BMRCL Recruitment 2022: ನಮ್ಮ ಮೆಟ್ರೋದಲ್ಲಿ ಕೆಲಸ ಖಾಲಿ ಇದೆ, ಇಂದೇ ಅರ್ಜಿ ಹಾಕಿ
- ಬಿಎಂಆರ್‌ಸಿಎಲ್ ನಲ್ಲಿ ಖಾಲಿ ಇರುವ 50 ಹುದ್ದೆಗಳಿಗೆ ಅರ್ಜಿ ಆಹ್ವಾನ
- ಜನವರಿ 15, 2022 ಅರ್ಜಿ ಸಲ್ಲಿಸಲು ಕೊನೆಯ ದಿನ
- 5 ವರ್ಷಗಳ ಅವಧಿವರೆಗೆ ಗುತ್ತಿಗೆ ಆಧಾರದ ಮೇಲೆ ನೇಮಕ
ಬೆಂಗಳೂರು(ಡಿ7): ಬೆಂಗಳೂರು (Bengaluru) ಮೆಟ್ರೋ ರೈಲು ನಿಗಮ ನಿಯಮಿತ (Bengaluru Metro Rail Corporation Limited-BMRCL) ಗುತ್ತಿಗೆ ಆಧಾರದ ಮೇಲೆ ಕಾರ್ಯಾಚರಣೆ ಮತ್ತು ನಿರ್ವಹಣೆ ವಿಭಾಗದಲ್ಲಿ ಸ್ಟೇಷನ್ ಕಂಟ್ರೋಲರ್/ ರೈಲು ನಿರ್ವಾಹಕರ 50 ಹುದ್ದೆಗಳು ಖಾಲಿ ಇದ್ದು, ನೇಮಕಾತಿಗೆ ಅರ್ಜಿ ಆಹ್ವಾನಿಸಿದೆ. 5 ವರ್ಷಗಳ ಅವಧಿವರೆಗೆ ಗುತ್ತಿಗೆ ಆಧಾರದ ಮೇಲೆ ಅರ್ಹ ಮಾಜಿ ಸೈನಿಕ ಸಿಬ್ಬಂದಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಸ್ಟೇಷನ್ ಕಂಟ್ರೋಲರ್ /ಟ್ರೈನ್ ಆಪರೇಟರ್ (ಎಸ್‌ಸಿ/ಟಿಒ) ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದ್ದು ಆಸಕ್ತರು ಅರ್ಜಿ ಸಲ್ಲಿಸಬಹುದಾಗಿದೆ. 10ನೇ ತರಗತಿ, ಡಿಪ್ಲೋಮಾ ಪಾಸಾದ ಅಭ್ಯರ್ಥಿಗಳು ಆನ್ಲೈನ್(Online) ಮೂಲಕ ಅರ್ಜಿ ಸಲ್ಲಿಸಬೇಕು. ಜನವರಿ 15, 2022 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಬೆಂಗಳೂರು ಮೆಟ್ರೋದ ಅಧಿಕೃತ ವೆಬ್ಸೈಟ್ bmrc.co.in ಗೆ ಭೇಟಿ ನೀಡಲು ಕೋರಲಾಗಿದೆ.
ವಿದ್ಯಾರ್ಹತೆ-ಅರ್ಜಿ ಶುಲ್ಕ: ಟ್ರೇನ್ ಆಪರೇಟರ್, ಸ್ಟೇಷನ್ ಕಂಟ್ರೋಲರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಸಂಸ್ಥೆ/ಬೋರ್ಡ್ನಿಂದ ಕಡ್ಡಾಯವಾಗಿ 10ನೇ ತರಗತಿ ಮತ್ತು ಡಿಪ್ಲೋಮಾ ಪಾಸಾಗಿರಬೇಕು. ಇದು ನಿವೃತ್ತ ಮಿಲಿಟರಿ ಸಿಬ್ಬಂದಿಗೆ ಆಯೋಜಿಸಲಾಗಿರುವ ವಿಶೇಷ ನೇಮಕಾತಿಯಾಗಿದ್ದು, ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
ವಯೋಮಿತಿ ಮತ್ತು ಉದ್ಯೋಗ ಸ್ಥಳ: ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು ಗರಿಷ್ಠ 45 ವರ್ಷ ಮೀರಿರಬಾರದು. ಮತ್ತು ಆಯ್ಕೆಯಾದ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಉದ್ಯೋಗ ನೀಡಲಾಗುತ್ತದೆ.
RDPR RECRUITMENT 2022: ಪಂಚಾಯತ್ ರಾಜ್ ಇಲಾಖೆಯಲ್ಲಿನ ಒಂಬುಡ್ಸ್ ಮನ್ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ
ವೇತನ ಮತ್ತು ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ, ಶಾರ್ಟ್ಲಿಸ್ಟಿಂಗ್ ಮತ್ತು ದಾಖಲಾತಿ ಪರಿಶೀಲನೆ ಹಾಗೂ
ವೈಯಕ್ತಿಕ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ. ಮತ್ತು ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ 33,040 ರೂ ರಿಂದ 63,490ರೂ ವೇತನ ನಿಗದಿಯಾಗಿದೆ.
ONGC Recruitment 2022: ONGCಯಲ್ಲಿನ HR ಮತ್ತು PRO ಹುದ್ದೆಗಳಿಗೆ ಇಂದೇ ಅರ್ಜಿ ಸಲ್ಲಿಸಿ
BE, B Tech ಆದವರಿಗೆ BHELನಲ್ಲಿ ಉದ್ಯೋಗ: ಭಾರತ್ ಹೆವಿ ಎಲೆಕ್ಟ್ರಾನಿಕ್ಸ್ ಲಿಮಿಟೆಡ್(Bharat Heavy Electronics Limited ) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 15 ಪ್ರಾಜೆಕ್ಟ್ ಎಂಜಿನಿಯರ್(Project Engineer) ಹುದ್ದೆಗಳು ಖಾಲಿ ಇದ್ದು, ಬಿಇ, ಬಿ.ಟೆಕ್, ಬಿಎಸ್ಸಿ ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಡಿಸೆಂಬರ್ 6ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಅಭ್ಯರ್ಥಿಗಳು ಪೋಸ್ಟ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಡಿಸೆಂಬರ್ 24 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಭಾರತ್ ಹೆವಿ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ನ ಅಧಿಕೃತ ವೆಬ್ಸೈಟ್ bhel.com ಗೆ ಭೇಟಿ ನೀಡಬಹುದಾಗಿದೆ.
ESIC IMO Recruitment 2022: MBBS ಆದವರಿಗೆ ನೌಕರರ ರಾಜ್ಯ ವಿಮಾ ನಿಗಮದಲ್ಲಿ ಉದ್ಯೋಗ
ಆಯ್ಕೆಯಾದ ಅಭ್ಯರ್ಥಿಗಳು ಹೈದರಾಬಾದ್ ನಲ್ಲಿ ಕೆಲಸ ಮಾಡಬೇಕಾಗುತ್ತದೆ. ತಿಂಗಳಿಗೆ ₹ 35,000- 50,000 ಸಂಬಳ ನಿಗದಿಪಡಿಸಲಾಗಿದೆ. ಪ್ರಾಜೆಕ್ಟ್ ಎಂಜಿನಿಯರ್(Electronics)-6, ಪ್ರಾಜೆಕ್ಟ್ ಎಂಜಿನಿಯರ್ (Mechanical)-6, ಪ್ರಾಜೆಕ್ಟ್ ಎಂಜಿನಿಯರ್ (computer science)-3 ಹೀಗೆ ಒಟ್ಟು 15 ಹುದ್ದೆಗಳು ಖಾಲಿ ಇದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಲ್ಲಿ ಸಾಮಾನ್ಯ ವರ್ಗ- 28 ವರ್ಷ, ಒಬಿಸಿ- 31 ವರ್ಷ, SC/ST-33 ವರ್ಷ ವಯಸ್ಸು ಮೀರಿರಬಾರದು. ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಪೋಸ್ಟ್ ಮೂಲಕ ಕಳುಹಿಸಬೇಕು.
ಮ್ಯಾನೇಜರ್(HR)
ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್
ರವೀಂದ್ರನಾಥ್ ಠಾಗೂರ್ ರಸ್ತೆ
ಮಚಲಿಪಟ್ನಂ-521001
ಆಂಧ್ರ ಪ್ರದೇಶ