ನಾವು ಕೊಡುವ ಹಣದಲ್ಲಿ ಧಾನ್ಯ ಖರೀದಿಸಬಹುದು: ಸಚಿವ ಶಿವಾನಂದ ಪಾಟೀಲ

ನಾವು ಕೊಡುವ ಹಣದಲ್ಲಿ ಮಾರುಕಟ್ಟೆಯಲ್ಲಿ ಅಕ್ಕಿ ಖರೀದಿಸಬೇಕಂತಿಲ್ಲ. ದವಸ ಧಾನ್ಯಗಳನ್ನು ಖರೀದಿಸಬಹುದು ಎಂದು ಉಸ್ತುವಾರಿ ಸಚಿವ ಶಿವಾನಂದ ಪಾಟೀಲ ಹೇಳಿದರು. ನಗರದಲ್ಲಿ ಶನಿವಾರ ಡಾ.ಮಹದೇವ ಬಣಕಾರ ಸಾಂಸ್ಕೃತಿಕ ಭವನದ ನೂತನ ಕಟ್ಟಡದ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು.

You can buy rice with the money we give says minister Sivananda Patil at haveri rav

ಹಾವೇರಿ (ಜು.2):  ನಾವು ಕೊಡುವ ಹಣದಲ್ಲಿ ಮಾರುಕಟ್ಟೆಯಲ್ಲಿ ಅಕ್ಕಿ ಖರೀದಿಸಬೇಕಂತಿಲ್ಲ. ದವಸ ಧಾನ್ಯಗಳನ್ನು ಖರೀದಿಸಬಹುದು ಎಂದು ಉಸ್ತುವಾರಿ ಸಚಿವ ಶಿವಾನಂದ ಪಾಟೀಲ ಹೇಳಿದರು.

ನಗರದಲ್ಲಿ ಶನಿವಾರ ಡಾ.ಮಹದೇವ ಬಣಕಾರ ಸಾಂಸ್ಕೃತಿಕ ಭವನದ ನೂತನ ಕಟ್ಟಡದ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು.

ನಮ್ಮ ಸರ್ಕಾರ ಅಕ್ಕಿ ಕೊಡುವ ಪ್ರಯತ್ನ ಮಾಡುತ್ತಿದೆ. ಸದ್ಯದ ಪರಿಸ್ಥಿತಿಯಲ್ಲಿ ಕೇಂದ್ರ ಸರ್ಕಾರ ಅಕ್ಕಿ ಕೊಡುತ್ತಿಲ್ಲ. ನಾವೇ ಅಕ್ಕಿ ಸಂಗ್ರಹಿಸಿಕೊಂಡು ಕೊಡುವ ಪ್ರಯತ್ನ ಮಾಡುತ್ತಿದ್ದೇವೆ. ಗೃಹಲಕ್ಷ್ಮೇ ಯೋಜನೆಯ ಪ್ರಕ್ರಿಯೆ ಆಗಸ್ಟ್‌ ಒಳಗಾಗಿ ಎಲ್ಲ ಮುಗಿಯುತ್ತದೆ ಎಂದು ಹೇಳಿದರು.

ಅಭಿವೃದ್ಧಿ ಕಾಮಗಾರಿಗಳಿಗೂ ಸರ್ಕಾರ ಹಣ ಬಿಡುಗಡೆ ಮಾಡುತ್ತಿದೆ. ಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕೆ ಮಾತ್ರ ಸೀಮಿತವಾಗಿಲ್ಲ ಎಂದು ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದರು.

ವೈದ್ಯಕೀಯ ವಿದ್ಯಾರ್ಥಿಗಳಿಗೆ ಸೌಲಭ್ಯ ಕಲ್ಪಿಸಲು ತಾಕೀತು

ನೂತನವಾಗಿ ನಿರ್ಮಾಣ ಮಾಡುತ್ತಿರುವ ಮೆಡಿಕಲ್‌ ಕಾಲೇಜಿನಲ್ಲಿ ಪ್ರಥಮ ಹಾಗೂ ಎರಡನೇ ವರ್ಷದ ವೈದ್ಯಕೀಯ ವಿದ್ಯಾರ್ಥಿಗಳಿಗೆ ಅಗತ್ಯವಾದ ತರಗತಿಯ ಕೊಠಡಿ, ಪ್ರಯೋಗಾಲಯ, ವಿದ್ಯಾರ್ಥಿನಿಲಯ, ಅಧ್ಯಾಪಕರ ನೇಮಕಾತಿಗೆ ಆದ್ಯತೆ ನೀಡುವಂತೆ ವೈದ್ಯಕೀಯ ಕಾಲೇಜು ಡೀನ್‌ ಹಾಗೂ ಕಟ್ಟಡ ನಿರ್ಮಾಣದ ಹೊಣೆ ಹೊತ್ತಿರುವ ಎಂಜಿನಿಯರಗಳಿಗೆ ಸಚಿವ ಶಿವಾನಂದ ಪಾಟೀಲ್‌ ತಾಕೀತು ಮಾಡಿದರು.

ಕೆಡಿಪಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಈಗಾಗಲೇ ಮೊದಲ ವರ್ಷ ಪ್ರವೇಶ ಪಡೆದ ವಿದ್ಯಾರ್ಥಿಗಳು ಎರಡನೇ ವರ್ಷಕ್ಕೆ ಕಾಲಿಡುತ್ತಿದ್ದಾರೆ, ಮತ್ತೇ ಮೊದಲ ವರ್ಷದ ಪ್ರವೇಶ ಪಡೆದ ವಿದ್ಯಾರ್ಥಿಗಳು ಇನ್ನೆರಡು ತಿಂಗಳಲ್ಲಿ ಕಾಲೇಜಿಗೆ ಆಗಮಿಸುತ್ತಿದ್ದಾರೆ. ಕಟ್ಟಡಕ್ಕೆ ಈಗಾಗಲೇ ರು.264 ಕೋಟಿ ವ್ಯಯಿಸಲಾಗಿದೆ ಎಂದು ಮಾಹಿತಿ ನೀಡಿದ್ದೀರಿ. ಅಲಂಕಾರಕ್ಕೆ ಆದ್ಯತೆ ನೀಡಿದೇ 300 ವೈದ್ಯಕೀಯ ವಿದ್ಯಾರ್ಥಿಗಳ ವಾಸ್ತವ್ಯಕ್ಕೆ ವಸತಿ, ತರಗತಿ ನಡೆಸಲು ಕೊಠಡಿಗಳನ್ನು ಆದ್ಯತೆ ಮೇರೆಗೆ ಪೂರ್ಣಗೊಳಿಸಿ ಬಳಕೆಗೆ ಅವಕಾಶ ಮಾಡಿಕೊಡಲು ಸೂಚನೆ ನೀಡಿದರು.

ವೈದ್ಯಕೀಯ ಕಾಲೇಜು ವತಿಯಿಂದ ಜಿಲ್ಲಾ ಆಸ್ಪತ್ರೆಯಲ್ಲಿ ಎಂ.ಆರ್‌.ಐ. ಸ್ಕ್ಯಾ‌ನಿಂಗ್‌ ಯಂತ್ರವನ್ನು ಖರೀದಿಮಾಡಬೇಕು. ವೈದ್ಯಕೀಯ ಕಾಲೇಜು ವ್ಯವಸ್ಥಿತವಾಗಿ ನಿರ್ವಹಣೆಗೆ ಜಿಲ್ಲಾ ಆಸ್ಪತ್ರೆಯ ಶಸ್ತ್ರ ಚಿಕಿತ್ಸಕರು ಹಾಗೂ ವೈದ್ಯಕೀಯ ಡೀನ್‌ ಅಹಂಮಿಕೆ ಬಿಟ್ಟು ಸಮನ್ವಯದಿಂದ ಕಾರ್ಯನಿರ್ವಹಿಸಲು ತಾಕೀತು ಮಾಡಿದರು.

ಹಾವೇರಿ: ಜಿಡ್ಡುಗಟ್ಟಿದ ಆಡಳಿತಕ್ಕೆ ಚುರುಕು ಮುಟ್ಟಿಸುವರೇ ಸಚಿವ ಪಾಟೀಲ್?

ಕೋವಿಡ್‌ ಸಂದರ್ಭದಲ್ಲಿ ಐಸಿಯು ವಾರ್ಡ್‌, ಆಕ್ಸಿಜನ್‌ ಸಹಿತ ಬೆಡ್‌ಗಳು, ಆಕ್ಸಿಜನ್‌ ಪ್ಲಾಂಟ್‌ಗಳ ಬಳಕೆ ಪ್ರಮಾಣ ಹಾಗೂ 108 ಆ್ಯಂಬುಲೆನ್ಸ್‌ ವಾಹನಗಳಲ್ಲಿ ಕರೆತರುವ ರೋಗಿಗಳ ಪೈಕಿ ಖಾಸಗಿ ಆಸ್ಪತ್ರೆಗೆ ದಾಖಲಾದವರು ಹಾಗೂ ಸರ್ಕಾರಿ ಆಸ್ಪತ್ರೆಗೆ ದಾಖಲಾದವರ ವಸ್ತುಸ್ಥಿತಿಯ ವರದಿಯನ್ನು ಸಲ್ಲಿಸುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಿಗೆ ಸೂಚನೆ ನೀಡಿದರು.

Latest Videos
Follow Us:
Download App:
  • android
  • ios