಲ್ಲಿ ಚುರುಕಾಗಿ ಕಾರ್ಯ ನಿರ್ವಹಿಸುವಂತೆ ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಖಡಕ್ ಆಗಿ ಹೇಳಿದ್ದಾರೆ.

Work hard for 100 days and bring the party to power BL Santosh in BJP meeting gow
Author
First Published Dec 30, 2022, 8:37 PM IST

ಕಲಬುರಗಿ (ಡಿ.30): ರಾಜ್ಯ ವಿಧಾನ ಸಭೆ ಚುನಾವಣಾ ಪ್ರಕ್ರಿಯೆಗೆ ಇನ್ನೇನೂ ಮೂರು ತಿಂಗಳು ಮಾತ್ರ ಬಾಕಿ ಉಳಿದಿದ್ದು, ನಾಯಕರಾಗಲಿ, ಕಾರ್ಯಕರ್ತರಾಗಲಿ ಬೆಂಗಳೂರು ಹೋಗುವುದನ್ನು ಬಿಟ್ಟು, ನಿಮ್ಮ ನಿಮ್ಮ ಕ್ಷೇತ್ರಗಳಲ್ಲಿ ಚುರುಕಾಗಿ ಕಾರ್ಯ ನಿರ್ವಹಿಸುವಂತೆ ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಹೇಳಿದರು. ಅವರು ಶುಕ್ರವಾರ ನಗರದ ಗೋಲ್ಡ್ ಹಬ್,ನ ಸಭಾಂಗಣದಲ್ಲಿ ಭಾರತೀಯ ಜನತಾ ಪಕ್ಷ ಕಲಬುರಗಿ ಜಿಲ್ಲೆಯ 9 ಮಂಡಲಗಳ ಶಕ್ತಿ ಕೇಂದ್ರ, ಮಹಾ ಶಕ್ತಿ ಕೇಂದ್ರ ಹಾಗೂ ಮಂಡಲಗಳ ಪದಾಧಿಕಾರಿಗಳ ಸಭೆಯಲ್ಲಿ ಮಾತನಾಡಿದರು.

ಈ ಬಾರಿ ಜಿಲ್ಲೆಯ 9 ವಿಧಾನಸಭಾ ಕ್ಷೇತ್ರಗಳಲ್ಲಿ ಕೇಸರಿ ಪತಾಕೆ ಹಾರಬೇಕು. ಹೀಗಾಗಿ ನಾವೆಲ್ಲರೂ ಬೂತ್ ಗಳ ಕಡೆಗೆ ಹೆಚ್ಚು ಕೇಂದ್ರಿಕೃತವಾಗಿ ಕಾರ್ಯನಿರ್ವಹಿಸಬೇಕಿದೆ. ಬೂತ್  ಗೆದ್ದಲ್ಲಿ ಮಾತ್ರ, ನಾವು ಎಲ್ಲವನ್ನೂ ವಿಜಯಶಾಲಿಯಾಗಲಿದ್ದೇವೆ. ಕಳೆದ ಚುನಾವಣೆಯಲ್ಲಿ ನಮ್ಮ ಪಕ್ಷದ ಖಾತೆಯಲ್ಲಿ 104 ಸ್ಥಾನಗಳು ಮಾತ್ರ ಬಂದಿವೆ. ಆದರೆ ಈ ಬಾರಿ ಅತೀ ಹೆಚ್ಚು ಸ್ಥಾನಗಳನ್ನು ಗೆಲ್ಲುವುದರ ಮೂಲಕ ನಮ್ಮ ಗುರಿಯನ್ನು  ತಲುಪಬೇಕಾಗಿದೆ ಎಂದು ಕಿವಿ ಮಾತು ಹೇಳಿದರು.

ಶಾಸಕರ ಖರೀದಿಸುವ ಸಂಚು: ಬಿ.ಎಲ್‌. ಸಂತೋಷ್‌ ವಿರುದ್ಧ ಎಸ್‌ಐಟಿ ತನಿಖೆ ಕೋರಿದ್ದ ಅರ್ಜಿ ವಜಾ

ಕಲಬುರಗಿ ಉತ್ತರ ಮತಕ್ಷೇತ್ರದಲ್ಲಿ ಕಳೆದ ಬಾರಿ ಅತ್ಯುತ್ತಮ ಮತಗಳನ್ನು ಪಡೆದು, ಅಲ್ಪ ಮತಗಳಲ್ಲೇಪರಾಜಯವಾಗಿದ್ದೇವೆ. ಈ ಬಾರಿ ಉತ್ತರ ಮತಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಗೆಲುವು ಶತಸಿದ್ದ ಆಗಲೇಬೇಕು, ಆ ರೀತಿ ಪಕ್ಷವನ್ನು ಸಂಘಟನಾತ್ಮಕವಾಗಿ ಬಲಪಡಿಸಬೇಕು ಎಂದು ಹೇಳಿದರು. ಇದೇ ಸಂದರ್ಭದಲ್ಲಿ ದೇಶದ ನೆಚ್ಚಿನ ಪ್ರಧಾನಿ ನರೇಂದ್ರ ಮೋದಿಯವರ ತಾಯಿ ಶ್ರೀಮತಿ ಹಿರಾಬೇನ್ ಮೋದಿ ನಿಧನದ ಹಿನ್ನೆಲೆಯಲ್ಲಿ ವೇದಿಕೆಯಲ್ಲಿ ಶೃದ್ಧಾಂಜಲಿ ಸಲ್ಲಿಸಲಾಯಿತು.

ಬಿಜೆಪಿ ಗೆಲುವು ಕಾಲದ ಅವಶ್ಯಕತೆ: ಬಿ.ಎಲ್‌.ಸಂತೋಷ್‌ 

Follow Us:
Download App:
  • android
  • ios