ಯಾದಗಿರಿ, (ಆ.16): ಯಾದಗಿರಿ ಕ್ಷೇತ್ರದ ಬಿಜೆಪಿ ಶಾಸಕ ವೆಂಕಟರೆಡ್ಡಿ ಮುದ್ನಾಳ್​ ಕೋವಿಡ್ ಟೆಸ್ಟ್  ಒಳಗಾಗಿದ್ದು, ಇದೀಗ ವರದಿ ಪಾಸಿಟಿವ್ ಬಂದಿದೆ. 

ನಿನ್ನೆ (ಆ.15) ಸ್ವಾತಂತ್ರ್ಯ ದಿನಾಚರಣೆಯ ಸಮಾರಂಭದಲ್ಲಿ ಭಾಗಿಯಾಗಿದ್ದರು. ಈಗ ಅವರ ಸಂಪರ್ಕಕ್ಕೆ ಬಂದವರೆಲ್ಲರಿಗೂ ಆತಂಕ ಶುರುವಾಗಿದೆ. 

ಕರ್ನಾಟಕದಲ್ಲಿ ಕೊರೊನಾ ಸೋಂಕು ಹೆಚ್ಚಳ; ಸಾವು ಇಳಿಕೆ..!

ಕಾರ್ಯಕ್ರಮದಲ್ಲಿ ಡಿಸಿ, ಎಸ್ಪಿ ಸೇರಿದಂತೆ ಹಲವರು ಭಾಗಿಯಾಗಿದ್ದರು. ತಮ್ಮ ಸಂಪರ್ಕಕ್ಕೆ ಬಂದವರೆಲ್ಲರಿಗೂ ಪರೀಕ್ಷೆ ಮಾಡಿಸಿಕೊಳ್ಳುವಂತೆ ಶಾಸಕರು ಮನವಿ ಮಾಡಿಕೊಂಡಿದ್ದಾರೆ.