Asianet Suvarna News Asianet Suvarna News

ಸೋತ 100 ಕ್ಷೇತ್ರಗಳಲ್ಲಿ ಆರ್‌ಎಸ್‌ಎಸ್‌ ರೀತಿ ಯುವ ಕಾಂಗ್ರೆಸ್‌ ಪ್ರಚಾರ

ಜನರಲ್ಲಿ ಹಿಂದಿನ ಸರ್ಕಾರದ ಯೋಜನೆಗಳ ಬಗ್ಗೆ ಪುನರ್‌ಮನನ ಮಾಡಿಕೊಡುವುದು, ಗ್ಯಾರಂಟಿ ಯೋಜನೆಗಳ ಬಗ್ಗೆ ಜಾಗೃತಿ ಮೂಡಿಸುವುದು, ಪ್ರಸ್ತುತ ಸರ್ಕಾರದ ದುರಾಡಳಿತ ಹಾಗೂ ಭ್ರಷ್ಟಾಚಾರದ ಮೂಲಕ ಬಿಜೆಪಿ ವಿರುದ್ಧ ಜನಾಭಿಪ್ರಾಯ ಮೂಡಿಸುವ ಜವಾಬ್ದಾರಿ. 

Youth Congress Campaign Like the RSS in 100 Lost Constituencies in Karnataka grg
Author
First Published Mar 16, 2023, 11:06 AM IST | Last Updated Mar 16, 2023, 11:06 AM IST

ಬೆಂಗಳೂರು(ಮಾ.16):  ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಯುವ ಕಾಂಗ್ರೆಸ್‌ಗೆ ಹೈಕಮಾಂಡ್‌ ಹೊಸ ಟಾಸ್ಕ್‌ ನೀಡಿದೆ. ಬೆನ್ನಲ್ಲೇ 2018ರಲ್ಲಿ ಸೋತ 100 ಕ್ಷೇತ್ರಗಳಲ್ಲಿ ಬೀಡುಬಿಟ್ಟಿರುವ ಯುವ ಕಾಂಗ್ರೆಸ್‌ ಕಾರ್ಯಕರ್ತರು ಆರ್‌ಎಸ್‌ಎಸ್‌ ಮಾದರಿ ಪ್ರಚಾರದಲ್ಲಿ ತೊಡಗಿಸಿಕೊಂಡಿದ್ದಾರೆ.

ಯುವ ಕಾಂಗ್ರೆಸ್‌ ರಾಷ್ಟ್ರೀಯ ಅಧ್ಯಕ್ಷ ಬಿ.ವಿ.ಶ್ರೀನಿವಾಸ್‌ ಅವರಿಗೆ ಸೋತ ಕ್ಷೇತ್ರಗಳಲ್ಲಿ ಪಕ್ಷದ ಪರ ತಳಮಟ್ಟದಲ್ಲಿ ಪ್ರಚಾರ ಮಾಡಲು ಹೈಕಮಾಂಡ್‌ ಟಾಸ್ಕ್‌ ನೀಡಿದೆ. ಈ ಹಿನ್ನೆಲೆಯಲ್ಲಿ ಈಗಾಗಲೇ ದೇಶದ ಎಲ್ಲೆಡೆಯಿಂದ ರಾಜ್ಯಕ್ಕೆ ಆಗಮಿಸಿರುವ ಸುಮಾರು 250 ಮಂದಿ ಕಾರ್ಯಕರ್ತರು ಕ್ಷೇತ್ರಗಳಿಗೆ ತೆರಳಿ ಪ್ರಚಾರ ಕಾರ್ಯದಲ್ಲಿ ತೊಡಗಿಕೊಂಡಿದ್ದಾರೆ.

ಉತ್ತರ ಕನ್ನಡ: ಹಳಿಯಾಳ ಅಖಾಡದಲ್ಲಿ ಯಾರಾಗಲಿದ್ದಾರೆ ಪೈಲ್ವಾನ್‌?

ಒಟ್ಟು 100 ಕ್ಷೇತ್ರಗಳಲ್ಲಿ ಪ್ರಚಾರದ ಹೊಣೆ ಹೊತ್ತಿರುವ ಯುವ ಕಾಂಗ್ರೆಸ್‌ ಕಾರ್ಯಕರ್ತರು ಆರ್‌ಎಸ್‌ಎಸ್‌ ಮಾದರಿಯಲ್ಲಿ ಅಬ್ಬರವಿಲ್ಲದ ಗೌಪ್ಯ ಪ್ರಚಾರಕ್ಕೆ ಚಾಲನೆ ನೀಡಿದ್ದಾರೆ. ಜನರಲ್ಲಿ ಹಿಂದಿನ ಸರ್ಕಾರದ ಯೋಜನೆಗಳ ಬಗ್ಗೆ ಪುನರ್‌ಮನನ ಮಾಡಿಕೊಡುವುದು, ಗ್ಯಾರಂಟಿ ಯೋಜನೆಗಳ ಬಗ್ಗೆ ಜಾಗೃತಿ ಮೂಡಿಸುವುದು, ಪ್ರಸ್ತುತ ಸರ್ಕಾರದ ದುರಾಡಳಿತ ಹಾಗೂ ಭ್ರಷ್ಟಾಚಾರದ ಮೂಲಕ ಬಿಜೆಪಿ ವಿರುದ್ಧ ಜನಾಭಿಪ್ರಾಯ ಮೂಡಿಸುವ ಜವಾಬ್ದಾರಿಯನ್ನು ವಹಿಸಲಾಗಿದೆ. ಅಲ್ಲದೆ, ಈ ಯುವ ಪಡೆ ಪ್ರತಿ ಕ್ಷೇತ್ರದಲ್ಲೂ ಬೂತ್‌ ಮಟ್ಟದಲ್ಲಿ ಕಾರ್ಯನಿರ್ವಹಿಸಲಿದೆ. ವಾಟ್ಸಾಪ್‌ ಗ್ರೂಪ್‌ಗಳ ನಿರ್ವಹಣೆಯನ್ನು ನೋಡಿಕೊಳ್ಳಲಿದೆ ಎಂದು ಮೂಲಗಳು ತಿಳಿಸಿವೆ.

Latest Videos
Follow Us:
Download App:
  • android
  • ios