* ಸಿಎಂ ಬಿಎಸ್ ಯಡಿಯೂರಪ್ಪ ದೆಹಲಿ ಪ್ರವಾಸ* ಹೊಸ ಬಾಂಬ್ ಸಿಡಿಸಿದ ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ* ಯಡಿಯೂರಪ್ಪ 6 ದೊಡ್ಡ-ದೊಡ್ಡ ಬ್ಯಾಗ್ ಗಳನ್ನು ಹಿಡಿದುಕೊಂಡು ಹೋಗಿದ್ದಾರೆ ಎಂದ  ಬಿಎಸ್‌ವೈ

ಬೆಂಗಳೂರು, (ಜು.17): ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ದೆಹಲಿ ಪ್ರವಾಸ ರಾಜ್ಯ ರಾಜಕಾರಣದಲ್ಲಿ ಹಲವು ಚರ್ಚೆಗೆ ಗ್ರಾಸವಾಗಿದೆ. 

ನಾಯಕತ್ವ ಬದಲಾವಣೆ ಕೂಗಿನ ಮಧ್ಯೆ ಬಿಎಸ್‌ವೈ ದಿಲ್ಲಿ ಭೇಟಿ ಭಾರೀ ಕುತೂಹಲ ಮೂಡಿಸಿದೆ. ಇದರ ಮಧ್ಯೆ ಸಿಎಂ ರಾಜಧಾನಿ ಭೇಟಿಯ ಬಗ್ಗೆ ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಹೊಸ ಬಾಂಬ್ ಸಿಡಿಸಿದ್ದಾರೆ.

ಮೋದಿ ಭೇಟಿಯಾದ ಯಡಿಯೂರಪ್ಪ: 10 ನಿಮಿಷ ಚರ್ಚೆ

ಇಂದು (ಶನಿವಾರ) ಸುದ್ದಿಗಾರರೊಂದಿಗೆ ಮಾತನಾಡಿದ ಕುಮಾರಸ್ವಾಮಿ, ನಿನ್ನೆ ವಿಶೇಷ ವಿಮಾನದಲ್ಲಿ ಪುತ್ರರೊಂದಿಗೆ ದೆಹಲಿಗೆ ತೆರಳಿದ ಯಡಿಯೂರಪ್ಪ 6 ದೊಡ್ಡ-ದೊಡ್ಡ ಬ್ಯಾಗ್ ಗಳನ್ನು ಹಿಡಿದುಕೊಂಡು ಹೋಗಿದ್ದಾರೆ. ಈ ಬಗ್ಗೆ ನನಗೆ ಮಾಹಿತಿ ಬಂದಿದೆ ಎಂದು ಹೇಳುವ ಮೂಲಕ ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದ್ದಾರೆ.

ರಾಜ್ಯದ ವಿಷಯಗಳನ್ನು 6 ಬ್ಯಾಗ್ ನಲ್ಲಿ ಹಾಕಿದ್ದರೋ, ಅಥವಾ ಅದರಲ್ಲಿ ಬೇರೆ ಏನಿತ್ತು ಎನ್ನುವುದು ಗೊತ್ತಿಲ್ಲ. ನಿನ್ನೆ ಪ್ರಧಾನಿಯವರನ್ನು ಭೇಟಿ ಮಾಡಲು ಹೋದಾಗ 6 ಬ್ಯಾಗ್ ಗಳೂ ಹೋದವೋ ಅಥವಾ ಅವರು ಒಬ್ಬರೇ ಮಾತ್ರ ಹೋಗಿದ್ದಾರೆಯೇ ಎನ್ನುವುದು ಗೊತ್ತಿಲ್ಲ. ಅದರ ಬಗ್ಗೆ ಮುಂದಿನ ದಿನಗಳಲ್ಲಿ ಗೊತ್ತಾಗುತ್ತದೆ ಎಂದರು.