ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿರುವುದು ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಮೂಡಿಸಿದೆ. ಹಲವು ದಶಕಗಳ ಕಾಲ ಜೆಡಿಎಸ್‌ನಲ್ಲಿದ್ದ ದತ್ತ ಅವರು ಇತ್ತೀಚೆಗೆ ಕಾಂಗ್ರೆಸ್‌ಗೆ ಸೇರ್ಪಡೆಯಾಗಿದ್ದರು. ಕಡೂರು ಕ್ಷೇತ್ರದಿಂದ ಟಿಕೆಟ್ ಸಿಗುವ ಭರವಸೆಯಲ್ಲಿದ್ದರು. ಆದರೆ, ಕಾಂಗ್ರೆಸ್‌ನಲ್ಲಿ ಆನಂದ್ ಎಂಬುವವರಿಗೆ ನೀಡಿದ್ದರಿಂದ ಬೇಸರಗೊಂಡಿದ್ದ ದತ್ತ.
ಬೆಂಗಳೂರು(ಏ.13): ಕಡೂರು ಕ್ಷೇತ್ರದಿಂದ ಟಿಕೆಟ್ ಸಿಗುವ ಭರವಸೆಯಲ್ಲಿ ಕಾಂಗ್ರೆಸ್‌ಗೆ ಸೇರ್ಪಡೆಯಾಗಿದ್ದ ವೈ.ಎಸ್.ವಿ.ದತ್ತ ಅವರು ಮತ್ತೆ ಜೆಡಿಎಸ್‌ಗೆ ಬರುವ ಪ್ರಯತ್ನ ನಡೆಸಿದ್ದಾರೆಯೇ ಎಂಬ ಅನುಮಾನಗಳು ಮೂಡಿದೆ.
ಇದಕ್ಕೆ ಪೂರಕವೆಂಬಂತೆ ಬುಧವಾರ ಪದ್ಮನಾಭನಗರ ನಿವಾಸಕ್ಕೆ ಆಗಮಿಸಿ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿರುವುದು ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಮೂಡಿಸಿದೆ. ಹಲವು ದಶಕಗಳ ಕಾಲ ಜೆಡಿಎಸ್‌ನಲ್ಲಿದ್ದ ದತ್ತ ಅವರು ಇತ್ತೀಚೆಗೆ ಕಾಂಗ್ರೆಸ್‌ಗೆ ಸೇರ್ಪಡೆಯಾಗಿದ್ದರು. ಕಡೂರು ಕ್ಷೇತ್ರದಿಂದ ಟಿಕೆಟ್ ಸಿಗುವ ಭರವಸೆಯಲ್ಲಿದ್ದರು. ಆದರೆ, ಕಾಂಗ್ರೆಸ್‌ನಲ್ಲಿ ಆನಂದ್ ಎಂಬುವವರಿಗೆ ನೀಡಿದ್ದರಿಂದ ಬೇಸರಗೊಂಡಿದ್ದರು.
ನನಗೆ ಜಾತಿ, ಹಣ ಬಲ ಎರಡೂ ಇಲ್ಲ: ವೈ.ಎಸ್.ವಿ.ದತ್ತ
ಅಲ್ಲದೇ, ಇತ್ತೀಚೆಗೆ ಬೆಂಬಲಿಗರ ಸಭೆ ಕರೆ ಸಮಾಲೋಚನೆ ನಡೆಸಿದ್ದರು. ಮತ್ತೆ ಜೆಡಿಎಸ್‌ಗೆ ಮರಳುವ ಪ್ರಯತ್ನ ಮಾಡಿದ್ದಾರೆ ಎನ್ನಲಾಗಿದೆ. ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಪಕ್ಷ ಬಿಟ್ಟಹೋದವರನ್ನು ಮತ್ತೆ ಸೇರಿಸಿಕೊಳ್ಳುವ ಪ್ರಶ್ನೆಯೇ ಇಲ್ಲ ಎಂದು ಹೇಳಿಕೆ ನೀಡಿದ್ದರು. ಕುಮಾರಸ್ವಾಮಿ ಹೇಳಿಕೆ ಹಿನ್ನೆಲೆಯಲ್ಲಿ ದತ್ತ ಅವರು ದೇವೇಗೌಡ ಮೊರೆಹೋಗಿದ್ದಾರೆ. ದೇವೇಗೌಡರ ಮನವೊಲಿಕೆ ಮಾಡಿ ಜೆಡಿಎಸ್‌ಗೆ ಬರುವ ಪ್ರಯತ್ನ ಮಾಡಿದ್ದಾರೆ ಎನ್ನಲಾಗಿದೆ.
ಕರ್ನಾಟಕದಲ್ಲಿ ಒಂದೇ ಹಂತದಲ್ಲಿ ಮೇ 10ರಂದು ಮತದಾನ ನಡೆಯಲಿದ್ದು, ಮೇ 13ಕ್ಕೆ ಮತ ಎಣಿಕೆ ನಡೆಯಲಿದೆ. ಏಪ್ರಿಲ್ 13ಕ್ಕೆ ಚುನಾವಣೆ ಅಧಿಸೂಚನೆ ಹೊರಡಿಸಲಿದ್ದು, ಏಪ್ರಿಲ್ 13ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ. ನಾಮಪತ್ರ ಹಿಂಪಡೆಯಲು ಏಪ್ರಿಲ್ 24 ಕಡೆಯ ದಿನಾಂಕ.
