ಕಾಂಗ್ರೆಸ್‌ ಆಡಳಿತದಲ್ಲಿ ರಾಜ್ಯದ ಅಭಿವೃದ್ಧಿ ಶೂನ್ಯ: ಮಾಜಿ ಸಚಿವ ಡಾ.ಕೆ.ಸುಧಾಕರ್

ರಾಜ್ಯದಲ್ಲಿ ಒಂದು ಕಡೆ ಬರ ಆವರಿಸಿದೆ ಇನ್ನೊಂದು ಕಡೆ ಬೆಲೆ ಏರಿಕೆ ಮತ್ತೊಂದು ಕಡೆ ಅಭಿವೃದ್ದಿ ಶೂನ್ಯ ಎಂದು ಮಾಜಿ ಸಚಿವ ಡಾ.ಕೆ.ಸುಧಾಕರ್ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್ ಸರ್ಕಾರದ ಆಡಳಿತ ಕಾರ್ಯವೈಗರಿ ಬಗ್ಗೆ ವ್ಯಂಗ್ಯವಾಡಿದರು. 
 

Zero development of the state under Congress rule Says Dr K Sudhakar gvd

ಬಾಗೇಪಲ್ಲಿ (ಮಾ.13): ರಾಜ್ಯದಲ್ಲಿ ಒಂದು ಕಡೆ ಬರ ಆವರಿಸಿದೆ ಇನ್ನೊಂದು ಕಡೆ ಬೆಲೆ ಏರಿಕೆ ಮತ್ತೊಂದು ಕಡೆ ಅಭಿವೃದ್ದಿ ಶೂನ್ಯ ಎಂದು ಮಾಜಿ ಸಚಿವ ಡಾ.ಕೆ.ಸುಧಾಕರ್ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್ ಸರ್ಕಾರದ ಆಡಳಿತ ಕಾರ್ಯವೈಗರಿ ಬಗ್ಗೆ ವ್ಯಂಗ್ಯವಾಡಿದರು. ತಾಲೂಕಿನ ದೇವರಗುಡಿಪಲ್ಲಿ(ಗಡದಿಂ) ಗ್ರಾಮದ ವೇದಮಾತೆ ಗಾಯತ್ರಿ ಮಂದಿರದ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಬಿಜೆಪಿ ಪಕ್ಷದ ಮುಖಂಡರ ಹಾಗೂ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯನ್ನಾಗಿ ತಮ್ಮನ್ನು ಘೋಷಿಸುವ ಸಾಧ್ಯತೆ ಇರುವುದರಿಂದ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ನನ್ನನ್ನು ಬೆಂಬಲಿಸುವಂತೆ ಮನವಿ ಮಾಡಿದರು.

ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ರಾಜ್ಯದಲ್ಲಿ ಬರದಿಂದ ಕುಡಿಯುವ ನೀರಿಗಾಗಿ ಜನರು ಪರದಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ ಅಲ್ಲದೆ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದಾಗಿ ಜನರು ಪರದಾಡುವಂತಾಗಿದೆ. ಗ್ಯಾರಂಟಿ ಯೋಜನೆಗಳಿಂದ ರಾಜ್ಯದಲ್ಲಿ ಅಭಿವೃದ್ದಿ ಎಂಬುದು ಮರೀಚಿಕೆಯಾಗಿದ್ದು ರಾಜ್ಯದಲ್ಲಿ ಆಡಳಿತ ಸಂಪೂರ್ಣವಾಗಿ ವಿಫಲವಾಗಿದೆ ಎಂದರು. ರಾಜ್ಯದಲ್ಲಿ ಈ ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಸರ್ಕಾರದ ಪ್ರತಿಯೊಂದು ಜನಪರ ಯೋಜನೆಗಳನ್ನು ರಾಜ್ಯದ ಜನತೆಗೆ ತಲುಪಿಸಿದ್ದೇವೆ, ನಾನು ಚಿಕ್ಕಬಳ್ಳಾಪುರ ಜಿಲ್ಲೆಯನ್ನು ಶೈಕ್ಷಣಿಕವಾಗಿ ಅಭಿವೃದ್ದಿಪಡಿಸುವ ನಿಟ್ಟಿನಲ್ಲಿ ವೈದ್ಯಕೀಯ ಕಾಲೇಜು ಮಾಡಿಸಿದ್ದೇನೆ, ಕೊರೋನಾ ಸಮಯದಲ್ಲಿ ಆರೋಗ್ಯ ಸಚಿವನಾಗಿ ಜನರ ಆರೋಗ್ಯದ ಹಿತದೃಷ್ಠಿಯಿಂದ ಕೊರೋನಾ ಸೊಂಕು ಮುಕ್ತಗೊಳಿಸುವ ಮೂಲಕ ಜನರ ಪ್ರಾಣವನ್ನು ರಕ್ಷಣೆಗೆ ಮುಂದಾಗಿದ್ದನ್ನು ನೆನಪಿಸಿದರು.

ಕಾಂಗ್ರೆಸ್‌ ಸೇರುವ ಅವಶ್ಯಕತೆ ನನಗಿಲ್ಲ: ಪ್ರಧಾನಿ ಮೋದಿ ಅವರ ನಾಯಕತ್ವ ಹಾಗೂ ಬಿಜೆಪಿ ರಾಷ್ಟ್ರೀಯತೆ ತತ್ವ, ಸಿದ್ಧಾಂತಗಳನ್ನು ನಂಬಿ ನಾನು ಬಿಜೆಪಿ ಸೇರಿದ್ದೇನೆ. ಹಾಗಾಗಿ ಬಿಜೆಪಿ ತೊರೆಯುವ ಯೋಚನೆ ಇಲ್ಲ ಎಂದು ಮಾಜಿ ಸಚಿವ ಡಾ.ಕೆ.ಸುಧಾಕರ್‌ ಹೇಳಿದ್ದಾರೆ. ಮೂಲಕ ತಾವು ಕಾಂಗ್ರೆಸ್‌ ಸೇರುವ ಅಂತೆ ಕಂತೆಗಳಿಗೆ ತೆರೆ ಎಳೆದಿದ್ದಾರೆ. ಮಾಜಿ ಸಚಿವ ಡಾ.ಕೆ ಸುಧಾಕರ್ ಕಾಂಗ್ರೆಸ್​ಗೆ ವಾಪಸ್ ಆಗಲಿದ್ದಾರೆ ಎನ್ನುವ ಸುದ್ದಿ ಹರಿದಾಡುತ್ತಿರುವ ಕುರಿತು ಡಾ.ಸುಧಾಕರ್‌ ಅವರು ತಮ್ಮ ಎಕ್ಸ್ ಖಾತೆಯಲ್ಲಿ ಸ್ಪಷ್ಟನೆ ನೀಡಿದ್ದು, ಈಗ ಬಿಜೆಪಿ ತೊರೆಯುವ ಯೋಚನೆಯಾಗಲಿ, ಉದ್ದೇಶವಾಗಲಿ ಅಥವಾ ಅವಶ್ಯಕತೆಯಾಗಲಿ ನನಗಿಲ್ಲ ಎಂದು ತಿಳಿಸಿದ್ದಾರೆ.

ಬಿಜೆಪಿ ಅವಧಿಯ ಕಾಮಗಾರಿಗಳಿಗೆ ಕಾಂಗ್ರೆಸ್ ಲೇಬಲ್: ಎಂಟಿಬಿ ನಾಗರಾಜ್

ಡಾ.ಕೆ ಸುಧಾಕರ್ ವಿಧಾನಸಭೆ ಚುನಾವಣೆಯಲ್ಲಿ ಪರಾಭವಗೊಂಡ ನಂತರ ಇದೀಗ ಲೋಕಸಭಾ ಅಖಾಡಕ್ಕಿಳಿಯಲು ಸಜ್ಜಾಗಿದ್ದಾರೆ. ಈಗಾಗಲೇ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್ ರನ್ನು ಭೇಟಿಯಾದ ಬಳಿಕ ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಪಕ್ಷ ಸಂಘಟನೆ ಚುರುಕುಗೊಳಿಸಿದ್ದಾರೆ. ಇದರ ಮಧ್ಯೆ ಅವರು ಕಾಂಗ್ರೆಸ್​ಗೆ ವಾಪಸ್ ಆಗುತ್ತಾರೆನ್ನುವ ಸುದ್ದಿಹರಿದಾಡುತ್ತಿರುವ ಹಿನ್ನೆಲೆಯಲ್ಲಿ ಈ ಸ್ಪಷ್ಟನೆ ನೀಡಿದ್ದಾರೆ.

Latest Videos
Follow Us:
Download App:
  • android
  • ios