ನರೇಂದ್ರ ಮೋದಿ ಮತ್ತೆ ಪ್ರಧಾನಿಯಾಗಲು ಶ್ರಮಿಸಿ: ಶೋಭಾ ಕರೆ
ಮಗದೊಮ್ಮೆ ದೇಶದ ಪ್ರಧಾನಿಯನ್ನಾಗಿಸಲು ಸಂಘಟಿತರಾಗಿ ಶ್ರಮಿಸೋಣ ಎಂದು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಖಾತೆ ರಾಜ್ಯ ಸಚಿವೆ ಹಾಗೂ ಉಡುಪಿ-ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಕಾರ್ಯಕರ್ತರಿಗೆ ಹೇಳಿದರು.
ಉಡುಪಿ (ಜೂ.15) : ರಾಜ್ಯದಲ್ಲಿ ಬಿಜೆಪಿ ಸೋತಿದ್ದರೂ ಉಡುಪಿ ಜಿಲ್ಲೆಯಲ್ಲಿ ಐದೂ ಸ್ಥಾನಗಳನ್ನು ಗೆದ್ದಿದ್ದು, ಇದಕ್ಕೆ ಕಾರಣಕರ್ತರಾದ ಜಿಲ್ಲೆಯ ಸಮಸ್ತ ಬಿಜೆಪಿ ಕಾರ್ಯಕರ್ತರು ಅಭಿನಂದನಾರ್ಹರು. ಮುಂದೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಮಗದೊಮ್ಮೆ ದೇಶದ ಪ್ರಧಾನಿಯನ್ನಾಗಿಸಲು ಸಂಘಟಿತರಾಗಿ ಶ್ರಮಿಸೋಣ ಎಂದು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಖಾತೆ ರಾಜ್ಯ ಸಚಿವೆ ಹಾಗೂ ಉಡುಪಿ-ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಕಾರ್ಯಕರ್ತರಿಗೆ ಹೇಳಿದರು.
ಅವರು ಬುಧವಾರ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ನಡೆದ ಜಿಲ್ಲಾ ಕಾರ್ಯ ತಂಡದ ಅವಲೋಕನಾ ಸಭೆಯನ್ನುದ್ದೇಶಿಸಿ ಮಾತನಾಡಿದರು.
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ದಿನದಿಂದ ಅಲ್ಪಸಂಖ್ಯಾತರ ದರ್ಪ ಹೆಚ್ಚುತ್ತಿದೆ. ಈ ಸರ್ಕಾರದ ಜನವಿರೋಧಿ ನೀತಿಗಳ ವಿರುದ್ಧ ಹೋರಾಟಗಳು ಅಗತ್ಯವಾಗಿದೆ ಎಂದರು.
ರಾಷ್ಟ್ರೀಯ ಹೆದ್ದಾರಿ ಗುತ್ತಿಗೆದಾರರನ್ನು ಬ್ಲಾಕ್ ಲಿಸ್ವ್ ಮಾಡಿಸುತ್ತೇನೆ: ಶೋಭಾ ಕರಂದ್ಲಾಜೆ ಎಚ್ಚರಿಕೆ
ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ವಿಧಾನ ಪರಿಷತ್ ಸದಸ್ಯ ಎನ್. ರವಿ ಕುಮಾರ್ ಅವರು ಮಾತನಾಡಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಕರೆಯಂತೆ ಪ್ರತೀ ವಿಧಾನಸಭಾ ಕ್ಷೇತ್ರಗಳಲ್ಲಿ ಕೀ ವೋಟರ್ಸ್ ಗಳನ್ನು ಗುರುತಿಸಿ ಭೇಟಿ ಮಾಡಿ, ಜಿಲ್ಲಾ, ಮೋರ್ಚಾ, ಪ್ರಕೋಷ್ಠ, ಸೋಶಿಯಲ್ ಮೀಡಿಯಾ ಟೀಮ್ ಹಾಗೂ ಹಿರಿಯ ಕಾರ್ಯಕರ್ತರ ಸಮಾವೇಶವನ್ನು ಆಯೋಜಿಸಿ, ತಾ.ಪಂ., ಜಿ.ಪಂ., ಮತ್ತು ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಗೆಲುವಿಗೆ ವಾತಾವರಣವನ್ನು ಸೃಷ್ಟಿಸಬೇಕು ಎಂದರು.
ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಅಧ್ಯಕ್ಷತೆ ವಹಿಸಿದ್ದು, ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯಕುಮಾರ್ ಶೆಟ್ಟಿ, ವಿಭಾಗ ಸಂ.ಪ್ರ.ಕಾರ್ಯದರ್ಶಿ ಪ್ರಸಾದ್ ಕುಮಾರ್, ಶಾಸಕರಾದ ವಿ.ಸುನೀಲ್ ಕುಮಾರ್ ಕಾರ್ಕಳ, ಗುರ್ಮೆ ಸುರೇಶ್ ಶೆಟ್ಟಿಕಾಪು, ಗುರುರಾಜ್ ಗಂಟಿಹೊಳಿ ಬೈಂದೂರು, ಜಿಲ್ಲಾ ಪ್ರ. ಕಾರ್ಯದರ್ಶಿಗಳಾದ ಕುತ್ಯಾರು ನವೀನ್ ಶೆಟ್ಟಿ, ಸದಾನಂದ ಉಪ್ಪಿನಕುದ್ರು, ಮನೋಹರ್ ಎಸ್. ಕಲ್ಮಾಡಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಯುವ ಜನತೆಯಿಂದ ದೇಶ ಸದೃಢ: ಶೋಭಾ
ಭಾರತವನ್ನು ಎಲ್ಲಾ ರಂಗಗಳಲ್ಲಿ ವಿಶ್ವದ ಮುಂಚೂಣಿಗೆ ತರುವ, ದೇಶವನ್ನು ವಿಶ್ವದ ಸದೃಢ ರಾಷ್ಟವನ್ನಾಗಿ ಮಾಡುವ ಜವಾಬ್ದಾರಿ ಯುವಜನರ ಮೇಲಿದೆ ಎಂದು ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.
ಬುಧವಾರ ನಗರದ ಪೂರ್ಣಪ್ರಜ್ಞ ಕಾಲೇಜಿನ ಸಭಾಂಗಣದಲ್ಲಿ ಜಿಲ್ಲಾಡಳಿತ ಮತ್ತು ನೆಹರು ಯುವ ಕೇಂದ್ರಗಳ ಸಹಯೋಗದಲ್ಲಿ ನಡೆದ ಜಿಲ್ಲಾ ಮಟ್ಟದ ಯುವ ಉತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಬಿಟ್ಟಿ ಯೋಜನೆಗೆ ಹಣಕಾಸನ್ನು ಹೇಗೆ ಹೊಂದಿಸ್ತೀರಿ?: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ
ಶಾಸಕ ಯಶ್ಪಾಲ್ ಸುವರ್ಣ ಅಧ್ಯಕ್ಷತೆ ವಹಿಸಿದ್ದರು. ನೆಹರು ಯುವ ಕೇಂದ್ರದ ನಿರ್ದೇಶಕ ನಟರಾಜ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾಪು ಶಾಸಕ ಗುರ್ಮೆ ಸುರೇಶ್ ಪಿ ಶೆಟ್ಟಿ, ಡಾ. ಜಿ.ಶಂಕರ್ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ.ಭಾಸ್ಕರ್ ಶೆಟ್ಟಿ, ಜಿಲ್ಲಾ ಯುವ ಅಧಿಕಾರಿ ಯಶ್ವಂತ್ ಯಾದವ್ ಮತ್ತಿತರರು ಉಪಸ್ಥಿತರಿದ್ದರು.