ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರದಲ್ಲಿ ಉದ್ಯೋಗ, ಇಂದೇ ಅರ್ಜಿ ಸಲ್ಲಿಸಿ
ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರ ಸ್ವಾಮ್ಯದ ಕಾರ್ಗೋ ಲಾಜಿಸ್ಟಿಕ್ಸ್ ಕಂಪನಿಯಲ್ಲಿ 436 ಸಹಾಯಕ (ಭದ್ರತೆ) ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಆಸಕ್ತ ಅಭ್ಯರ್ಥಿಗಳು ನವೆಂಬರ್ 15ರೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರ ಸ್ವಾಮ್ಯದ ಕಾರ್ಗೋ ಲಾಜಿಸ್ಟಿಕ್ಸ್ ಕಂಪನಿಯಲ್ಲಿ 436 ಸಹಾಯಕ (ಭದ್ರತೆ) ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಆಸಕ್ತ ಅಭ್ಯರ್ಥಿಗಳು ನವೆಂಬರ್ 15ರೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಏರ್ಪೋರ್ಟ್ಸ್ ಅಥಾರಿಟಿ ಆಫ್ ಇಂಡಿಯಾ (ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರ) ಸ್ವಾಮ್ಯದ ಕಾರ್ಗೋ ಲಾಜಿಸ್ಟಿಕ್ಸ್ ಕಂಪನಿಯಲ್ಲಿ ಖಾಲಿ ಇರುವ 436 ಸಹಾಯಕ (ಭದ್ರತೆ) ಹುದ್ದೆಯನ್ನು ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲು ಅಧಿಸೂಚನೆಯನ್ನು ಹೊರಡಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ನಿಗಮ ಮಂಡಳಿ ನೇಮಕಾತಿ 2ನೇ ಪರೀಕ್ಷೆಗೆ ವಸ್ತ್ರ ಸಂಹಿತೆ ಬಿಡುಗಡೆ, ಹಿಜಾಬ್ ಧರಿಸಬಹುದೇ?
ಹುದ್ದೆಯ ವಿವರ: ಸಹಾಯಕ (ಭದ್ರತೆ) 436 ಹುದ್ದೆ
ಪ್ರಮುಖ ದಿನಾಂಕಗಳು
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಮತ್ತು ಶುಲ್ಕ ಪಾವತಿಗೆ ಪ್ರಾರಂಭ ದಿನಾಂಕ: 20-10-2023
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಮತ್ತು ಶುಲ್ಕವನ್ನು ಪಾವತಿಸಲು ಕೊನೆಯ ದಿನಾಂಕ: 15-11-2023
ಅರ್ಜಿ ಶುಲ್ಕ ಎಷ್ಟು?
ಸಾಮಾನ್ಯ/ಓಬಿಸಿ ಅಭ್ಯರ್ಥಿಗಳಿಗೆ: ರೂ. 500
ಎಸ್ ಸಿ/ ಎಸ್ ಟಿ/ ಇಡಬ್ಲ್ಯೂಎಸ್ ಮತ್ತು ಮಹಿಳಾ ಅಭ್ಯರ್ಥಿಗಳಿಗೆ: ರೂ. 100
ವಯಸ್ಸಿನ ಮಿತಿ (01-10-2023 ರಂತೆ)
ಗರಿಷ್ಠ ವಯಸ್ಸಿನ ಮಿತಿ: 27 ವರ್ಷಗಳಿಗಿಂತ ಹೆಚ್ಚಿರಬಾರದು.
ಕೇಂದ್ರ ಶಿಕ್ಷಕರ ಅರ್ಹತಾ ಪರೀಕ್ಷೆಗೆ ಅರ್ಜಿ ಸಲ್ಲಿಸಲು ನವೆಂಬರ್ 23 ಕೊನೆಯ ದಿನ
ಶೈಕ್ಷಣಿಕ ವಿದ್ಯಾರ್ಹತೆ
ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ಪರೀಕ್ಷಾ ಮಂಡಳಿಯಿಂದ ದ್ವಿತೀಯ ಪಿಯುಸಿಯನ್ನು ಸಾಮಾನ್ಯ ವರ್ಗದವರು ಶೇಕಡಾ 60 ಅಂಕಗಳೊಂದಿಗೆ ಹಾಗೂ ಎಸ್ ಸಿ/ ಎಸ್ ಟಿ ವರ್ಗದವರು ಶೇಕಡಾ 55 ಅಂಕಗಳೊಂದಿಗೆ ತೇರ್ಗಡೆ ಹೊಂದಿರಬೇಕು.
ಉದ್ಯೋಗ ವಿವರ
ಈ ಮೇಲ್ಕಂಡ ನೇಮಕಾತಿಯಲ್ಲಿ ಆಯ್ಕೆಯಾದವರು ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರ ಸಾಮಾನು ನಿರ್ವಹಣೆ, ಸಾಮಾನು ಸರಂಜಾಮುಗಳನ್ನು ಲೋಡ್ ಮಾಡುವುದು ಮತ್ತು ಇಳಿಸುವುದು ಅಥವಾ ಇತರ ಬಹು- ಕಾರ್ಯಕಾರಿ ಕಾರ್ಯಾಚರಣೆಯ ಕಾರ್ಯಗಳನ್ನು ನಿರ್ವಹಿಸಬೇಕಾಗುತ್ತದೆ. ಜೊತೆಗೆ ಕೆಲಸವು ಕನ್ವೇಯರ್ ಬೆಲ್ಟ್ ಮತ್ತು ಎಕ್ಸ್‌ರೇ ಯಂತ್ರದಿಂದ ಸಾಮಾನುಗಳನ್ನು ಎತ್ತುವುದನ್ನು ಒಳಗೊಂಡಿರುತ್ತದೆ, ಆದ್ದರಿಂದ ಅಂತಹ ಕೆಲಸವನ್ನು ಮಾಡಲು ಇಚ್ಛಿಸದ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಅಗತ್ಯವಿಲ್ಲ.
ಪಾವತಿ ಮತ್ತು ಭತ್ಯೆಗಳು : ರೂ 21,500 (ಪ್ರತಿ ತಿಂಗಳಿಗೆ)
ಆಯ್ಕೆ ವಿಧಾನ
ಅಧಿಸೂಚನೆಯ ಅರ್ಹತಾ ಮಾನದಂಡಗಳನ್ನು ಪೂರೈಸುವ ಅಭ್ಯರ್ಥಿಗಳನ್ನು ಶಾರ್ಟ್‌ಲಿಸ್ಟ್ ಮಾಡಿ ಅಂತಹ ಅಭ್ಯರ್ಥಿಗಳನ್ನು ವೈಯಕ್ತಿಕವಾಗಿ ಸಂದಶರ್ನಕ್ಕೆ ಕರೆಯಲಾಗುವುದು. ನಂತರ ಅಂತಿಮ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗುವುದು.
ಹೆಚ್ಚಿನ ಮಾಹಿತಿಗಾಗಿ ವೆಬ್‌ಸೈಟ್ https://www.aai.aero/en/careers/recruitment ವೀಕ್ಷಿಸಿರಿ.