10 ಲಕ್ಷ ಮಂದಿಗೆ ಕೌಶಲ ತರಬೇತಿ: ಸಿ.ಎನ್.ಅಶ್ವತ್ಥನಾರಾಯಣ
ಯುವ ಜನತೆಗೆ ವಿದ್ಯಾರ್ಹತೆಗೆ ತಕ್ಕ ಉದ್ಯೋಗಾವಕಾಶಗಳು ಲಭ್ಯವಾಗುವಂತೆ ಮಾಡುವ ಸಲುವಾಗಿ ರಾಜ್ಯಾದ್ಯಂತ 10 ಲಕ್ಷ ಮಂದಿಗೆ ಕೌಶಲ ತರಬೇತಿ ನೀಡಲಾಗಿದೆ ಎಂದು ಉನ್ನತ ಶಿಕ್ಷಣ ಮತ್ತು ಕೌಶಲಾಭಿವೃದ್ಧಿ ಸಚಿವ ಡಾ. ಸಿ.ಎನ್.ಅಶ್ವತ್ಥನಾರಾಯಣ ತಿಳಿಸಿದ್ದಾರೆ.
ಬೆಂಗಳೂರು (ಆ.27): ಯುವ ಜನತೆಗೆ ವಿದ್ಯಾರ್ಹತೆಗೆ ತಕ್ಕ ಉದ್ಯೋಗಾವಕಾಶಗಳು ಲಭ್ಯವಾಗುವಂತೆ ಮಾಡುವ ಸಲುವಾಗಿ ರಾಜ್ಯಾದ್ಯಂತ 10 ಲಕ್ಷ ಮಂದಿಗೆ ಕೌಶಲ ತರಬೇತಿ ನೀಡಲಾಗಿದೆ ಎಂದು ಉನ್ನತ ಶಿಕ್ಷಣ ಮತ್ತು ಕೌಶಲಾಭಿವೃದ್ಧಿ ಸಚಿವ ಡಾ. ಸಿ.ಎನ್.ಅಶ್ವತ್ಥನಾರಾಯಣ ತಿಳಿಸಿದ್ದಾರೆ. ನಗರದ ಸರ್ಕಾರಿ ರಾಮನಾರಾಯಣ ಚೆಲ್ಲಾರಾಂ ವಾಣಿಜ್ಯ ಮತ್ತು ನಿರ್ವಹಣಾ ಕಾಲೇಜಿನಲ್ಲಿ (ಆರ್‌ಸಿ ಕಾಲೇಜು) ಕೌಶಲಾಭಿವೃದ್ಧಿ ನಿಗಮದ ವತಿಯಿಂದ ಶುಕ್ರವಾರ ಹಮ್ಮಿಕೊಂಡಿದ್ದ ಉದ್ಯೋಗ ಮೇಳ ’ಪ್ರಗತಿ ಪಥ’ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಸೂಕ್ತ ವಿದ್ಯಾಭ್ಯಾಸ, ತಕ್ಕ ಅರ್ಹತೆ ಮತ್ತು ಆಧುನಿಕ ಕೌಶಲಗಳು ಇದ್ದಲ್ಲಿ ಉದ್ಯೋಗಾವಕಾಶಗಳಿಗೆ ಬರವಿಲ್ಲ. ವಾಸ್ತವವಾಗಿ ಉದ್ಯಮ ರಂಗವು ಬಯಸುತ್ತಿರುವಷ್ಟುನುರಿತ ಮಾನವ ಸಂಪನ್ಮೂಲವನ್ನು ಪೂರೈಸಲು ಸಾಧ್ಯವಾಗುತ್ತಿಲ್ಲ. ಆದ್ದರಿಂದ ಕೌಶಲ ತರಬೇತಿ ನೀಡುವ ಮೂಲಕ ಯುವ ಜನತೆಯನ್ನು ಸಜ್ಜುಗೊಳಿಸಲಾಗುತ್ತಿದೆ ಎಂದು ಹೇಳಿದರು.
ಈ ಹಿಂದೆ ಇದ್ದಂತಹ ನೆಪ ಮಾತ್ರ ಪದವಿಗಳನ್ನು ಪ್ರಸ್ತುತ ಕೈ ಬಿಡಲಾಗಿದೆ. ಅಲ್ಲದೆ, ಸಮಕಾಲೀನ ಅಗತ್ಯಕ್ಕೆ ತಕ್ಕಂತೆ ಉನ್ನತ ಶಿಕ್ಷಣದಲ್ಲಿ ಪಠ್ಯಕ್ರಮವನ್ನು ಪರಿಷ್ಕರಣೆ ಮಾಡಲಾಗಿದೆ. ಜತೆಗೆ, ವಿನೂತನ ಮತ್ತು ವೈಜ್ಞಾನಿಕ ಮೌಲ್ಯಮಾಪನ ಪದ್ಧತಿ ಜಾರಿಗೆ ತರಲಾಗುತ್ತಿದೆ ಎಂದು ಅವರು ತಿಳಿಸಿದರು.
ಅಲ್ಲದೆ, ಯುವ ಜನರನ್ನು ಉದ್ಯೋಗಗಳಿಗೆ ಅರ್ಹರನ್ನಾಗಿ ಮಾಡಲು ಸರ್ಕಾರ ಸಿದ್ಧವಾಗಿದೆ. ಹೀಗಾಗಿ ಪದವಿ ಕೋರ್ಸ್‌ಗಳಲ್ಲಿ ಡಿಜಿಟಲ್, ಹಣಕಾಸು ಮತ್ತು ತಂತ್ರಜ್ಞಾನ ಸಾಕ್ಷರತೆಗಳನ್ನು ಕಡ್ಡಾಯಗೊಳಿಸಲಾಗಿದೆ ಎಂದು ಹೇಳಿದರು.
ಬೆಂಗಳೂರು ಮತ್ತು ಕರ್ನಾಟಕ ಇಂದು ಜಗತ್ತಿನಲ್ಲಿ ಮುಂಚೂಣಿಯಲ್ಲಿವೆ. ಇದಕ್ಕೆ ಇಲ್ಲಿರುವ ರಚನಾತ್ಮಕ ವಾತಾವರಣ ಕಾರಣವಾಗಿದೆ. ಶುಕ್ರವಾರ ನಡೆದ ಉದ್ಯೋಗ ಮೇಳದಲ್ಲಿ 200ಕ್ಕೂ ಹೆಚ್ಚು ಕಂಪನಿಗಳು ಭಾಗವಹಿಸಿದ್ದು, 5 ಸಾವಿರಕ್ಕೂ ಹೆಚ್ಚು ಉದ್ಯೋಗಾಕಾಂಕ್ಷಿಗಳು ಆನ್‌ಲೈನ್ ಮೂಲಕ ನೋಂದಣಿ ಮಾಡಿಕೊಂಡಿದ್ದ ಭಾಗಿಯಾಗಿದ್ದಾರೆ ಎಂದು ಸಚಿವರು ತಿಳಿಸಿದರು.
ಕಾರ್ಯಕ್ರಮದಲ್ಲಿ ಶಾಸಕ ರಿಜ್ವಾನ್ ಅರ್ಷದ್, ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಯ ಆಯುಕ್ತ ಪಿ.ಪ್ರದೀಪ್, ಜಿಲ್ಲಾ ಕೌಶಲಾಭಿವೃದ್ಧಿ ಅಧಿಕಾರಿ ಡಿ.ಎಲ್.ಕೃಷ್ಣಮೂರ್ತಿ, ಕಾಲೇಜು ಶಿಕ್ಷಣ ಇಲಾಖೆ ಜಂಟಿ ನಿರ್ದೇಶಕಿ ಡಾ ಎಸ್.ಶೈಲಜಾ, ರೋಟರಿ ಕ್ಲಬ್ ಆಫ್ ಬೆಂಗಳೂರು ಅಧ್ಯಕ್ಷ ಸಂಜಯ್ ಉದಾನಿ ಇದ್ದರು. ಕಾಲೇಜಿನ ಪ್ರಾಂಶುಪಾಲ ಡಾ ಬಿ.ಚಂದ್ರಶೇಖರ್ ಮತ್ತಿತರರಿದ್ದರು.
ನರೇಗಾ: ಐಇಸಿ ಸಂಯೋಜಕರ ಹುದ್ದೆಗೆ ಅರ್ಜಿ ಆಹ್ವಾನ
ಕಾರವಾರ: ಜಿಲ್ಲೆಯ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಖಾಲಿ ಇರುವ ಐಇಸಿ ಸಂಯೋಜಕರ ಹುದ್ದೆಗೆ ಒಂದು ವರ್ಷದ ಅವಧಿಗೆ ಹೊರಗುತ್ತಿಗೆ ಆಧಾರದ ಮೇಲೆ ಅರ್ಜಿ ಆಹ್ವಾನಿಸಲಾಗಿದೆ.
ಅರ್ಹ ಸಮೂಹ ಸಂವಹನ ವಿಷಯದಲ್ಲಿ ಸ್ನಾತಕೋತ್ತರ ಪದವಿ ಅಥವಾ ಸಮೂಹ ಸಂವಹನ ವಿಷಯದಲ್ಲಿ ಡಿಪ್ಲೋಮಾ ಜತೆಗೆ ಗಣಕಯಂತ್ರ ಜ್ಞಾನ, ಕನಿಷ್ಠ 2ರಿಂದ 3 ವರ್ಷದ ಅನುಭವ ಹೊಂದಿದ ಅಭ್ಯರ್ಥಿಗಳು ಜಿಪಂ ಆನ್‌ಲೈನ್ ವೆಬ್‌ಸೈಟ್ https://www.zpkarwar.kar.nic.in/ನಲ್ಲಿ ಸೆ.3ರೊಳಗೆ ಅರ್ಜಿ ಸಲ್ಲಿಸಬೇಕು.
ಸರ್ಕಾರಿ ಉದ್ಯೋಗಿಗಳೇ ಗಮನಿಸಿ, 7ನೇ ವೇತನ ಆಯೋಗದಡಿಯಲ್ಲಿ ದೊರೆತ ಸಂಬಳ ಬಾಕಿಗಿದೆ ತೆರಿಗೆ ಪರಿಹಾರ
ಗ್ರಾಮೀಣ ಅಭಿವೃದ್ಧಿ ಕ್ಷೇತ್ರದಲ್ಲಿ ಕೆಲಸ ನಿರ್ವಹಿಸಿದವರಿಗೆ ಮತ್ತು ಪೋಟೋಶಾಪ್, ಕೋರಲ್‌ಡ್ರಾ, ವಿಡೀಯೋ ಎಡಿಟಿಂಗ್ ಕೌಶಲ್ಯ ಹೊಂದಿದವರಿಗೆ ಆದ್ಯತೆ ನೀಡಲಾಗುವುದು.
ಹೈಬ್ರಿಡ್ ಮತ್ತು ವರ್ಕ್ ಫ್ರಂ ಹೋಂ ವ್ಯವಸ್ಥೆ ಭವಿಷ್ಯದ ಅಗತ್ಯ: ಪ್ರಧಾನಿ ಮೋದಿ
ಹೆಚ್ಚಿನ ಮಾಹಿತಿಗಾಗಿ ಕಚೇರಿ ದೂರವಾಣಿ ಸಂಖ್ಯೆ (08382) 226862 ಸಂಪರ್ಕಿಸಬಹುದಾಗಿದೆ ಎಂದು ಸಿಇಒ ಪ್ರಿಯಾಂಗಾ ಎಂ. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.