* ಮಾಜಿ ಸಚಿವ ಜಮೀರ್‌ ಅಹಮ್ಮದ್ ಪ್ಲಾನ್ ಸಕ್ಸಸ್* ದಳಪತಿಗಳಿಗೆ ಬಿಗ್ ಶಾಕ್ ಕೊಟ್ಟ ಜಮೀರ್ ಅಹ್ಮದ್ ಖಾನ್* ಕೊಪ್ಪಳದಲ್ಲಿ ಜೆಡಿಎಸ್ ಪ್ರಭಾವಿ ಮುಖಂಡ ಕಾಂಗ್ರೆಸ್ ಸೇರ್ಪಡೆ

ಕೊಪ್ಪಳ, (ಜೂನ್.22): ಮಾಜಿ ಸಿಎಂ ಸಿದ್ದರಾಮಯ್ಯನವರ ಜೊತೆ ಕೊಪ್ಪಳ ಪ್ರವಾಸದಲ್ಲಿದ್ದ ಶಾಸಕ ಜಮೀರ್ ಅಹಮ್ಮದ್ ಖಾನ್ ಅವರು ದಳಪತಿಗಳಿಗೆ ಬಿಗ್ ಶಾಕ್ ಕೊಟ್ಟಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಹೌದು...ಜಿಲ್ಲೆಯಲ್ಲಿ ಸಕ್ರಿಯರಾಗಿದ್ದ ಜೆಡಿಎಸ್ ಪಕ್ಷದ ಮುಖಂಡ ಕೆ.ಎಂ.ಸೈಯದ್ ಅವರನ್ನ ಕಾಂಗ್ರೆಸ್​ಗೆ ಸೆಳೆಯುವಲ್ಲಿ ಯಶಸ್ವಿಯಾಗಿದ್ದಾರೆ.

ಬಿಜೆಪಿ ಅಯ್ತು ಈಗ ಕಾಂಗ್ರೆಸ್‌ ಸರದಿ: 'ಕೈ' ಪಾಳಯದಲ್ಲಿ ‘ಸಿದ್ದು ಮುಂದಿನ ಸಿಎಂ’ ವಿವಾದ..! 

ಮಾಜಿ ಸಚಿವ ಜಮೀರ್‌ ಅಹಮ್ಮದ್ ಮೂಲಕ ಶಾಸಕ‌ ರಾಘವೇಂದ್ರ ಹಿಟ್ನಾಳ್ ನೇತೃತ್ವದಲ್ಲಿ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಮುಂಬರುವ ಚುನಾವಣೆಗೆ ಗ್ರೌಂಡ್ ವರ್ಕ್ ಮಾಡಲು ಸೈಯದ್​​ರನ್ನ ಹಿಟ್ನಾಳ್ ಪಕ್ಷಕ್ಕೆ ಬರಮಾಡಿಕೊಂಡಿರು.

 ಸ್ಥಳೀಯವಾಗಿ ಜೆಡಿಎಸ್​ನಲ್ಲಿ ಕೆ.ಎಂ.ಸೈಯದ್ ನಿರ್ಲಕ್ಷ್ಯಕ್ಕೊಳಪಟ್ಟಿದ್ದರು. ಹಾಗಾಗಿ ಜೆಡಿಎಸ್ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ ಎನ್ನಲಾಗಿದೆ. 

2018ರ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿ ಕೊಪ್ಪಳ ಕ್ಷೇತ್ರದಿಂದ ಸೈಯದ್ ಸ್ಪರ್ಧಿಸಿದ್ದರು. ಇದೀಗ ಸೈಯದ್ ಕಾಂಗ್ರೆಸ್ ಪಾಲಾಗಿರುವುದು ಹಾಲಿ ಶಾಸಕ ರಾಘವೇಂದ್ರ ಹಿಟ್ನಾಳ್‌ಗೆ ಮತ್ತಷ್ಟು ಬಲಬಂದಂತಾಗಿದೆ.