ಸರ್ಕಾರದ ಬಳಿ ಹಣ ಇಲ್ಲ ಆರೋಪಕ್ಕೆ ಕಾಮಗಾರಿ ಉತ್ತರ: ಸಚಿವ ಕೆ.ಎನ್.ರಾಜಣ್ಣ

ರಾಜ್ಯದಲ್ಲಿ ಯಾರು ಹಸಿವುನಿಂದ ಇರಬಾರದು ಎಂದು ಅನ್ನಭಾಗ್ಯ ಯೋಜನೆಯನ್ನು ಜಾರಿಗೊಳಿಸಲಾಗಿದೆ. ಈ ಮೂಲಕ ಸರ್ಕಾರದ ಬಳಿ ಹಣವಿಲ್ಲ ಎಂಬ ಆರೋಪಕ್ಕೆ ಕಾಮಗಾರಿಗಳ ಉದ್ಘಾಟನೆ ಮೂಲಕ ಉತ್ತರ ನೀಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎನ್.ರಾಜಣ್ಣ ಹೇಳಿದರು.
 

Work is the answer to the allegation that the government does not have money Says Minister KN Rajanna gvd

ಅರಸೀಕೆರೆ (ಫೆ.25): ರಾಜ್ಯದಲ್ಲಿ ಯಾರು ಹಸಿವುನಿಂದ ಇರಬಾರದು ಎಂದು ಅನ್ನಭಾಗ್ಯ ಯೋಜನೆಯನ್ನು ಜಾರಿಗೊಳಿಸಲಾಗಿದೆ. ಈ ಮೂಲಕ ಸರ್ಕಾರದ ಬಳಿ ಹಣವಿಲ್ಲ ಎಂಬ ಆರೋಪಕ್ಕೆ ಕಾಮಗಾರಿಗಳ ಉದ್ಘಾಟನೆ ಮೂಲಕ ಉತ್ತರ ನೀಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎನ್.ರಾಜಣ್ಣ ಹೇಳಿದರು. ತಾಲೂಕಿನ ಬಾಣಾವರದ ಸರ್ಕಾರಿ ಕಾಲೇಜು ಆವರಣದಲ್ಲಿ 152 ಕೋಟಿ ರು. ಮೌಲ್ಯದ ಅಭಿವೃದ್ಧಿ ಕಾಮಗಾರಿ ಉದ್ಘಾಟಿಸಿ, ನಾನಾ ಕಾರ್ಯಕ್ರಮಗಳಿಗೆ ಶಂಕುಸ್ಥಾಪನೆ‌ ಕಾರ್ಯಕ್ರಮದಲ್ಲಿ ಮಾತನಾಡಿ, ಮುಂದಿನ ಲೋಕಸಭಾ ಚುನಾವಣೆಯಲ್ಲಿ ಮತದಾರರು ಸರ್ಕಾರಕ್ಕೆ ಗೌರವ ತಂದುಕೊಡಬೇಕು.

ಗ್ರಾಮೀಣ ಜನರನ್ನು ಆರ್ಥಿಕವಾಗಿ ಮೇಲೆತ್ತಲು ಹಲವಾರು ಯೋಜನೆಗಳನ್ನು ರೂಪಿಸಿದ್ದು ಈ ಬರಗಾಲದಲ್ಲಿಯೂ ಕುಡಿಯುವ ನೀರು ,ಉದ್ಯೋಗ, ದನಗಳ ಮೇವಿಗೆ ತೊಂದರೆ ಆಗದಂತೆ ಜನರ ಕಷ್ಟಗಳನ್ನು ದೂರ ಮಾಡುವ ಕೆಲಸವನ್ನು ಸರ್ಕಾರ ಮಾಡುತ್ತಿದೆ. ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷದ ಅಭ್ಯರ್ಥಿಗಳಿಗೆ ಹೆಚ್ಚಿನ ಮತ ನೀಡಿ ಸಿದ್ದರಾಮಯ್ಯ ಬಲಿಷ್ಠವಾಗಲು ತಮ್ಮ ಸಂಪೂರ್ಣ ಬೆಂಬಲ ನೀಡಬೇಕು ಎಂದು ವಿನಂತಿಸಿದರು ಶಾಸಕ ಕೆ.ಎಂ. ಶಿವಲಿಂಗೇಗೌಡ ಮಾತನಾಡಿ, ತಾಲೂಕಿನಲ್ಲಿ ಅಭಿವೃದ್ಧಿ ಕಾರ್ಯಗಳು ನಡೆದಿದೆ ಎಂದರೆ ಅದು ಸಿದ್ದರಾಮಯ್ಯನವರ ಕಾಲದಲ್ಲಿ. ಬಹಳ ಕಾಲ ಈ ಜಿಲ್ಲೆಯನ್ನು ಆಳಿದವರು. 

ಎತ್ತಿನಹೊಳೆ ಯೋಜನೆ ಮೂಲಕ ತಾಲೂಕಿನ ಕೆರೆಗಳಿಗೆ ನೀರು ಕೊಡುವಂತಹ ಯೋಜನೆಯನ್ನು ರೂಪಿಸಿದ್ದು 530 ಗ್ರಾಮಗಳಿಗೆ ಕುಡಿಯುವ ನೀರನ್ನು ಒದಗಿಸಲಾಗಿದೆ. ನಗರಕ್ಕೆ ಶುದ್ಧ ಕುಡಿಯುವ ನೀರನ್ನು ಒದಗಿಸಲಾಗಿದೆ ಎಂದರು. ಹಿಂದುಳಿದ ವರ್ಗಗಳ ಅಭಿವೃದ್ಧಿಗೆ ಶ್ರಮಿಸುತ್ತಿರುವ ಏಕೈಕ ಮುಖ್ಯಮಂತ್ರಿ ಸಿದ್ದರಾಮಯ್ಯ. ಗ್ಯಾರಂಟಿ ಯೋಜನೆಗಳ ಮೂಲಕ ಪ್ರತಿಯೊಂದು ಕುಟುಂಬಕ್ಕೂ ಐದು, ಆರು ಸಾವಿರ ನೆರವನ್ನು ನೀಡಿದ್ದಾರೆ. ಗ್ಯಾರಂಟಿ ಯೋಜನೆಗಳಿಂದ ರಾಜ್ಯ ದಿವಾಳಿಯಾಗಿದೆ ಎಂದು ಹೇಳುತ್ತಿರುವ ವಿರೋಧ ಪಕ್ಷಗಳು ಯೋಜನೆ ಬೇಡ ಎಂದು ಧೈರ್ಯವಾಗಿ ಹೇಳಲಿ. 

ಮೋದಿ ಮತ್ತೊಮ್ಮೆ ಪ್ರಧಾನಿಯನ್ನಾಗಿಸಲು ಪಣ ತೊಡಿ: ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ

ಇದನ್ನು ರಾಜ್ಯದ ಜನ ಮುಂದಿನ ಚುನಾವಣೆಯಲ್ಲಿ ತೀರ್ಮಾನ ಮಾಡುತ್ತಾರೆ. ಅದಾನಿ, ಅಂಬಾನಿ ಅವರ ಸಾವಿರಾರು ಕೋಟಿ ರುಪಾಯಿ ಸಾಲವನ್ನು ಮನ್ನಾ ಮಾಡುವ ಬಿಜೆಪಿ ಸರ್ಕಾರ ರೈತರ ಸಾಲವನ್ನು ಮನ್ನಾ ಮಾಡುವುದಿಲ್ಲ ಎಂದು ಟೀಕಿಸಿದರು ಇಂಧನ ಸಚಿವ ಕೆ.ಜೆ.ಜಾರ್ಜ್, ಕಡೂರು ಶಾಸಕ ಆನಂದ್ ಸೇರಿ, ಜಿಲ್ಲಾ ಕಾಂಗ್ರೆಸ್ ಮುಖಂಡರಾದ ಗೋಪಾಲಸ್ವಾಮಿ, ಅರಕಲಗೋಡು ಪ್ರಸನ್ನ ಸೇರಿ ಹಲವು ಮಂದಿ ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.

Latest Videos
Follow Us:
Download App:
  • android
  • ios