Jobs 2365.99 ಕೋಟಿ ರೂ. ಬಂಡವಾಳ ಆಕರ್ಷಿಸಿದ ಕರ್ನಾಟಕ, 10904 ಉದ್ಯೋಗ ಸೃಷ್ಟಿ
* ರಾಜ್ಯದಲ್ಲಿ ಒಟ್ಟು 10904 ಉದ್ಯೋಗ ಸೃಷ್ಟಿ
* ಬಂಡವಾಳ ಆಕರ್ಷಣೆಗೆ ಸಚಿವ ನಿರಾಣಿ ಅವರಿಂದ ವಿಶೇಷ ಪ್ರಯತ್ನ
* ದೇಶದಲ್ಲೇ ಕರ್ನಾಟಕವನ್ನು ಹೂಡಿಕೆಯಲ್ಲಿ ಪ್ರಥಮ ಸ್ಥಾನಕ್ಕೆ ಕೊಂಡೊಯ್ಯಲು ಪಣ
ಬೆಂಗಳೂರು, (ಫೆ.2): ರಾಜ್ಯಕ್ಕೆ ಹೆಚ್ಚಿನ ಬಂಡವಾಳ ಆಕರ್ಷಿಸಲು ನಿಟ್ಟಿನಲ್ಲಿ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ, ರಾಜ್ಯ ಮಟ್ಟದ ಏಕಗವಾಕ್ಷಿ ಸಮಿತಿಯಡಿ ಒಟ್ಟು 2367.99 ಕೋಟಿ ರೂ. ಮೊತ್ತದ 88 ಯೋಜನೆಗಳಿಗೆ ಅನುಮೋದನೆ ನೀಡಿದೆ.
ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಮುರುಗೇಶ ಆರ್ ನಿರಾಣಿ (Murugesh Nirani) ಅವರ ನೇತೃತ್ವದಲ್ಲಿ ಮಂಗಳವಾರ ಸಂಜೆ ನಡೆದ ರಾಜ್ಯ ಮಟ್ಟದ ಏಕಗವಾಕ್ಷಿ ಅನುಮೋದನಾ ಸಮಿತಿಯ ಸಭೆಯಲ್ಲಿ ಈ ಮಹತ್ವದ ತೀರ್ಮಾನವನ್ನುತೆಗೆದುಕೊಳ್ಳಲಾಯಿತು.
ಒಟ್ಟು 88 ಯೋಜನೆಗಳಿಂದ 2367.99 ಕೋಟಿ ರೂ. ಬಂಡವಾಳ ರಾಜ್ಯದಲ್ಲಿ ಹೂಡಿಕೆಯಾಲಿದ್ದು,ಇದರಿಂದ 10904 ಉದ್ಯೋಗಗಳು(Jobs) ಸೃಷ್ಟಿಯಾಗಲಿವೆ ಎಂದು ನಿರೀಕ್ಷಿಸಲಾಗಿದೆ.
50 ಕೋಟಿ ರೂಪಾಯಿಗೂ ಹೆಚ್ಚು ಬಂಡವಾಳ ಹೂಡಿಕೆಯ 7 ಬೃಹತ್ ಮತ್ತು ಮಧ್ಯಮ ಯೋಜನೆಗಳಿಗೆ ಸಮಿತಿ ಅನುಮೋದನೆ ನೀಡಿದ್ದು, ಒಟ್ಟು 799.1 ಕೋಟಿ ರೂ. ಬಂಡವಾಳ ಹೂಡಿಕೆಯಾಗಲಿದ್ದು, ಅಂದಾಜು 3237 ಜನರಿಗೆ ಉದ್ಯೋಗ ಲಭಿಸಲಿವೆ.
15 ಕೋಟಿರೂ. ಯಿಂದ ₹50 ಕೋಟಿ ಒಳಗಿನ ಬಂಡವಾಳ ಹೂಡಿಕೆಯ 78 ಯೋಜನೆಗಳಿಗೆ ಅನುಮೋದಿಸಿದ್ದು, ಒಟ್ಟು 1431.74 ಕೋಟಿ ರೂ. ಹೂಡಿಕೆ ಮಾಡಲಿದ್ದು,ಸುಮಾರು 7667 ಉದ್ಯೋಗಗಳು ಸೃಜನೆಯಾಗಲಿವೆ.
ಹೆಚ್ಚುವರಿ ಬಂಡವಾಳ ಹೂಡಿಕೆಯ 3 ಯೋಜನೆಗಳಿಗೆ ಏಕಗವಾಕ್ಷಿ ಸಮಿತಿಯು ₹ 137.15 ಕೋಟಿ ಬಂಡವಾಳ ಹೂಡಿಕೆಯಾಗಲಿದೆ.
ಸಚಿವ ಮುರುಗೇಶ್ ನಿರಾಣಿ ಅವರ ಕನಸು
ಕರ್ನಾಟಕವನ್ನು ಬಂಡವಾಳ ಹೂಡಿಕೆಯಲ್ಲಿ ದೇಶದಲ್ಲೇ ಮೊದಲ ಸ್ಥಾನಕ್ಕೆ ಕೊಂಡಯ್ಯಬೇಕು ಎಂಬುದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ಆರ್ ನಿರಾಣಿ ಅವರ ಬಹುದಿನಗಳ ಕನಸಾಗಿದೆ.
ಈಗಾಗಲೇ ವಿದೇಶಿ ನೇರ ಹೂಡಿಕೆ (ಎಫ್ ಡಿಐ)ನಲ್ಲಿ ಕರ್ನಾಟಕ ಮೊದಲ ತ್ರೈಮಾಸಿಕ ಅವಧಿಯಲ್ಲಿ ಮೊದಲ ಸ್ಥಾನಕ್ಕೆ ಬಂದಿದ್ದು, ಬಂಡವಾಳ ಹೂಡಿಕೆಯಲ್ಲೂ ಬೇರೆ ರಾಜ್ಯಗಳನ್ನು ಹಿಂದಿಕ್ಕಿ ಇಡೀ ದೇಶದಲ್ಲೇ ರಾಜ್ಯವನ್ನು ಪ್ರಥಮ ಸ್ಥಾನಕ್ಕೆ ತರಲು ಅವಿರತ ಪ್ರಯತ್ನ ನಡೆಸಿದ್ದಾರೆ.
ಬಂಡವಾಳ ಹೂಡಿಕೆಗೆ ಉದ್ಯಮಿಗಳನ್ನು ಆಹ್ವಾನಿಸಲಾಗುತ್ತದೆ. ಇದರಿಂದ ರಾಜ್ಯಕ್ಕೆ ದೊಡ್ಡ ಮೊತ್ತದ ಬಂಡವಾಳ ಹೂಡಿಕೆಯಾಗಲಿದ್ದು, ಭಾರೀ ಪ್ರಮಾಣದ ಉದ್ಯೋಗ ಸೃಷ್ಟಿಯಾಗಲಿವೆ.
ಸಭೆಯಲ್ಲಿ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ವಿ.ರಮಣರೆಡ್ಡಿ, ಇಲಾಖೆಯ ಆಯುಕ್ತೆ, ಗುಂಜನ್ ಕೃಷ್ಣ, ನಿದೇರ್ಶಕರುಗಳು ಸೇರಿದಂತೆ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.
ಅನುಮೋದನೆ ನೀಡಿರುವ ಯೋಜನೆಗಳು
ಮೆ.ಗುರುದತ್ತ ಇಂಟಿಗ್ರೇಟೆಡ್ ಟೆಕ್ಸ್ ಟೈಲ್ ಪಾಕ್೯ ಲಿ-357 ಕೋಟಿ ರೂ
ಮೆ. ಸ್ಪಾನ್ ಸುಲ್ಸ್ ಫಾರ್ಮುಲೇಷನ್ -96 ಕೋಟಿ ರೂ
ಮೆ.ರಿನಾಕ್ ಇಂಡಿಯಾ ಲಿಮಿಟೆಡ್- 80 ಕೋಟಿ ರೂ
ಮೆ. ಸನ್ವಿಕ್ ಸ್ಟೀಲ್ ಲಿಮಿಟೆಡ್-64 ಕೋಟಿ ರೂ
ಮೆ. ಹೆಚ್ ಅಂಡ್ ವಿ ಅಡ್ವಾನ್ಸಡ್ ಮೆಟೀರಿಯಲ್ ಇಂಡಿಯಾ ಪ್ರೆ,ಲಿಮಿಟೆಡ್-59.31 ಕೋಟಿ ರೂ
ಮೆ.ಎ .ಒನ್ ಟೆಕ್ಸ್ ಟೆಕ್ ಪ್ರೆ.ಲಿಮಿಟೆಡ್ -46.50 ಕೋಟಿ ರೂ
ಮೆ.ಟೆಕ್ಸ್ ಪೋಟ್೯ ಇಂಡಸ್ಟ್ರೀಸ್ ಪ್ರೆ.ಲಿಮಿಟೆಡ್-44.80 ಕೋಟಿ ರೂ
ಮೆ. ಕೇನಾಸ್ಸ್ ಟೆಕ್ನಾಲಜಿ ಇಂಡಿಯಾ ಪ್ರೆ.ಲಿಮಿಟೆಡ್-35 ಕೋಟಿ ರೂ