ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರ ನಾಯಕತ್ವ ಬದಲಾವಣೆ ಕೂಗು ಕೇಳಿಬರುತ್ತಿವೆ. ಇದಕ್ಕೆ ಸ್ವತಃ ಇದಕ್ಕೆ ಯಡಿಯೂರಪ್ಪನವರೇ ಪ್ರತಿಕ್ರಿಯೆ ಕೊಟ್ಟಿದ್ದಾರೆ.
ಬೆಂಗಳೂರು, (ಡಿ.31): ಕಳೆದ ಒಂದೂವರೆ ವರ್ಷದ ಆಡಳಿತ ಅವಧಿಯಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಹೊರತುಪಡಿಸಿ ಬೇರೆ ಯಾವುದೇ ಹೇಳಿಕೆಗಳ ಬಗ್ಗೆ ಗಮನಕೊಟ್ಟಿಲ್ಲ. ಆದ್ದರಿಂದ ನನ್ನ ಖುರ್ಚಿಗೆ ಯಾವುದೇ ಆತಂಕವಿಲ್ಲ ಎಂದು ಸಿಎಂ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ.
ಇಂದು (ಗುರುವಾರ) ಸುದ್ದಿಗೋಷ್ಠಿಯಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಉತ್ತರಿಸಿದ ಸಿಎಂ, ನಮ್ಮ ರಾಜ್ಯದ ಉಸ್ತುವಾರಿ ಅರುಣ್‌ಸಿಂಗ್ ಮುಂದಿನ ಎರಡೂವರೆ ವರ್ಷಗಳ ಕಾಲ ಯಡಿಯೂರಪ್ಪ ಅವರೇ ಸಿಎಂ ಆಗಿ ಮುಂದುವರಿಯುತ್ತಾರೆ ಎಂದು ಸ್ಪಷ್ಟಪಡಿಸಿದ್ದಾರೆ. ಪೂರ್ಣಾವಧಿಗೆ ನಾನು ಇದೇ ಕುರ್ಚಿಯಲ್ಲಿ ಇರುತ್ತೇನೆ ಎಂದು ಸ್ಪಷ್ಟಪಡಿಸಿದರು.
ಸಂಚಲನ ಮೂಡಿಸಿದ ರಾಜಕೀಯ: ಕಾಂಗ್ರೆಸ್‌ನ ಇಬ್ಬರು ಹಾಲಿ, ಓರ್ವ ಮಾಜಿ ಶಾಸಕ ಬಿಜೆಪಿ ಸೇರ್ಪಡೆ
ಒಂದಿಬ್ಬರು ಅಸಮಾಧಾನ ಹೊರ ಹಾಕಿರಬಹುದು. ಅವರನ್ನು ಕರೆಸಿ ಮಾತನ್ನಾಡುತ್ತೇನೆ. ಅದಕ್ಕಾಗಿಯೇ ಜನವರಿ 4 ಮತ್ತು 5 ರಂದು ವಿಭಾಗವಾರು ಸಭೆ ಕರೆದಿದ್ದೇನೆ. ಅವರ ಸಮಸ್ಯೆಗಳನ್ನು ಕೇಳಿ ಬಗೆಹರಿಸುತ್ತೇನೆ ಎಂದು ಹೇಳಿದರು.
Read Exclusive COVID-19 Coronavirus News updates, from Karnataka, India and World at Asianet News Kannada.
ವರ್ಚುಯಲ್ ಬೋಟ್ ರೇಸಿಂಗ್ ಗೇಮ್ ಆಡಿ ಮತ್ತು ನಿಮಗೆ ನೀವೇ ಸವಾಲು ಹಾಕಿಕೊಳ್ಳಿ ಈಗಲೇ ಆಡಲು ಕ್ಲಿಕ್ಕಿಸಿ
Last Updated Dec 31, 2020, 2:37 PM IST