ಯೋಗೇಶ್ವರ್ ನನ್ನ ಸಂಪರ್ಕದಲ್ಲಿಲ್ಲ, ಬೇರೆ ಪಕ್ಷದವರನ್ನು ಸಂಪರ್ಕಿಸುವ ಅವಶ್ಯಕತೆ ನಮಗಿಲ್ಲ: ಎಚ್‌ಡಿಕೆಗೆ ಡಿಕೆಶಿ ತಿರುಗೇಟು
ಚನ್ನಪಟ್ಟಣದಲ್ಲಿ ಕಾಂಗ್ರೆಸ್‌ನಿಂದ ಡಿ.ಕೆ.ಸುರೇಶ್ ಸ್ಪರ್ಧೆಗೆ ಶೇ.80ರಷ್ಟು ಕಾರ್ಯಕರ್ತರು ಒತ್ತಾಯಿಸುತ್ತಿದ್ದಾರೆ. ಆದರೆ, ಹೈಕಮಾಂಡ್ ಯಾರನ್ನು ಕಣಕ್ಕಿಳಿಸುತ್ತದೆಯೋ ಅವರ ಪರವಾಗಿ ಎಲ್ಲರೂ ಕೆಲಸ ಮಾಡು ವಂತೆ ತಿಳಿಸಿದ್ದೇನೆ. ಅಲ್ಲದೆ, ಡಿ.ಕೆ. ಸುರೇಶ್ ಸೇರಿದಂತೆ ನಾವೆಲ್ಲ ಲೋಕಸಭಾ ಚುನಾವಣೆ ಸೋಲಿನ ಆಘಾತದಿಂದ ಹೊರಬಂದಿಲ್ಲ. ಹಾಗೆಂದು ನಾವು ಜನ ಸೇವೆಯನ್ನು ಬಿಡುವುದಿಲ್ಲ: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
ಬೆಂಗಳೂರು(ಅ.22): ಬಿಜೆಪಿಯ ಸಿ.ಪಿ. ಯೋಗೇಶ್ವರ್ ಕಾಂಗ್ರೆಸ್ ನಾಯಕರ ಸಂಪರ್ಕದಲ್ಲಿದ್ದಾರೆ ಎಂಬ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯಿಸಿರುವ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, 'ನಾನು ಯೋಗೇಶ್ವರ್ ಅವರನ್ನು ಭೇಟಿ ಮಾಡಿಲ್ಲ ಮತ್ತು ಮಾತನ್ನೂ ಆಡಿಲ್ಲ ಎಂದು ತಿಳಿಸಿದರು.
ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 'ಸ್ವಾತಂತ್ರ್ಯ ದಿನದ ಕಾರ್ಯಕ್ರಮದಲ್ಲಿ ಯೋಗೇಶ್ವರ್ ಅವರನ್ನು ಭೇಟಿಯಾಗಿದ್ದೆ. ಅದನ್ನು ಹೊರತುಪಡಿಸಿ ಯಾವುದೇ ಭೇಟಿ, ಚರ್ಚೆ ನಡೆದಿಲ್ಲ. ಬೇರೆ ಪಕ್ಷದವರನ್ನು ಸಂಪರ್ಕಿಸುವ ಅವಶ್ಯಕತೆ ನಮಗಿಲ್ಲ' ಎಂದು ತಿರುಗೇಟು ನೀಡಿದರು.
ಬಿಜೆಪಿ ಸ್ವಾರ್ಥ ರಾಜಕಾರಣಕ್ಕೆ ಧರ್ಮವನ್ನು ಬಳಸುತ್ತಿದೆ: ಡಿ. ಕೆ.ಶಿವಕುಮಾರ್
ಡಿಕೆಸು ಸ್ಪರ್ಧೆಗೆ ಒತ್ತಡ ಇದೆ:
ಚನ್ನಪಟ್ಟಣದಲ್ಲಿ ಕಾಂಗ್ರೆಸ್‌ನಿಂದ ಡಿ.ಕೆ.ಸುರೇಶ್ ಸ್ಪರ್ಧೆಗೆ ಶೇ.80ರಷ್ಟು ಕಾರ್ಯಕರ್ತರು ಒತ್ತಾಯಿಸುತ್ತಿದ್ದಾರೆ. ಆದರೆ, ಹೈಕಮಾಂಡ್ ಯಾರನ್ನು ಕಣಕ್ಕಿಳಿಸುತ್ತದೆಯೋ ಅವರ ಪರವಾಗಿ ಎಲ್ಲರೂ ಕೆಲಸ ಮಾಡು ವಂತೆ ತಿಳಿಸಿದ್ದೇನೆ. ಅಲ್ಲದೆ, ಡಿ.ಕೆ. ಸುರೇಶ್ ಸೇರಿದಂತೆ ನಾವೆಲ್ಲ ಲೋಕಸಭಾ ಚುನಾವಣೆ ಸೋಲಿನ ಆಘಾತದಿಂದ ಹೊರಬಂದಿಲ್ಲ. ಹಾಗೆಂದು ನಾವು ಜನ ಸೇವೆಯನ್ನು ಬಿಡುವುದಿಲ್ಲ ಎಂದು ಹೇಳಿದರು.
ಉಪಚುನಾವಣೆ ನಡೆಯುವ ಎಲ್ಲ 3 ಕ್ಷೇತ್ರಗಳ ಅಭ್ಯರ್ಥಿ ಆಯ್ಕೆಗೆ ಸಂಬಂಧಿಸಿದಂತೆ ಈಗಾಗಲೇ ಸಚಿವರುಗಳೊಂದಿಗೆ ಚರ್ಚೆ ಮಾಡಿ ಅಭಿಪ್ರಾಯ ಪಡೆದಿದ್ದೇವೆ. ಪಕ್ಷದ ಅಭ್ಯರ್ಥಿಗಳ ಕುರಿತಂತೆ ತೀರ್ಮಾನ ಆಗಿದೆ. ಆ ಬಗ್ಗೆ ದೆಹಲಿ ನಾಯಕರಿಗೆ ಪ್ರಸ್ತಾವನೆ ಸಲ್ಲಿಸುತ್ತೇವೆ. ಅವರು ಅಂತಿಮವಾಗಿ ತೀರ್ಮಾನ ಮಾಡುತ್ತಾರೆ ಎಂದರು. ಜೆಡಿಎಸ್‌ಗಿಂತ ಎಚ್‌ಡಿಕೆ ದುರ್ಬಲ: ಡಿಕೆಶಿ ವ್ಯಂಗ್ಯ ಚನ್ನಪಟ್ಟಣದಲ್ಲಿ ಜೆಡಿಎಸ್ ಪಕ್ಷ ದುರ್ಬಲವಾಗಿಲ್ಲ. ಆದರೆ, ಪಕ್ಷದ ನಾಯಕ ಕುಮಾರಸ್ವಾಮಿ ದುರ್ಬಲರಾಗಿದ್ದು, ಯವರ ಕೈ ಕಾಲು ಹಿಡಿದು ಜೆಡಿಎಸ್ ಪಕ್ಷದಿಂದ ಸ್ಪರ್ಧಿಸುವಂತೆ ಕೇಳಿಕೊಳ್ಳುತ್ತಿದ್ದಾರೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ವ್ಯಂಗ್ಯವಾಡಿದ್ದಾರೆ.
ಸುದ್ದಿಗಾರರ ಜೊತೆ ಮಾತನಾಡಿದ ಅವರು, 'ಚನ್ನಪಟ್ಟಣದಲ್ಲಿ ಜೆಡಿಎಸ್ ದುರ್ಬಲ ಎಂದು ನಾನು ಭಾವಿಸುವುದಿಲ್ಲ. ಹಾಗೆ ಭಾವಿಸಿದರೆ ನನ್ನಂತಹ ಮೂರ್ಖ ಮತ್ಯಾರೂ ಇಲ್ಲ. ಆದರೆ, ಆ ಪಕ್ಷದ ನಾಯಕ ದುರ್ಬಲರಾಗಿ ದ್ದಾರೆ. ಕೇಂದ್ರ ಸಚಿವರಾಗಿ ಬಿಜೆಪಿಯವರ ಕೈ ಕಾಲು ಹಿಡಿದು ತಮ್ಮ ಪಕ್ಷದಿಂದ ಸ್ಪರ್ಧಿಸುವಂತೆ ಕೇಳುತ್ತಿದ್ದಾರೆ. ತೆ ಕೇಳುತ್ತಿದ್ದಾರೆ. ಕ್ಷೇತ್ರವನ್ನು ಬಿಜೆಪಿಗೆ ಬಿಟ್ಟುಕೊಡುವ ಬಗ್ಗೆಯೂ ವದಂತಿಗಳಿದೆ' ಎಂದರು.